ಜಂತಕಲ್ ಕೇಸ್; ಜೂ.20ರವರೆಗೆ ಎಚ್ ಡಿಕೆ ಬಂಧಿಸ್ಬೇಡಿ; SITಗೆ ಹೈಕೋರ್ಟ್
Team Udayavani, Jun 15, 2017, 12:14 PM IST
ಬೆಂಗಳೂರು: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಏಕಸದಸ್ಯಪೀಠ ತಾತ್ಕಾಲಿಕ ರಿಲೀಫ್ ನೀಡಿದ್ದು, ಜೂನ್ 20ರವರೆಗೆ ಎಚ್ ಡಿಕೆ ಅವರನ್ನು ಬಂಧಿಸದಂತೆ ಎಸ್ ಐಟಿಗೆ ಗುರುವಾರ ಸೂಚನೆ ನೀಡಿದೆ.
ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾ.ರತ್ನಕಲಾ ಅವರು, ಜೂನ್ 19ರವರೆಗೆ ಕುಮಾರಸ್ವಾಮಿ ಅವರನ್ನು ಬಂಧಿಸದಂತೆ ಎಸ್ಐಟಿಗೆ ಆದೇಶ ನೀಡಿ, ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಜಂತಕಲ್ ಮೈನಿಂಗ್ ಗುತ್ತಿಗೆ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಎಸ್ಐಟಿ ವಿಶೇಷ ನ್ಯಾಯಾಲಯ ಕುಮಾರಸ್ವಾಮಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೇ 150 ಕೋಟಿ ರೂ. ಗಣಿ ಲಂಚ ಸ್ವೀಕರಿಸಿರುವುದಾಗಿ ಆರೋಪಿಸಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಎಸ್ಐಟಿಗೆ ಸಾಕ್ಷ್ಯಾಧಾರಗಳನ್ನು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ