ಕೋವಿಡ್ ನಿಯಮ ಉಲ್ಲಂಘನೆ ಆರೋಪ: ರಾಜ್ಯ ಕಾಂಗ್ರೆಸ್ ಮುಖಂಡರ ವಿರುದ್ಧದ ಚಾರ್ಜ್ಶೀಟ್ಗೆ ತಡೆ
Team Udayavani, Jun 29, 2022, 12:40 AM IST
ಬೆಂಗಳೂರು: ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಮೇಕೆದಾಟು ಯೋಜನೆಗೆ ಪಾದಯಾತ್ರೆ ನಡೆಸಿದ್ದ ಆರೋಪಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ನ 13 ಮುಖಂಡರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಇತರರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಮನಗರ ಗ್ರಾಮೀಣ ಠಾಣೆಯ ಪೊಲೀಸರು ವಿಚಾರಣ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಗೆ ಮಧ್ಯಾಂತರ ತಡೆ ನೀಡಿ ಆದೇಶಿಸಿತು.
ಮಾತ್ರವಲ್ಲದೆ ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಮತ್ತು ದೂರುದಾರ ರಾಮನಗರ ತಹಶೀಲ್ದಾರ್ ವಿಜಯ್ ಕುಮಾರ್ಗೆ ನ್ಯಾಯಪೀಠ ನೋಟಿಸ್ ಜಾರಿಗೊಳಿಸಿದೆ.
ಪ್ರಾಧಿಕಾರವೇ ಅನುಮತಿಸಿತ್ತು
ಅರ್ಜಿದಾರರ ಪರ ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ವಾದ ಮಂಡಿಸಿ, ಪಾದಯಾತ್ರೆ ನಡೆಸಲು ಸರಕಾರಿ ಪ್ರಾಧಿಕಾರಗಳೇ ಅನುಮತಿ ನೀಡಿರುವುದಕ್ಕೆ ಹಲವು ದಾಖಲೆಗಳು ಇವೆ. ಹೀಗಿದ್ದರೂ ಪಾದಯಾತ್ರೆ ನಡೆಸುವ ಮೂಲಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ ಅರ್ಜಿದಾರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವುದು ಸಂಪೂರ್ಣ ಅಕ್ರಮವಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಈ ವಾದ ಪುರಸ್ಕರಿಸಿದ ನ್ಯಾಯಯಪೀಠ ದೋಷಾರೋಪ ಪಟ್ಟಿಗೆ ತಡೆಯಾಜ್ಞೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ