ತ್ಯಾಗಕ್ಕೆ ಬೆಲೆ ಇಲ್ಲ: ವಿಶ್ವನಾಥ್
Team Udayavani, Jan 14, 2021, 12:43 AM IST
ಮೈಸೂರು: ಮೈತ್ರಿ ಸರಕಾರದ ಪತನಕ್ಕೆ ಕಾರಣವಾದ 17 ಶಾಸಕರ ಭಿಕ್ಷೆಯಿಂದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿದೆ. ಆ ವೇಳೆ ನೀಡಿದ ಮಾತನ್ನು ಯಡಿಯೂರಪ್ಪ ಉಳಿಸಿಕೊಂಡಿಲ್ಲ. ನಮ್ಮ ತ್ಯಾಗಕ್ಕೆ ಬೆಲೆಯಿಲ್ಲದಂತಾಗಿದೆ. ಯಡಿಯೂರಪ್ಪ ತಮ್ಮ ನಾಲಗೆಯನ್ನು ಕಳೆದುಕೊಂಡಿದ್ದಾರೆ ಎಂದು ಎಂಎಲ್‌ಸಿ ಎಚ್. ವಿಶ್ವನಾಥ್ ಅವರು ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಸುದ್ದಿಗೋಷ್ಠಿ ನಡೆಸಿ ಅಸಮಾಧಾನ ಹೊರಹಾಕಿದ ಅವರು, ಕರ್ನಾಟಕದಲ್ಲಿ ಯಾವ ನಾಯಕನಿಗೂ ಕೃತಜ್ಞತೆ ಇಲ್ಲ. ಆ ಸಿದ್ದರಾಮಯ್ಯನನ್ನು ಕರೆದುಕೊಂಡು ಬಂದೆವು, ಅವರು ಕೃತಜ್ಞತೆ ಉಳಿಸಿಕೊಳ್ಳಲಿಲ್ಲ. ಯಡಿಯೂರಪ್ಪನವರಿಗಾಗಿ ತ್ಯಾಗ ಮಾಡಿದೆವು. ಅವರೂ ಮಾತು ಉಳಿಸಿಕೊಳ್ಳಲಿಲ್ಲ ಎಂದು ಕಿಡಿ ಕಾರಿದರು.
ಸಿಎಂ ಮನೆಯಲ್ಲಿ ಕುಟುಂಬ ರಾಜಕಾರಣ
ಯಡಿಯೂರಪ್ಪನವರ ಮನೆಯಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಸಿ.ಪಿ.ಯೋಗೇಶ್ವರ್ ಮಂತ್ರಿ ಆಗೋಕೆ ವಿಜಯೇಂದ್ರ ಕಾರಣ. ಯಡಿಯೂರಪ್ಪನವರ ಪ್ರತಿಷ್ಠೆ ನೆಲಸಮವಾಗಲೂ ವಿಜಯೇಂದ್ರ ಕಾರಣ. ಇಡೀ ವಿಧಾನಸೌಧದಲ್ಲಿ ಅಣ್ಣ ತಮ್ಮಂದಿರೇ ಕುಳಿತಿದ್ದಾರೆ. ಇದರಿಂದ ಯಡಿಯೂರಪ್ಪ ಸಂಪಾದಿಸಿದ್ದ ಹೆಸರು ಹಾಳಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444