ಮಹಾಲಕ್ಷ್ಮಿ ಲೇಔಟ್ : ಭಾರೀ ಮಳೆಗೆ ಕುಸಿಯುವ ಹಂತದಲ್ಲಿ 3 ಅಂತಸ್ತಿನ ಮಹಡಿ : ಗೋಪಾಲಯ್ಯ ಭೇಟಿ
Team Udayavani, Oct 13, 2021, 10:28 AM IST
ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ವೃಷಭಾವತಿ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡದ ಕೆಳ ಮಹಡಿ ಕುಸಿಯುವ ಹಂತದಲ್ಲಿದ್ದು ಸ್ಥಳೀಯ ಶಾಸಕರು ಹಾಗು ಅಬಕಾರಿ ಸಚಿವರಾದ ಕೆ ಗೋಪಾಲಯ್ಯನವರು ಬಿ ಬಿ ಎಂ ಪಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ನಂತರ ಮಾಧ್ಯಮ ಗಳಿಗೆ ಮಾತನಾಡಿದ ಸಚಿವರು, ಮನೆಯಲ್ಲಿ ಬಾಡಿಗೆಗೆ ಇದ್ದವರನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಅಕ್ಕ ಪಕ್ಕದ ಮನೆಯಲ್ಲಿ ವಾಸವಿದ್ದವರನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಅವರುಗಳಿಗೆ ವಸತಿ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಯಾರಿಗೂ ಹಾನಿಯಾಗದಂತೆ ತೆರವುಗೊಳಿಸುವಂತೆ ಬಿ ಬಿ ಎಂ ಪಿ ಅಧಿಕಾರಿಗಳೊಂದಿಗೆ ಸೂಚಿಸಲಾಗಿದೆ.
ಮನೆಯ ಮಾಲೀಕರು ನಾಪತ್ತೆಯಾಗಿದ್ದು. ಪೊಲೀಸ್ ರು ಹುಡುಕುವ ಯತ್ನದಲ್ಲಿದ್ದಾರೆ ನಿರಾಶ್ರಿತರಿಗೆ ನಮ್ಮ ಮತ್ತು ಸರ್ಕಾರ ಕಡೆಯಿಂದ ನೆರವು ನೀಡಲಾಗುವುದು ಎಂದು ತಿಳಿಸಿದರು. ಸ್ಥಳಕ್ಕೆ ಬಿ ಬಿ ಎಂ ಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮತ್ತು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ