ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ


Team Udayavani, Oct 16, 2021, 9:54 AM IST

ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ʼಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ ಟರ್ಮಿನೇಟರ್‌ ಆಗಿ ಹೊರಹೊಮ್ಮಿದ್ದಾರೆ. ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ʼಸಿದ್ದಹಸ್ತ ಸೂತ್ರಧಾರಿʼಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ʼನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ ಎಂದಿದ್ದಾರೆ.

2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ʼಸಿದ್ದಸೂತ್ರʼ ಹಣೆದಿದ್ದು ಯಾರು?  ಈ ʼಸಿದ್ದಹಸ್ತರ ಸಿದ್ದಸೂತ್ರʼ ಅಲ್ಲಿಗೇ ನಿಲ್ಲುವುದಿಲ್ಲ. 2016ರಲ್ಲಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಅಧಿಕೃತ ಟಿಕೆಟ್ ಕೊಡುತ್ತದೆ. ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು? ಎಂದು ಎಚ್ ಡಿಕೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್‌ʼಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ. ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ. ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ. ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್‌ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ʼಕಿರಾತಕ ರಾಜಕಾರಣʼ ಮಾಡಿದಿರಿ. ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ ಜನತಾ ಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.