ಇಂದು, ನಾಳೆ ಭಾರೀ ಮಳೆ ಸಾಧ್ಯತೆ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Team Udayavani, Oct 16, 2022, 6:55 AM IST
ಬೆಂಗಳೂರು: ರಾಜ್ಯದಲ್ಲಿ ಮಳೆ ಮುಂದುವರಿದಿದ್ದು, ಭಾನುವಾರ ಮತ್ತು ಸೋಮವಾರ (ಅ.16, 17) ಕೂಡ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ.
ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಕಲಬುರಗಿ, ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಂಡ್ಯದಲ್ಲಿ 17 ಸೆಂ.ಮೀ. ಮಳೆ: ರಾಜ್ಯದಲ್ಲಿ ಶುಕ್ರವಾರ ಕೂಡ ಧಾರಾಕಾರ ಮಳೆ ಸುರಿದಿದ್ದು, ಮಂಡ್ಯದ ಕೃಷಿ ವಿಜ್ಞಾನ ಕೇಂದ್ರದ ಬಳಿ ಭರ್ಜರಿ 17 ಸೆಂ.ಮೀ. ಮಳೆಯಾಗಿದೆ.
ಮೈಸೂರಿನ ಟಿ. ನರಸೀಪುರ, ಚಾಮರಾಜನಗರದ ಕೊಳ್ಳೇಗಾಲದಲ್ಲಿ ತಲಾ 9 ಸೆಂ.ಮೀ. ಮಳೆಯಾಗಿದೆ. ಕಲಬುರಗಿಯ ಯಡ್ರಾಮಿ, ರಾಮನಗರದ ಕನಕಪುರದಲ್ಲಿ ತಲಾ 8 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ರಾಜ್ಯದ ಹಲವೆಡೆ ಕೂಡ ಉತ್ತಮ ಮಳೆಯಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು