ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ : ಹೆಚ್ ಡಿಕೆ

Team Udayavani, Apr 21, 2021, 3:48 PM IST

ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ : ಹೆಚ್ ಡಿಕೆ

ಬೆಂಗಳೂರು : ಸರ್ಕಾರ ಕೋವಿಡ್ ಸೋಂಕನ್ನು ನಿಯಂತ್ರಣ ಮಾಡಲು ಹಲವರು ಕ್ರಮಗಳನ್ನು, ಮ್ಯಾರಾಥಾನ್ ಸಭೆಗಳನ್ನು ಮಾಡಿ, ವಿಪಕ್ಷಗಳ ಸಲಹೆ ಪಡೆದಿದೆ. ಆದರೆ ಕೋವಿಡ್  ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎನ್ನುವುನ್ನು ಹೇಳಬೇಕೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಈ ಕುರಿತು ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ಟ್ವೀಟ್ ವೊಂದರಲ್ಲಿ, ಮಂಗಳವಾರದ ಸಭೆಯ ನಂತರ ಜನರಿಗೆ ಕೇವಲ ಮಾರ್ಗಸೂಚಿಗಳನ್ನು ಮಾತ್ರ ಸೂಚಿಸಲಾಯಿತು. ಸೋಂಕಿನಿಂದ ದೂರ ಇರುವ ಸಲಹೆ ನೀಡಲಾಯಿತು. ಆದರೆ, ಈಗಾಗಲೇ ಅಸ್ಪತ್ರೆಗಳಲ್ಲಿರುವವರ ರಕ್ಷಣೆಗಾಗಿ ಏನು ಮಾಡಲಾಗಿದೆ, ಏನೇನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಭೆಯ ನಂತರ ಸರ್ಕಾರ ಹೇಳಿಲ್ಲ ಏಕೆ? ಸೋಂಕಿತರ ಪರಿಸ್ಥಿತಿಯನ್ನು ಸರ್ಕಾರ ಅರಿತಿಲ್ಲ ಏಕೆ? ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಕೋವಿಡ್‌ನ ಎರಡನೇ ಅಲೆ ಬರುವುದಾಗಿ ಸರ್ಕಾರಕ್ಕೆ ತಜ್ಞರು, ವಿಪಕ್ಷ ನಾಯಕರು ಹೇಳುತ್ತಲೇ ಬಂದಿದ್ದಾರೆ. ವರದಿಗಳನ್ನು ಪಡೆದುಕೊಂಡ ಸರ್ಕಾರ ಈ ವರೆಗೆ ಏನು ಮಾಡಿಕೊಂಡಿತ್ತು? ಕೋವಿಡ್‌ ಬಂದಿದ್ದು ಒಂದೂವರೆ ವರ್ಷಗಳ ಹಿಂದೆ. ಮುಂದೊಂದು ದಿನ ರಾಕ್ಷಸ ರೂಪಿಯಾಗಬಹುದಾದ ಈ ರೋಗದ ವಿರುದ್ಧ ಸರ್ಕಾರ ಈ ವರೆಗೆ ಮಾಡಿಕೊಂಡ ಸಿದ್ಧತೆಗಳು ಏನಾಗಿದ್ದವು? ಎಂದು ಪ್ರಶ್ನಿಸಿದ್ದಾರೆ.

ಕೋವಿಡ್‌ ಚಿಕಿತ್ಸೆಗೆ ಅಗತ್ಯವಿರುವ ಔಷಧ, ಪರಿಕರಗಳ ಅಭಾವದ ಬಗ್ಗೆ ನಾನು ಈಗಾಗಲೇ ಮಾತಾಡಿದ್ದೇನೆ. ಎಚ್ಚರಿಕೆಯನ್ನೂ ನೀಡಿದ್ದೇನೆ. ಇದರ ಬಗ್ಗೆ ಏನು ಕ್ರಮ ಕೈಗೊಂಡಿದೆ ಸರ್ಕಾರ? ಚಿಕಿತ್ಸೆಯೇ ದುರ್ಬರವಾಗುತ್ತಿರುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಈ ಹಂತದಲ್ಲಿ ಕುಗ್ಗಿ ಹೋಗಿರುವ ಜನರಲ್ಲಿ ವಿಶ್ವಾಸ ಮೂಡಿಸಲು ಸರ್ಕಾರ ಕ್ರಮ ಕೈಗೊಂಡಿದೆಯೇ? ಎಂದಿದ್ದಾರೆ.

ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ.ಚಿಂತಾಜನಕ ಪರಿಸ್ಥಿತಿಯಲ್ಲಿರುವ ಸೋಂಕಿತರಿಗೆ ಆಮ್ಲಜನಕ ಸಿಗುತ್ತಿಲ್ಲ. ರೆಮ್‌ಡಿಸಿವಿರ್‌ ಔಷಧವೂ ಸಿಗುತ್ತಿಲ್ಲ ಎಂಬುದರ ಬಗ್ಗೆ ಕೆಲವು ದಿನಗಳಿಂದ ಎಚ್ಚರಿಸುತ್ತಲೇ ಬಂದಿದ್ದೇನೆ. ಅತ್ಯಗತ್ಯವಾಗಿರುವ ಈ ಸವಲತ್ತುಗಳನ್ನು ಸರ್ಕಾರ ಹೊಂದಿಸುವ ಪ್ರಯತ್ನ ಮಾಡಿದೆಯೇ? ಇದನ್ನು ಮೊದಲು ಹೇಳಲಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಒಂದೆಡೆ ಸೂಕ್ತ ಚಿಕಿತ್ಸೆ ಸಿಗದೇ ಸೋಂಕಿತರು ಪರದಾಡುತ್ತಿದ್ದಾರೆ. ಆರೋಗ್ಯ ಸೇವೆ ಒದಗಿಸಲಾಗದ ಸರ್ಕಾರದ ದೈನೇಸಿ ಸ್ಥಿತಿಯ ಬಗ್ಗೆ ಜನರು ಆತಂಕಗೊಂಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕಲ್ಲವೇ? ಜನರ ರಕ್ಷಣೆಗಾಗಿ ಮಾಡಿಕೊಂಡಿರುವ ಆರೋಗ್ಯ ವ್ಯವಸ್ಥೆಯ ಬಗ್ಗೆ ಸರ್ಕಾರ ಹೇಳಬೇಕಲ್ಲವೇ? ಎಂದು ಟ್ವೀಟ್ ಮಾಡಿದ್ದಾರೆ.

‘ಜನರನ್ನು ಯಾವುದೇ ಹಂತದಲ್ಲಿ ಸರ್ಕಾರ ರಕ್ಷಣೆ ಮಾಡುತ್ತದೆ. ಅವರ ಜೀವಕ್ಕೆ ಆಧಾರವಾಗಿರುತ್ತದೆ,’ ಎಂಬ ವಿಶ್ವಾಸವನ್ನು ತುಂಬುವುದು ಅಗತ್ಯ. ಅದು ಬಿಟ್ಟು ಯಾವುದೇ ಕಠಿಣ ಕ್ರಮಗಳನ್ನು ಕೈಗೊಂಡರೂ ಅದು ನಗಣ್ಯ. ಈ ವಿಷಯವನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು. ಆರೋಗ್ಯ ವ್ಯವಸ್ಥೆಯ ಕೊರತೆ ನೀಗಿಸುವ ಕ್ರಮಗಳ ಬಗ್ಗೆ ಸರ್ಕಾರ ಮಾತಾಡಬೇಕು ಎಂದಿದ್ದಾರೆ.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.