ಹಬ್ಬದ ದೀಪಕ್ಕೆ ನೀರೆರಚುವ ಮಳೆರಾಯ

Team Udayavani, Oct 15, 2017, 6:45 AM IST

rain.jpg

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಸುರಿದು ಇನ್ನಿಲ್ಲದ ಅನಾಹುತ ಸೃಷ್ಟಿಸುತ್ತಿರುವ ಮಳೆಗೆ ಸದ್ಯಕ್ಕೆ ಬ್ರೇಕ್‌ ಬೀಳುವ ಲಕ್ಷಣಗಳಿಲ್ಲ. ನಿರಂತರವಾಗಿ ಬೀಳುತ್ತಿರುವ ಮಳೆ ಈ ಬಾರಿಯ ದೀಪಾವಳಿಯನ್ನೂ ಕಾಡುವ ಸಾಧ್ಯತೆ ದಟ್ಟವಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದಲ್ಲಿ ಶನಿವಾರ ಕೂಡ ಮಳೆ ಅಬ್ಬರಿಸಿದ್ದು, ಭಾನುವಾರವೂ ದಕ್ಷಿಣ ಒಳನಾಡಿನಲ್ಲಿ ಗುಡುಗುಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಮುಂಗಾರು ಮಾರುತಗಳ ನಿರ್ಗಮನದ ಸಂದರ್ಭದಲ್ಲಿ ಹವಾಮಾನದಲ್ಲಿ ಈ ರೀತಿಯ ಬದಲಾವಣೆಗಳು ಸಹಜ. ಇದರಿಂದಾಗಿ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಇದು ಇನ್ನೂ ನಾಲ್ಕೈದು ದಿನಗಳು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಡಗು, ತುಮಕೂರು, ರಾಮನಗರ, ಮೈಸೂರು ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗುಡುಗುಸಹಿತ ಭಾರಿ ಮಳೆಯ ನಿರೀಕ್ಷೆ ಇದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
ಈ ಮಧ್ಯೆ ಶನಿವಾರ ಬೆಳಗ್ಗೆ 8.30ಕ್ಕೆ ಕೊಪ್ಪಳದ ಯಲಬುರ್ಗದಲ್ಲಿ ಅತ್ಯಧಿಕ 80 ಮಿ.ಮೀ. ಹಾಗೂ ಬಾಳೇಹೊನ್ನೂರು ಮತ್ತು ಚಿತ್ರದುರ್ಗದಲ್ಲಿ 70 ಮಿ.ಮೀ. ಮಳೆ ದಾಖಲಾಗಿದೆ. ಉಳಿದಂತೆ ಉತ್ತರ ಕನ್ನಡದ ಕಿರವತ್ತಿ, ಬಳ್ಳಾರಿಯ ಹಗರಿಬೊಮ್ಮನಹಳ್ಳಿ, ದಾವಣಗೆರೆಯಲ್ಲಿ 60 ಮಿ.ಮೀ., ಬೆಳಗಾವಿಯ ಚಿಕ್ಕೋಡಿ, ಕೋಲಾರದ ರಾಯಲಪಾಡು, ಬೆಂಗಳೂರಿನ ನೆಲಮಂಗಲ, ಬಳ್ಳಾರಿಯ ಕುಡತಿನಿ ಮತ್ತು ಕುರುಗೋಡಿನಲ್ಲಿ 50, ರಾಯಚೂರು, ಧರ್ಮಸ್ಥಳ, ಅಂಕೋಲ, ಶಿವಮೊಗ್ಗ, ಕೊಟ್ಟಿಗೇಹಾರ, ಅರಕಲಗೂಡು, ಬೆಂಗಳೂರು ನಗರದಲ್ಲಿ 30 ಮಿ.ಮೀ. ಮಳೆಯಾಗಿದೆ. ಧಾರವಾಡ, ಗದಗ, ಬಾಗಲಕೋಟೆ, ಹಿರಿಯೂರು, ಗೌರಿಬಿದನೂರಿನಲ್ಲಿ 10 ಮಿ.ಮೀ. ಮಳೆಯಾಗಿದೆ.

ಮಳೆಗೆ ಎರಡು ಬಲಿ
ಬೆಂಗಳೂರು: ರಾಜ್ಯದಲ್ಲಿ ಮಳೆಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಬೀದರ್‌ ಜಿಲ್ಲೆ ಬಸವಕಲ್ಯಾಣದ ಬಸವಕಲ್ಯಾಣ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಕಟ್ಟಡದ ಮೇಲೆ ನಿಂತಿದ್ದ ಮಳೆ ನೀರನ್ನು ಖಾಲಿ ಮಾಡಲು ಹೋದ ಕೌಡಿಯಾಳ ಗ್ರಾಮದ ಅವಿನಾಶ ತಿಪ್ಪಣ್ಣ ಹಿರೋಳ್ಳೆ (23) ಎಂಬುವರು ವಿದ್ಯುತ್‌ ಪ್ರವಹಿಸಿ ಅಸುನೀಗಿದ್ದಾರೆ. ದಾವಣಗೆರೆಯ ಪಿಬಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನೀರು ತುಂಬಿದ ಗುಂಡಿಗೆ ಬಿದ್ದು 6 ವರ್ಷದ ಬಾಲಕಿ ಮಧು ಎಂಬಾಕೆ ಅಸುನೀಗಿದ್ದಾಳೆ.

ಅನಾಹುತ ಸರಮಾಲೆ: ಈ ವರ್ಷ ಸುರಿದ ಮಳೆಗೆ ಶನಿ ವಾರ ತನಕ 135 ಮಂದಿ ಸಾವನ್ನಪ್ಪಿದ್ದಾರೆ. 2009ರಲ್ಲಿ ಇಡೀ ವರ್ಷ ಮಳೆ ದುರಂತಕ್ಕೆ 132 ಮಂದಿ ಬಲಿಯಾಗಿದ್ದರು. ಎಂಟು ವರ್ಷಗಳಲ್ಲಿ ಇದು ಗರಿಷ್ಠ ಪ್ರಮಾಣದ ಸಾವುನೋವನ್ನು ತಂದ ಮಳೆಯಾಗಿದೆ.

ಸಾವು
ಮೈಸೂರು 14
ಕಲಬುರ್ಗಿ 13
ವಿಜಯಪುರ 10

ಜಾನುವಾರು ಸಾವು
ಬಳ್ಳಾರಿ 636
ಬೆಂಗಳೂರು ಗ್ರಾಮಾಂತರ 301
ಗದಗ 45

ಮನೆ ಕುಸಿತ
ದಾವಣಗೆರೆ 1197
ರಾಯಚೂರು 1183
ಗದಗ 1015
(ಮಾರ್ಚ್‌ನಿಂದ ಅ.13ರವ ರೆಗೆ)

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.