ಪಿಎಫ್ಐ ಮೇಲೆ ದಾಳಿ: ಜನರ ಮುಂದೆ ದಾಳಿಯ ಸತ್ಯಾಂಶ ಇಡಬೇಕು; ಹೆಚ್.ಡಿ.ಕುಮಾರಸ್ವಾಮಿ

Team Udayavani, Sep 27, 2022, 6:44 PM IST

ಪಿಎಫ್ಐ ಮೇಲೆ ದಾಳಿ: ಜನರ ಮುಂದೆ ದಾಳಿಯ ಸತ್ಯಾಂಶ ಇಡಬೇಕು; ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪಿಎಫ್ಐ ಸಂಘಟನೆ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿ ಆ ಸಂಘಟನೆಯ ಹಲವರನ್ನು ಬಂಧಿಸಿದ್ದು, ಆ ಬಗ್ಗೆ ರಾಜ್ಯದ ಜನತೆಯ ಮುಂದೆ ವಾಸ್ತವಾಂಶ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು,ರಾಜ್ಯ ಸರಕಾರದ ಮೇಲೆ ಅನೇಕ ಆರೋಪಗಳಿವೆ. ನಾನು ಸ್ವತಃ ಬಿಎಂಎಸ್ ಶಿಕ್ಷಣ ಟ್ರಸ್ಟ್ ನಲ್ಲಿ ನಡೆದಿರುವ ಅಕ್ರಮ ಬಗ್ಗೆ ಸದನದಲ್ಲಿಯೇ ದಾಖಲೆಗಳ ಸಮೇತ ಮಾಹಿತಿ ನೀಡಿದ್ದೆ. ಇದಲ್ಲದೆ, ಅನೇಕ ಹಗರಣ, ಅಕ್ರಮಗಳ ಬಗ್ಗೆ ಜನರು ರೋಸಿ ಹೋಗಿದ್ದಾರೆ. ಒಂದು ವೇಳೆ ಪಿಎಫ್ಐ ಮೇಲೆ ನಡೆದಿರುವ ದಾಳಿ ಕುರಿತು ನೈಜ ಮಾಹಿತಿ ಕೊಡದಿದ್ದರೆ, ಆರೋಪ ಮತ್ತು ಹಗರಣಗಳ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲು ಈ ದಾಳಿ ನಡೆಸಲಾಗಿದೆ ಎಂದು ಭಾವಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಎರಡು ದಿನಗಳಿಂದ ಕರ್ನಾಟಕವೂ ಸೇರಿ ರಾಷ್ಟ್ರಮಟ್ಟದಲ್ಲಿ ಪಿಎಫ್ಐ ಮೇಲೆ ಎನ್‌ ಐಎ ನಿಂದ ದಾಳಿ ಆಗಿತ್ತು. ಆ ದಾಳಿ ಸಮಯದಲ್ಲಿ ಪಿಎಫ್ಐ ಸಂಘಟನೆಗಳ ವ್ಯಕ್ತಿಗಳ ಬಂಧನವೂ ಆಗಿತ್ತು. ಮತ್ತೆ ಕಳೆದ ರಾತ್ರಿ ರಾಜ್ಯದ ನಾನಾ ಭಾಗದಲ್ಲಿ ಮಧ್ಯರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದರು ಕುಮಾರಸ್ವಾಮಿ ಅವರು.

ರಾಜ್ಯ ಪೊಲೀಸರು ನಡೆಸಿದ ದಾಳಿಯಲ್ಲಿ ಸಂಘಟನೆಯ ಕಾರ್ಯಕರ್ತರು, ಜಿಲ್ಲಾ ಅಧ್ಯಕ್ಷರ‌ ಬಂಧನವಾಗಿದೆ. ಮಧ್ಯರಾತ್ರಿಯಲ್ಲಿ ಕಾರ್ಯಾಚರಣೆ ಎನ್ನುವುದು ಸರಕಾರದ ಆದೇಶವೋ ಅಥವಾ ಪೊಲೀಸರ ಮಾಹಿತಿ ಆಧಾರದ ದಾಳಿಯ ಆಗಿದೆಯೋ ಗೊತ್ತಿಲ್ಲ. ಆದರೆ, ಕಾರ್ಯಾಚರಣೆ ಬಗ್ಗೆ ನಾಡಿನ ಜನರ ಮುಂದೆ ನಿಜವಾದ ವಾಸ್ತವವಾದ ಅಂಶ ಸರಕಾರ ಇಡಬೇಕು ಎಂದು ಅವರು ಆಗ್ರಹಪಡಿಸಿದರು.

ಇದನ್ನೂ ಓದಿ: ಪುಳಕಿತ್ ರೆಸಾರ್ಟ್ ವೇಶ್ಯಾವಾಟಿಕೆ ಮತ್ತು ಡ್ರಗ್ಸ್ ದಂಧೆಯ ಅಡ್ಡೆಯಾಗಿತ್ತು; ಮಾಜಿ ಉದ್ಯೋಗಿ

ಏಕಾಏಕಿ ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಯಾವುದೇ ಸಮಾಜದ ಮೇಲೆ ಅತಂಕ, ಭಯ ಸೃಷ್ಟಿ ಆಗಬಾರದು. ಇತ್ತೀಚೆಗೆ ಅನೇಕ ಸಂಘಟನೆಗಳು ತಮ್ಮ ಅಜೆಂಡಾ ಪೂರೈಸಲು ಕೆಲಸ ಮಾಡುತ್ತಿವೆ. ಅವುಗಳಿಗೆ ಅರ್ಥಿಕ ಶಕ್ತಿ ಹೇಗೆ ಬರ್ತಿದೆ? ಕೆಲ ಘಟನೆಗಳ ಹಿಂದೆ ಯಾವ ಸಂಘಟನೆಗಳಿವೆ ಎನ್ನುವುದನ್ನು ತನಿಖೆಯಿಂದ ಹೊರಬರಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕಳೆದ ರಾತ್ರಿ ಏಕಾಏಕಿ ದಾಳಿ ಆಗಿರೋದು‌ ಸಣ್ಣ ಪುಟ್ಟ ಕಾರ್ಯಕರ್ತರಿಗೆ ಆತಂಕ ಉಂಟು ಮಾಡಿದೆ ಎನ್ನುವುದು ನಿಜ. ಈ ದಾಳಿಯ ವೇಳೆ ಏನು ಸಿಕ್ಕಿದೆ. ಯಾವ ದಾಖಲೆ ಇದೆ  ಎಂಬುದನ್ನು ಜನರ ಮುಂದೆ ಇಡಬೇಕು. ದಾಳಿಯ ಬಗ್ಗೆ ಸತ್ಯ ಹೇಳದೇ ಹೋದರೆ ಕಾಂಗ್ರೆಸ್ ನ ಪೇ‌ ಸಿಎಂ ಅಭಿಯಾನ ಡೈವರ್ಟ್ ಮಾಡೋಕೆ ಸರಕಾರ ಹೀಗೆ ಮಾಡಿದೆ ಎಂಬ  ಅನುಮಾನ ಜನರಿಗೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದರು.

ನಿಜವಾಗಿಯೂ ಸಮಾಜಘಾತುಕ ಶಕ್ತಿ ಬಗ್ಗೆ ಮಾಹಿತಿ ಇದ್ದರೆ  ಜನರ ಮುಂದೆ ಇಡಬೇಕು. ನೆಪಗಳನ್ನು ಹೇಳಿ ಸರಕಾರ ನುಣುಚಿಕೊಳ್ಳಬಾರದು. ವಾಸ್ತವ ಅಂಶಗಳನ್ನು ಜನರ ಮುಂದೆ ಸರಕಾರ ಇಡಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಇದನ್ನೂ ಓದಿ: ಆಲಿಯಾ ಪಕ್ಕದಲ್ಲಿ ಮಲಗುವಾಗ ನಿಜಕ್ಕೂ ಕಷ್ಟವಾಗುತ್ತದೆ..! ತನ್ನ‌ ಕಷ್ಟ ಹೇಳಿದ ಪತಿ ರಣ್ಬೀರ್

ಮಧ್ಯರಾತ್ರಿ ಕಾರ್ಯಾಚರಣೆಯಲ್ಲಿ ಯಾರು ಯಾರನ್ನು  ಬಂಧನ ಮಾಡಿದ್ದಾರೆ. ಅವರ ಸಮಾಜಘಾತುಕ ಕೆಲಸ ಏನು? ಎಂಬುದನ್ನು ಅಂತ ಸರಕಾರ ಜನರ ಮುಂದೆ ಇಡದೇ ಹೋದರೆ, ಸರಕಾರವೇ ಅನುಮಾನಗಳಿಗೆ ಎಡೆ ಮಾಡಿಕೊಟ್ಟಂತೆ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಮಾಜಿ ಶಾಸಕರಾದ ಹೆಚ್.ಎಂ.ರಮೇಶ್ ಗೌಡ, ಶಾರದಾ ಪೂರ್ಯ ನಾಯಕ್, ತಿಮ್ಮರಾಯಪ್ಪ ಹಾಗೂ ಹಿರಿಯ ಮುಖಂಡ ಹರಿಹರದ ಶಿವಶಂಕರ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.