ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಕನ್ನಡಿಗರ ವಿರೋಧವಿದೆ: ಎಚ್ ಡಿ ಕುಮಾರಸ್ವಾಮಿ

Team Udayavani, Sep 14, 2020, 9:57 AM IST

ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಹಿಂದಿ ದಿವಸ್ ನ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದು ಕಿಡಿಕಾರಿದ್ದಾರೆ.

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು ಎಂದಿದ್ದಾರೆ.

ಇದನ್ನೂ ಓದಿ:ಇಂದಿನಿಂದ ಸಂಸತ್ತಿನ ಮುಂಗಾರು ಕಲಾಪ: ಕೋವಿಡ್ 19 ನಡುವೆ ಸುಗಮ ಅಧಿವೇಶನಕ್ಕೆ ಸಿದ್ಧತೆ

ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್‌ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ. 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ? ನಿರ್ಥಕ ಹಿಂದಿ ದಿವಸ ರದ್ದಾಗಬೇಕು. ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್‌ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು ಎಂದು ಎಚ್ ಡಿಕೆ ಹೇಳಿದ್ದಾರೆ.

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಗೊಂದಲಕಾರಿ ಅಂಶಗಳಿವೆ. ಇದೇ ಗುರಾಣಿ ಹಿಡಿದು ಹಿಂದಿ ಹೇರಿಕೆ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸಲೇ ಬಂದಿರುವ ಬಿಜೆಪಿಗರು, ಒಂದೊಳ್ಳೆ ಕಾರಣಕ್ಕಾಗಿ ಇದನ್ನು ಬದಲಿಸಲಿ. ಈ ಮೂಲಕ ಕನ್ನಡವೂ ಸೇರಿ ಅನ್ಯ ಭಾಷೆಗಳ ಅಸ್ಮಿತೆಯನ್ನು ರಕ್ಷಿಸಲಿ ಎಂದಿದ್ದಾರೆ.

ಇದನ್ನೂ ಓದಿ:ಕಿರುತೆರೆ, ಕ್ರಿಕೆಟ್‌ಗೂ ನಂಟು: ನಟಿಯರು, ಕ್ರಿಕೆಟಿಗರಿಗೂ ಫೈಜಲ್‌ ಪಾರ್ಟಿ

ಹಿಂದಿ ದಿವಸದಂತೇ, ತ್ರಿಭಾಷಾ ಸೂತ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಹಿಂದಿ ಹೇರಿಕೆಯ ಮಾರ್ಗವೇ. ದ್ವಿಭಾಷಾ ಸೂತ್ರವೇ ಇದ್ದರೆ ನಷ್ಟವೇನು? ಹಿಂದಿ ಮಾತನಾಡುವ ಯಾವ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದೆ? ಹಾಗಿದ್ದಮೇಲೆ ಹಿಂದಿಯೇತರ ರಾಜ್ಯಗಳಿಗೆ ಮಾತ್ರ ಏಕೆ ತ್ರಿಭಾಷಾ ಸೂತ್ರ? ಎನ್‌ಇಪಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರವೇ ಸರಿ. ಇದು ಸಮಗ್ರತೆಗೆ ಎಸೆದ ಸವಾಲು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ನಡತೆಯೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ. ಕನ್ನಡಿಗರ ಐತಿಹಾಸಿಕವಾದ ಮತ್ತೊಂದು ಗುಣ ಸಿಡಿದರೆ ಎಲ್ಲರೂ ತರಗೆಲೆಗಳೇ ಎಂದಿದ್ದಾರೆ.

ಇದನ್ನೂ ಓದಿ: ಶೀಘ್ರ 5 ಲಕ್ಷ ವಿದ್ಯಾರ್ಥಿಗಳಿಗೆ ಏಕಕಾಲಕ್ಕೆ ಡಿಜಿಟಲ್‌ ಪಾಠ: ಡಾ| ಅಶ್ವತ್ಥ ನಾರಾಯಣ

ಕಾವೇರಿಯಿಂದ ಗೋದಾವರಿವರೆಗೆ ಆಳಿದ, ಇಂದಿನ ಕರ್ನಾಟಕಕ್ಕಿಂತಲೂ ಹಲವು ಪಟ್ಟು ರಾಜ್ಯ ವಿಸ್ತರಣೆ ಮಾಡಿದ್ದ ಕನ್ನಡಿಗರಲ್ಲಿ ಶೌರ್ಯ, ಸ್ವಾಭಿಮಾನ ರಕ್ತಗತ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಕನ್ನಡಿಗರ ಈ ಚಾರಿತ್ರಿಕ ಗುಣ ಎದ್ದು ನಿಂತರೆ ಹಿಂದಿ ಹೇರಲು ಬರುವವರ ಕುತಂತ್ರಗಳು ಅಡಗಲಿದೆ ಎಂದು ಕುಮಾರಸ್ವಾಮಿ ತಮ್ಮ ಸರಣಿ ಟ್ವೀಟ್ ನಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.