ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬ: ಅಪ್ಪಾಜಿ ಕ್ಯಾಂಟೀನ್ ಗೆ ನಿಖಿಲ್ ಭೇಟಿ
1 ರೂಪಾಯಿಗೆ ರಾಗಿ ಮುದ್ದೆ ಊಟ ಇಂದಿನ ಸ್ಪೆಷಲ್
Team Udayavani, May 18, 2022, 4:47 PM IST
ಬೆಂಗಳೂರು: ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರಿನ ಹನುಮಂತನಗರದಲ್ಲಿರುವ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು. ಈ ವೇಳೆ ಕ್ಯಾಂಟೀನ್‌ಗೆ ಬಂದ ಗ್ರಾಹಕರಿಗೆ ಉಪಚರಿಸಿ ಊಟ ಬಡಿಸಿದರು.
ಕ್ಯಾಂಟೀನ್ ನಲ್ಲಿ ಕೇಕ್ ಕತ್ತರಿಸಿ ದೇವೇಗೌಡರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಮಧ್ಯಾಹ್ನದ ಭೋಜನವಾಗಿ ರಾಗಿಮುದ್ದೆಯನ್ನು ಅಪ್ಪಾಜಿ ಕ್ಯಾಂಟೀನ್ ನಲ್ಲಿಯೇ ನಿಖಿಲ್ ಸವಿದರು. ಬಳಿಕ ಕ್ಯಾಂಟೀನ್ ಸಿಬ್ಬಂದಿಗಳ ಜೊತೆ ಕೆಲಹೊತ್ತು ನಿಖಿಲ್ ಕುಮಾರಸ್ವಾಮಿ ಕಾಲ ಕಳೆದರು. ದೇವೇಗೌಡರ ವಿಚಾರಗಳನ್ನ ಅರ್ಥ ಮಾಡಿಕೊಂಡು ಕಳೆದ 5 ವರ್ಷಗಳಿಂದ ಬೆಂಗಳೂರಿನಲ್ಲಿ ಕಡಿಮೆ ಹಣಕ್ಕೆ ಊಟ ವಿತರಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಆಟೋ ಚಾಲಕರು, ಕಾರ್ಮಿಕರು ಬದುಕು ಸಾಗಿಸುವುದೇ ಕಷ್ಟವಾಗಿದೆ. ಇದನ್ನು ಗಮನದಟ್ಟಿಕೊಂಡು 10 ರೂಪಾಯಿಗೆ ರಾಜ್ಯ ಜೆಡಿಎಸ್ ವಕ್ತಾರರಾದ ಟಿ.ಎ. ಶರವಣ ಅವರು ಅನ್ನದಾಸೋಹ ನಡೆಸುತ್ತಿದ್ದಾರೆ. ಇದು ಹೀಗೆಯೇ ನಿರಂತರವಾಗಿ ಮುಂದುವರೆಯಲಿ ಎಂದು ಹಾರೈಸಿದರು.
ಇದನ್ನೂ ಓದಿ : ಮುಂದಿನ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧಿಸುವುದು ಖಚಿತ : ರುದ್ರಮುನಿ ಸ್ವಾಮೀಜಿ
ಈ ವೇಳೆ ವಿಧಾನ ಪರಿಷತ್ ಮಾಜಿ ಶಾಸಕರು ಹಾಗು ರಾಜ್ಯ ಜೆಡಿಎಸ್ ವಕ್ತಾರರಾದ ಟಿ.ಎ. ಶರವಣ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಾಜರಿದ್ದರು. ಇಂದು ವಿಶೇಷವಾಗಿ ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಕ್ಯಾಂಟೀನ್ ನಲ್ಲಿ 1 ರೂಪಾಯಿಗೆ ಊಟ ವಿತರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಗರಪುರದ ಕಚೇರಿ ಮೇಲೆ ಆರೆಸ್ಸೆಸ್ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ : ಸಿದ್ದು
ಮನೆ ಗೋಡೆ ಕುಸಿದು ಯುವಕ ಸಾವು : ಕೆಲ ದಿನದ ಹಿಂದಷ್ಟೇ ಹೆರಿಗೆಯಾಗಿದ್ದ ತಾಯಿ, ಮಗು ಪಾರು
ಗಾಳಿ ಮಳೆಯ ಅಬ್ಬರ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ
ಮಲೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ : ಮನೆಯ ಮೇಲೆ ಮರ ಬಿದ್ದು ಇಬ್ಬರು ಸಾವು
ರಾಜ್ಯದಲ್ಲಿ ಹೆಚ್ಚುತ್ತಿದೆ ಹನಿಟ್ರ್ಯಾಪ್ ಹಾವಳಿ: ಉದ್ಯಮಿ,ರಾಜಕಾರಣಿಗಳೇ ಟಾರ್ಗೆಟ್
MUST WATCH
ಹೊಸ ಸೇರ್ಪಡೆ
ನಾಗರಪುರದ ಕಚೇರಿ ಮೇಲೆ ಆರೆಸ್ಸೆಸ್ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ : ಸಿದ್ದು
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ
ಮನೆ ಗೋಡೆ ಕುಸಿದು ಯುವಕ ಸಾವು : ಕೆಲ ದಿನದ ಹಿಂದಷ್ಟೇ ಹೆರಿಗೆಯಾಗಿದ್ದ ತಾಯಿ, ಮಗು ಪಾರು
ಗಾಳಿ ಮಳೆಯ ಅಬ್ಬರ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ
ಫಾಝಿಲ್ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ