ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನ ವಿರುದ್ಧದ ಎಫ್ಐಆರ್ ರದ್ದತಿಗೆ ನಕಾರ
Team Udayavani, Jul 6, 2022, 12:47 AM IST
ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರದಲ್ಲಿರುವ ಸರಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನ ವಿರುದ್ಧ ದಾಖಲಾಗಿದ್ದ 14 ಎಫ್‌ಐಆರ್‌ಗಳನ್ನು ರದ್ದುಗೊಳಸಿಲು ಹೈಕೋರ್ಟ್ ನಿರಾಕರಿಸಿದೆ.
ಎಫ್‌ಐಆರ್ ರದ್ದು ಕೋರಿ ಶಿಕ್ಷಕ ಕೆ.ಟಿ. ಪ್ರಭು ನಾಯ್ಕ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಎಫ್ಐಆರ್‌ಗಳನ್ನು ರದ್ದುಪಡಿಸಲು ನಿರಾಕರಿಸಿದೆ.
ಪ್ರಕರಣದ ವಿವರಗಳನ್ನು ಸೂಕ್ಷ್ಮವಾಗಿ ಗಮನಿಸಿರುವ ನ್ಯಾಯಪೀಠ, ಶಿಕ್ಷಕ ಮೂರ್ನಾಲ್ಕು ತಿಂಗಳ ಕಾಲ ಹಲವು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆನ್ನುವುದು ಗಂಭೀರ ವಿಚಾರ. ಹಾಗಾಗಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಭಯೋತ್ಪಾದಕ ಕೃತ್ಯ ಎಸಗಿದ ಎಲ್ಲರಿಗೂ ಯುಎಪಿಎ ಅನ್ವಯ
ಬೆಂಗಳೂರು: ಭಯೋತ್ಪಾದಕ ಸಂಘಟನೆಗಳ ಸದಸ್ಯರಿಗೆ ಮಾತ್ರ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯವಾಗುವುದಿಲ್ಲ, ಭಯೋತ್ಪಾದಕ ಕೃತ್ಯವೆಸಗಿದ ಯಾವುದೇ ವ್ಯಕ್ತಿಯನ್ನು ಯುಎಪಿಎ ಕಾಯ್ದೆಯಡಿ ವಿಚಾರಣೆಗೊಳಪಡಿಸಬಹುದು ಎಂದು ಹೈಕೋರ್ಟ್ ಆದೇಶಿಸಿದೆ. ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾಗೊಳಿಸಿದ್ದ ಎನ್‌ಐಎ ವಿಶೇಷ ಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಟ್ವಿಟರ್‌ನಿಂದ ಹೈಕೋರ್ಟ್‌ಗೆ ಅರ್ಜಿ
ಬೆಂಗಳೂರು: ಕೆಲ ಆಕ್ಷೇಪಾರ್ಹ ಟ್ವೀಟ್ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ಸೂಚಿಸಿ ನೋಟಿಸ್ ಜಾರಿಗೊಳಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಪ್ರಶ್ನಿಸಿ ಟ್ವಿಟರ್ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿದೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿದ್ಯುಚ್ಛಕ್ತಿ ಕಾಯ್ದೆ-2022: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ
ಕಾಂಗ್ರೆಸ್ ಮಾಡಿದ್ದ ಆಸ್ತಿಯನ್ನು ಖಾಸಗಿಯವರಿಗೆ ಕೊಟ್ಟಿದ್ದೇ ಬಿಜೆಪಿ ಸಾಧನೆ: ಮಧು ಬಂಗಾರಪ್ಪ
ಬೂಟಾಟಿಕೆ ದಾಸಯ್ಯನಿಗೆ ಮೈಯೆಲ್ಲ ಪಂಗನಾಮ: ಅಶ್ವತ್ಥನಾರಾಯಣ ವಿರುದ್ದ ಹೆಚ್ ಡಿಕೆ
ಅಮಿತ್ ಶಾ ಬಿಜೆಪಿ ನಾಯಕರಿಗೆ ವಿಳ್ಯದೆಲೆ ಶಾಸ್ತ್ರ ಮಾಡಲು ಬಂದಿದ್ದರಾ?: ಬಿ.ಕೆ. ಹರಿಪ್ರಸಾದ್
ಮನೆ ಮೇಲೆ ಮರ ಬಿದ್ದು ಮಹಿಳೆಯರು ಸಾವು: 2 ತಿಂಗಳ ಹಿಂದೆಯೇ ಮರ ತೆರವಿಗೆ ಮನವಿ ಮಾಡಿದ್ದ ಮೃತರು
MUST WATCH
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ
3೦ವರ್ಷದಿಂದ ಕೃಷಿಯಲ್ಲಿ ಖುಷಿ ಮತ್ತು ಪ್ರೀತಿಯನ್ನು ಕಂಡಿದ್ದೇವೆ
ಹೊಸ ಸೇರ್ಪಡೆ
ವಿದ್ಯುಚ್ಛಕ್ತಿ ಕಾಯ್ದೆ-2022: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ
ಕಾಂಗ್ರೆಸ್ ಮಾಡಿದ್ದ ಆಸ್ತಿಯನ್ನು ಖಾಸಗಿಯವರಿಗೆ ಕೊಟ್ಟಿದ್ದೇ ಬಿಜೆಪಿ ಸಾಧನೆ: ಮಧು ಬಂಗಾರಪ್ಪ
ಅಮರ್ಜಾ ಅಣೆಕಟ್ಟು-35 ಕೆರೆಗಳು ಬಹುತೇಕ ಭರ್ತಿ
ಕೆರೆ ಒಡ್ಡು ಒಡೆಯುವ ಭೀತಿ-6 ವರ್ಷವಾದ್ರೂ ದುರಸ್ತಿಯಿಲ್ಲ
ಬೂಟಾಟಿಕೆ ದಾಸಯ್ಯನಿಗೆ ಮೈಯೆಲ್ಲ ಪಂಗನಾಮ: ಅಶ್ವತ್ಥನಾರಾಯಣ ವಿರುದ್ದ ಹೆಚ್ ಡಿಕೆ