Helmet Compulsory ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಆದೇಶ
Team Udayavani, Mar 20, 2024, 12:23 AM IST
ಬೆಂಗಳೂರು: ರಾಜ್ಯಾದ್ಯಂತ ಎಲ್ಲ ಕಡೆ ಪೊಲೀಸರು ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.
ವಿವಿಧ ಘಟಕಗಳ ಪೊಲೀಸ್ ಅಧಿಕಾರಿ ಮತ್ತು ಸಿಬಂದಿಗಳು ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸದೆ ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿ ಹಾಗೂ ಸಿಬಂದಿ ಗಾಯಗೊಂಡಿದ್ದಾರೆ. ಕೆಲವರು ಮೃತಪಟ್ಟಿರುವ ಘಟನೆಗಳು ಸಂಭವಿಸಿರುವುದು ಕಂಡು ಬಂದಿರುತ್ತದೆ.
ಆದ್ದರಿಂದ, ಇನ್ನು ಮುಂದೆ ಇಂತಹ ಘಟನೆಗಳನ್ನು ತಪ್ಪಿಸಲು, ರಾಜ್ಯಾದ್ಯಂತ ಎಲ್ಲ ಘಟಕಗಳಲ್ಲಿ (ಬೆಂಗಳೂರು ನಗರ ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕಲಂ 129(ಎ) (ಬಿ) ರಲ್ಲಿ ನಮೂದಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲ್ಮೆಟ್ ಅನ್ನು ಧರಿಸಬೇಕು. ಹೆಲ್ಮೆಟ್ ಭದ್ರವಾಗಿ ಕಟ್ಟಿಕೊಳ್ಳಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ