ಮೂರು ಪಾಲಿಕೆಗಳ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
Team Udayavani, Aug 9, 2018, 4:27 PM IST
ಬೆಂಗಳೂರು:ರಾಜ್ಯದ ಮೂರು ಪಾಲಿಕೆಗಳ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಪೀಠ ಗುರುವಾರ ವಜಾಗೊಳಿಸಿದ್ದು, ಚುನಾವಣೆ ನಡೆಸಲು ಹಸಿರು ನಿಶಾನೆ ತೋರಿದೆ.
ಮೈಸುರು, ಶಿವಮೊಗ್ಗ, ತುಮಕೂರು ಮಹಾನಗರ ಪಾಲಿಕೆಯ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅನ್ನು ಹೈಕೋರ್ಟ್ ನ್ಯಾ.ಬಿ.ವೀರಪ್ಪ ಅವರು ವಜಾಗೊಳಿಸಿದರು.
ಇತ್ತೀಚೆಗಷ್ಟೇ ಪತ್ರಿಕಾಗೋಷ್ಠಿ ನಡೆಸಿದ್ದ ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಅವರು ಆಗಸ್ಟ್ 29ರಂದು ರಾಜ್ಯದ 29 ನಗರಸಭೆ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯತ್ ಸೇರಿ ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದರು.
ಶಿವಮೊಗ್ಗ, ಮೈಸೂರು ಹಾಗೂ ತುಮಕೂರು ಮಹಾನಗರ ಪಾಲಿಕೆ ಮೀಸಲಾತಿ ವಿಚಾರ ಕೋರ್ಟ್ ನಲ್ಲಿದ್ದು, ತೀರ್ಪು ಹೊರಬಂದ ಬಳಿಕ ಮೂರು ಪಾಲಿಕೆಯ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದ್ದರು.