
ಸಿದ್ದರಾಮಯ್ಯನವರೇ, ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ: ವಿಶ್ವನಾಥ್ ಕಿಡಿ
Team Udayavani, Jun 25, 2021, 11:33 AM IST

ಬೆಂಗಳೂರು: ಕಾಂಗ್ರೆಸ್ ನಲ್ಲಿ ‘ಸಿದ್ದರಾಮಯ್ಯ ಸಿಎಂ’ ಎಂಬ ಶಾಸಕರ ಹೇಳಿಕೆ, ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್, ಸಿದ್ದರಾಮಯ್ಯನವರೇ ಜಮೀರ್ ನ ಮುಂದಿಟ್ಟುಕೊಂಡು ಹೋಗಬೇಡಿ, ಒಳ್ಳೆದಾಗಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಷ್ಯಂದಿರು ಎಲ್ಲವನ್ನೂ ಮಾತನಾಡುತ್ತಾರೆ. ಶಿಷ್ಯಂದಿರು 150 ಸೀಟು ಬರುತ್ತದೆ ಎಂದು ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಯಾಕೆ 70ಕ್ಕೆ ಬಂದು ನಿಂತಿರಿ ಎಂದು ಟೀಕಿಸಿದರು.
ಸಿದ್ದರಾಮಯ್ಯಗೆ ಕ್ಷೇತ್ರವೇ ಇಲ್ಲ. ಒಬ್ಬ ಮಾಜಿ ಮುಖ್ಯಮಂತ್ರಿಯಾದವರು ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಇಂಥ ಪರಿಸ್ಥಿತಿ ಬರಬಾರದು. ಅವರೇ ಸಿಎಂ ಎನ್ನಲು ಇದು ‘ಟೂ ಅರ್ಲಿ’ ಎಂದು ಟೀಕಿಸಿದರು.
ಇದನ್ನೂ ಓದಿ;ಕಾಂಗ್ರೆಸ್: ಸಿಎಂ ಆಕಾಂಕ್ಷಿಗಳು ಹೆಚ್ಚಳ
ಸಿಎಂ ಸ್ಥಾನ ಪತ್ರಾವಳಿ ಅಲ್ಲ, ಸಿಎಂ ಸ್ಥಾನ ಉಂಡು ಬಿಸಾಡುವುದಲ್ಲ. ಅದನ್ನು ಸ್ವಚ್ಚವಾಗಿಟ್ಟು ಮುಂದೆ ಬರುವವರಿಗೆ ಅವಕಾಶ ಕೊಡಬೇಕು. ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದವರು, ಅವರಿಗೆ ಸಿಎಂ ಅವಕಾಶ ಕೊಟ್ಟಾಗಿದೆ. ಡಿ ಕೆ ಶಿವಕುಮಾರ್ ಅದೇ ಪಕ್ಷದಲ್ಲಿ ಇದ್ದವರು, ಅವರಿಗೆ ಅವಕಾಶ ಸಿಗಬೇಕು. ಒಂಸು ಸಲ ಸಿದ್ದರಾಮಯ್ಯ ಗೆ ಅವಕಾಶ ಸಿಕ್ಕಾಗಿದೆ. ಈಗ ಮಲ್ಲಿಕಾರ್ಜುನ ಖರ್ಗೆ ಇದಾರೆ, ಪರಮೇಶ್ವರ್ ಇದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಕಾಂಗ್ರೆಸ್ಸಿಗ ವಿಶ್ವನಾಥ್ ಟೀಕಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್ʼ ಹೊಸ ಪೋಸ್ಟರ್ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ