ಸಿದ್ದು-ಡಿಕೆಶಿಗೆ ಎಚ್ಡಿಡಿ, ಎಚ್ಡಿಕೆ ಅಭಿನಂದನೆ
Team Udayavani, May 21, 2023, 5:47 AM IST
ಬೆಂಗಳೂರು: ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ.ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಟ್ವೀಟ್ ಮೂಲಕ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಇಬ್ಬರೂ ಜತೆಗೂಡಿ ರಾಜ್ಯದ ಜನತೆಯ ಒಳಿತಿಗೆ ಕೆಲಸ ಮಾಡಲಿ ಎಂದು ಹಾರೈಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಮತ್ತು ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಹೇಳಿದ್ದಾರೆ.
ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್