ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ ಕುಮಾರ್ ಸಮಾಧಿಗೆ ಹಾಲು ತುಪ್ಪದ ಶಾಸ್ತ್ರ
Team Udayavani, Nov 2, 2021, 12:51 PM IST
ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಚಿರ ನಿದ್ರೆಗೆ ಜಾರಿರುವ ನಟ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಇಂದು ಬೆಳಿಗ್ಗೆ ಹಾಲು ತುಪ್ಪ ಅರ್ಪಿಸುವ ಕಾರ್ಯಕ್ರಮ ನೆರವೇರಿತು.
ನಟ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ 5 ದಿನಗಳಾಗಿದ್ದು, ಕುಟುಂಬದ ಸಂಪ್ರದಾಯದ ಪ್ರಕಾರ ಇಂದು ಬೆಳಿಗ್ಗೆ 10.30. ರ ಸುಮಾರಿಗೆ ಶಾಸ್ತೋಕ್ರವಾಗಿ ಸಮಾಧಿಗೆ ಹಾಲು ತುಪ್ಪ ಸಮರ್ಪಿಸಲಾಯಿತು.
ಸಹೋದರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್ ಪತ್ನಿ ಅಶ್ವಿನಿ, ಇಬ್ಬರು ಪುತ್ರಿಯರು, ಕುಟುಂಬ ವರ್ಗ ಸೇರಿದಂತೆ ಆಪ್ತ ಬಳಗ ಭಾಗಿಯಾಗಿತ್ತು.
ಇದನ್ನೂ ಓದಿ:ಅಪ್ಪು ಸಮಾಧಿಗೆ ಬಿಗಿ ಪೊಲೀಸ್ ಭದ್ರತೆ
ಇಂದು ಹಾಲು- ತುಪ್ಪ ಕಾರ್ಯದ ಹಿನ್ನೆಲೆಯಲ್ಲಿ ಅಪ್ಪು ಅಭಿಮಾನಿಗಳು ಸ್ಟುಡಿಯೋ ಮುಂದೆ ಜಮಾಯಿಸುತ್ತಿದ್ದು, ಆದರೆ ಪೊಲೀಸರು ವಾಪಸ್ಸು ಕಳುಹಿಸುತ್ತಿದ್ದಾರೆ. ಸ್ಟುಡಿಯೋದ ಸುತ್ತಮುತ್ತ ಬಿಗಿಭದ್ರತೆ ಏರ್ಪಡಿಸಲಾಗಿದ್ದು, ಭದ್ರತೆಗಾಗಿ ಸ್ಥಳೀಯ ಪೊಲೀಸರು,ಕೆಎಸ್ಆರ್ಪಿ ತುಕಡಿ, ಆರ್ಎಎಫ್ ಪೊಲೀಸರನ್ನು ನಿಯೋಜಿಸಲಾಗಿದೆ. ಇಂದಿನ ಕಾರ್ಯಕ್ರಮದ ನಂತರ ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ ಅವಕಾಶ ದೊರೆಯಲಿದೆ.
ಪುನೀತ್ ಅವರು ನಿಧನವಾದ ದಿನದಿಂದ ಅಂತ್ಯಕ್ರಿಯೆ ಮುಗಿಯುವವರೆಗೂ ಮೂರು ದಿನಗಳ ಕಾಲ ಸ್ಥಳದಲ್ಲಿಯೇ ಇದ್ದು ನಿರ್ವಹಣೆ ಮಾಡಿದ್ದ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ನಿಷ್ಠಾವಂತನಾದ ನನ್ನ ಸಚಿವ ಸ್ಥಾನ ಭದ್ರ: ಸಚಿವ ಪ್ರಭು ಚವ್ಹಾಣ್
ಮಸೀದಿ ಕುರಿತು ತಾಂಬೂಲ ಪ್ರಶ್ನೆ; ಬಿಜೆಪಿ ಈ ರಾಜ್ಯವನ್ನು ಕೊಲ್ಲುತ್ತಿದೆ :ಡಿಕೆಶಿ
ವಿಜಯೇಂದ್ರಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಇದೆ: ಬಿಎಸ್ ವೈ ವಿಶ್ವಾಸ
ಶಿಕ್ಷಣವನ್ನ ಮಾತ್ರವಲ್ಲ, ಎಲ್ಲವನ್ನೂ ಬದಲಾವಣೆ ಮಾಡಿದ್ದೇವೆ : ಬಿ.ಸಿ.ನಾಗೇಶ್
ಜಿ.ಪಂ., ತಾ.ಪಂ. ಕ್ಷೇತ್ರ ಪುನರ್ ವಿಂಗಡಣೆ,ಮೀಸಲಾತಿ ನಿಗದಿ: ಹೈಕೋರ್ಟ್ನಿಂದ 12 ವಾರಗಳ ಗಡು