ರೂಪಾ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
Team Udayavani, Jan 12, 2022, 6:30 AM IST
ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ನಿವೃತ್ತ ಡಿಜಿಪಿ ಎಚ್. ಎನ್. ಸತ್ಯನಾರಾಯಣ ರಾವ್ ದಾಖಲಿಸಿದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಾನನಷ್ಟ ಮೊಕದ್ದಮೆ ಸಂಬಂಧ ತಮ್ಮ ವಿರುದ್ಧದ ವಿಚಾರಣ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಡಿ.ರೂಪಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮುಂದಿನ ವಿಚಾರಣೆಯವರೆಗೆ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣ ನ್ಯಾಯಾ
ಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿ, ದೂರುದಾರ ಸತ್ಯನಾರಾಯಣ ರಾವ್‌ಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಮುಂದೂಡಿತು.