
2023ರ ಚುನಾವಣೆಯಲ್ಲಿ ನೋಡೋಣ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ರೇವಣ್ಣ ಚಾಲೆಂಜ್
Team Udayavani, Sep 7, 2021, 5:02 PM IST

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಜೆಡಿಎಸ್ ಮುಳುಗುವ ಹಡಗು ಎಂದು ಹೇಳಿದ್ದಾರೆ. 2023ರ ಚುನಾವಣೆಯವರೆಗೂ ಈಗಿರುವ ಬಿಜೆಪಿ ಉಸ್ತುವಾರಿಯನ್ನೇ ಮುಂದುವರಿಸಿ ಎಂದು ಕೇಂದ್ರ ಬಿಜೆಪಿ ಮುಖಂಡರಲ್ಲಿ ಮನವಿ ಮಾಡುತ್ತೇನೆ. 2023ರ ಚುನಾವಣೆಯಲ್ಲಿ ಯಾರು ಮುಳುಗುತ್ತಾರೆಂದು ನೋಡೋಣ ಎಂದು ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು 60 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಏಳು ಬೀಳು ಎಲ್ಲವನ್ನೂ ನೋಡಿದ್ದಾರೆ. ಹಡಗುಗಳು ಮುಳುಗಿದಾಗ ಸಬ್ ಮೆರೀನ್ ಗಳು ಕೆಲಸ ಮಾಡುತ್ತವೆ. ಅದೇ ರೀತಿ ನಮ್ಮ ಜೆಡಿಎಸ್ ಪಕ್ಷ ಕೂಡಾ. ಹಡಗು ಮುಳುಗಿದರೂ ಕೆಲಸ ಮಾಡುವ ಮೆಷಿನರಿಯನ್ನು ಪಕ್ಷದಲ್ಲಿ ಇಟ್ಟುಕೊಂಡಿದ್ದೇವೆ. 2023ರ ಚುನಾವಣೆಯಲ್ಲಿ ನೋಡೋಣ ಎಂದರು.
ಇದನ್ನೂ ಓದಿ:ಕಲಬುರಗಿ ಪಾಲಿಕೆ: ದೋಸ್ತಿ ವಿಚಾರದಲ್ಲಿ ಸ್ಥಳೀಯರ ಮುಖಂಡರ ಮಾತಿಗೆ ಮನ್ನಣೆ ಎಂದ ಎಚ್ ಡಿಡಿ
ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡಿಲ್ಲವೆಂದು ಹೇಳಿದ್ದಾರೆ. ಎರಡು ವರ್ಷ ಏನು ದ್ವೇಷದ ರಾಜಕಾರಣ ಮಾಡಿದ್ದಾರೆ ಎಂದು ಅಸೆಂಬ್ಲಿಯಲ್ಲಿ ಹೇಳುತ್ತೇನೆ. ರಾಜ್ಯದ ಸಿಎಂ ಸೌಜನ್ಯದಿಂದ ದೇವೇಗೌಡರನ್ನು ನೋಡಲು ಬಂದಿದ್ದರು, ಗೌರವ ಕೊಟ್ಟಿದ್ದೇವೆ. ನಾವೇನಾದರೂ ಬಿಜೆಪಿ ಜೊತೆ ಸೇರುತ್ತೇವೆ ಅರ್ಜಿ ಹಾಕಿದ್ದೇವಾ ಎಂದು ರೇವಣ್ಣ ಗುಡುಗಿದರು.
ಕಲ್ಬುರ್ಗಿ ಪಾಲಿಕೆ ಅಧಿಕಾರ ವಿಚಾರವಾಗಿ ಮಾತನಾಡಿದ ಅವರು, ಖರ್ಗೆಯವರು ದೇವೇಗೌಡರ ಸಮಕಾಲೀನರು. ದೇವೇಗೌಡರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ನಾವು ಅದಕ್ಕೆ ಬದ್ಧ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್ ಮಾಡಿಸಿದ ಅಭಿಮಾನಿ

ಹೊಸ ಇನ್ನಿಂಗ್ಸ್ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ