ಕೆಂಪು ವಲಯ ಹೊರತುಪಡಿಸಿ ಹೆದ್ದಾರಿ ಕಾಮಗಾರಿಗಳು ಆರಂಭ: ಗೋವಿಂದ ಕಾರಜೋಳ

Team Udayavani, Apr 28, 2020, 3:59 PM IST

ಕೆಂಪು ವಲಯ ಹೊರತುಪಡಿಸಿ ಹೆದ್ದಾರಿ ಕಾಮಗಾರಿಗಳು ಆರಂಭ: ಗೋವಿಂದ ಕಾರಜೋಳ

ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಪೂರಕ  ನಿರ್ದೇಶನಗಳನ್ನು ಅನುಸರಿಸಿ ಕೆಂಪು ವಲಯವನ್ನು ಹೊರತು ಪಡಿಸಿ ಉಳಿದ ವಲಯಗಳಲ್ಲಿ ಕೇಂದ್ರ ಸರ್ಕಾರವು ಮಂಜೂರು ಮಾಡಿದ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ  ಕಾರಜೋಳ ಅವರು ತಿಳಿಸಿದರು.

ಕೇಂದ್ರ ಭೂಸಾರಿಗೆ ಸಚಿವನಿತಿನ್ ಗಡ್ಕರಿ ಅವರು ಎಲ್ಲಾ ರಾಜ್ಯಗಳ ಲೋಕೋಪಯೋಗಿ ಹಾಗೂ ಸಾರಿಗೆ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಡಿಸಿಎಂ, ನೀರು ಸಂಗ್ರಹಕ್ಕೆ ಅನುಕೂಲವಾಗುವಂತೆ ಮಹಾರಾಷ್ಟ್ರದ ಮಾದರಿಯ ಬ್ರಿಡ್ಜ್ ಕೆಳಭಾಗದಲ್ಲಿ  ವಿಯರ್ ನಿರ್ಮಾಣಕಾಮಗಾರಿಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ರಾಜ್ಯ ಸರ್ಕಾರವು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ  8100 ಕೋಟಿ ವೆಚ್ಚದ 2020-21 ನೇ ಸಾಲಿನ ಪ್ರಸ್ತಾವನೆಗಳನ್ನು ಶೀಘ್ರವಾಗಿ ಮಂಜೂರು ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದರು.

ಕೋವಿಡ್ ವೈರಸ್ ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನಗಳನ್ನು ಅಳವಡಿಸಿಕೊಂಡು, ರಸ್ತೆ ನಿರ್ಮಾಣ  ಕಾಮಗಾರಿಗಳು, ಕಟ್ಟಡ ಕಾರ್ಮಿಕರು, ಸಿಬ್ಬಂದಿ ವರ್ಗದವರು, ವಾಹನ ಚಾಲಕರು, ಸಹಾಯಕರು ಮಾಸ್ಕ್, ಸ್ಯಾನಿಟೈಜರ್ ಗಳನ್ನು ಉಪಯೋಗಿಸುವಂತೆ ಕ್ರಮಕೈಗೊಳ್ಳಲಾಗಿದೆ. ಕಾಮಗಾರಿ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮಕೈಗೊಳ್ಳಲಾಗಿದೆ.

ಸರಕು ಸಾಗಾಣಿಕೆ, ಕೃಷಿ, ತೋಟಗಾರಿಕೆ ಉತ್ಪನ್ನಗಳ ಸಾಗಾಣಿಕೆ ವಾಹನಗಳಿಗೆ ಮುಕ್ತವಾಗಿ ಸಂಚರಿಸುವಂತೆ ಕ್ರಮಕೈಗೊಳ್ಳಲಾಗಿದೆ. ರೈತರಿಗೆ, ಕೃಷಿ ಕಾರ್ಮಿಕರಿಗೆ ಯಾವುದೇ ಅಡತಡೆ ಮಾಡದಂತೆ ಪೂರಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕೊರೊನಾ ನಿಯಂತ್ರಣ ಕ್ಕಾಗಿ ರಾಜ್ಯ ಸರ್ಕಾರವು ಶಕ್ತಿ ಮೀರಿ ಶ್ರಮಿಸುತ್ತಿದೆ ಎಂದು ಡಿಸಿಎಂ ವಿವರಿಸಿದರು.

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಾರಿಗೆ ಸಂಸ್ಥೆಗಳ ಸ್ಥಿತಿಗತಿ ಸಂಚಾರ ವ್ಯವಸ್ಥೆಯ ಕುರಿತು ವಿವರಿಸಿದರು. ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕಾರ್ಯದರ್ಶಿ ಬಿ. ಗುರುಪ್ರಸಾದ್, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತ, ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮತ್ತಿತ್ತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.