ಉ.ಕರ್ನಾಟಕದ 7 ಜಿಲ್ಲೆಗೆ ಉಷ್ಣ ಅಲೆ ಎಚ್ಚರಿಕೆ; ಎ.9ಕ್ಕೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಮೊದಲ ಬಾರಿ 38.3 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲು

Team Udayavani, Apr 6, 2024, 12:44 PM IST

8-

ಬೆಂಗಳೂರು: ಬಾಗಲಕೋಟೆ, ಕಲಬುರಗಿ, ಹಾವೇರಿ, ಧಾರವಾಡ, ಕೊಪ್ಪಳ, ಬಳ್ಳಾರಿ ಮತ್ತು ಗದಗ ಜಿಲ್ಲೆಗಳಲ್ಲಿ ಶನಿವಾರ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2024ರಲ್ಲಿ ಇದೇ ಮೊದಲ ಬಾರಿಗೆ ಶುಕ್ರವಾರ ಬರೋಬ್ಬರಿ 38.3 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗಾಳಿ ಸ್ಥಗಿತವು ಈಗ ಪೂರ್ವ ವಿದರ್ಭದಿಂದ ಕೊಮೊರಿನ್‌ ಪ್ರದೇಶದವರೆಗೆ ಕರ್ನಾಟಕದ ಒಳಭಾಗ ಮತ್ತು ತಮಿಳುನಾಡಿನ ಒಳಭಾಗದವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿಮೀ ಎತ್ತರದಲ್ಲಿದೆ. ಕರಾವಳಿ ಕರ್ನಾಟಕದಲ್ಲಿ 33 ರಿಂದ 36 ಡಿ.ಸೆ. ವರೆಗೆ ತಾಪಮಾನ ದಾಖಲಾದರೆ, ಉತ್ತರ ಒಳನಾಡಿನಲ್ಲಿ ಸರಾಸರಿ ತಾಪಮಾನವು 37 ರಿಂದ 43 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿವೆ. ಮುಂದಿನ 2 ದಿನಗಳಲ್ಲಿ ಕರಾವಳಿಯ ಹಲವು ಕಡೆ ವಾಡಿಕೆಗಿಂತ 2 ಡಿ.ಸೆ. ತಾಪಮಾನ ಹೆಚ್ಚಾಗಲಿದೆ.

ಮುಂದಿನ 5 ದಿನಗಳಲ್ಲಿ ಬೆಳಗಾವಿ, ವಿಜಯಪುರ, ಬೀದರ್‌, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕ್ರಮೇಣ 2-4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಗದಗ, ಕೊಪ್ಪಳ, ಕಲಬುರಗಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆದ್ರìತೆ ಇರಲಿದೆ. ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ರಾಯಚೂರು, ಬಾಗಲಕೋಟೆ, ಕೊಪ್ಪಳ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ವಾತಾವರಣ ಇರಲಿದೆ.

ಶುಕ್ರವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಎ.9ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಎ.6ರಂದು ಕೊಡಗು, ಎ.7ರಂದು ಚಿಕ್ಕಮಗಳೂರು, ಮಂಡ್ಯ, ಎ.8ರಂದು ಕೊಡಗು, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಎಲ್ಲೆಲ್ಲಿ ಎಷ್ಟೆಷ್ಟು ಉಷ್ಣಾಂಶ ?

ಬೆಂಗಳೂರಿನಲ್ಲಿ 37, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 38.3 ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಯಚೂರು 41.6, ಬಾಗಲಕೋಟೆ 41.1, ಕೊಪ್ಪಳ 40.8, ಗದಗ 40.6, ವಿಜಯಪುರ 40, ದಾರವಾಡ 39.8, ಮಂಗಳೂರು 35.4, ಬೀದರ್‌ 39.2, ದಾವಣಗೆರೆ 39.5 ಗರಿಷ್ಠ ಉಷ್ಣಾಂಶ ಶುಕ್ರವಾರ ದಾಖಲಾಗಿದೆ. 2016ರ ಎ.25ರಂದು 39.2ಡಿ.ಸೆ ಗರಿಷ್ಠ ತಾಪಮಾನ ದಾಖಲಾಗಿತ್ತು. ಅದನ್ನ ಹೊರತುಪಡಿಸಿದರೆ ಕೆಐಎಎಲ್‌ನಲ್ಲಿ 2024ರ ಏ.5ರಂದು 38.3 ಡಿ.ಸೆ.ಗರಿಷ್ಠ ತಾಪಮಾನ ದಾಖಲಾಗಿದೆ.

ಕಲಬುರಗಿಯಲ್ಲಿ ಈ ವರ್ಷದ ಗರಿಷ್ಠ ತಾಪ 44 ಡಿ.ಸೆ. ದಾಖಲು

ಕಲಬುರಗಿ: ರಣಬಿಸಿಲಿಗೆ ಇಡೀ ರಾಜ್ಯವೇ ತತ್ತರಿಸಿದ್ದು ಶುಕ್ರವಾರ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಹೋಬಳಿಯ ನಿಂಬಾಳ-ಹಡಲಗಿಯಲ್ಲಿ ಈ ವರ್ಷದ ಗರಿಷ್ಠ ತಾಪಮಾನ 44.5 ಡಿಗ್ರಿ ಸೆಲ್ಸಿಯಸ್‌ ಬಿಸಿಲು ದಾಖಲಾಗಿದೆ. ಬಿಸಿಲು ನಾಡು ಎಂದೇ ಖ್ಯಾತಿ ಪಡೆದಿರುವ ಕಲಬುರಗಿ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ರಣಬಿಸಿಲಿಗೆ ಜನಜೀವನ ತತ್ತರಿಸಿದ್ದು, 44 ಡಿಗ್ರಿ ಸೆಲ್ಸಿಯಸ್‌ವರೆಗೂ ತಾಪಮಾನ ದಾಖಲಾಗುತ್ತಿತ್ತು.

ಶುಕ್ರವಾರ ರಾಜ್ಯದಲ್ಲೇ ಅತ್ಯಧಿಕ ತಾಪ ದಾಖಲಾಗಿದ್ದು, ಜನರನ್ನು ಇನ್ನಷ್ಟು ಹೈರಾಣಾಗಿಸಿದೆ. ಮಧ್ಯಾಹ್ನ 12ರಿಂದ ಸಂಜೆ 6ರವರೆಗೆ ಜನತೆ ಹೊರಗೆ ಬಾರದಂತಾಗಿದೆ. ಜಿಲ್ಲೆಯ ಜೀವನದಿ ಭೀಮಾ ನದಿ ಸಂಪೂರ್ಣ ಬತ್ತಿದ್ದು, ಉರಿ ಬಿಸಿಲಿಗೆ ತುಪ್ಪ ಸವರಿದಂತಾಗಿದೆ. ಬಿಸಿಲಿನಿಂದ ತಪ್ಪಿಸಿಕೊಳ್ಳಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸಲಹೆ-ಸೂಚನೆ ನೀಡಿದೆ.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.