ಹಿಜಾಬ್‌, ಸಿಂಧೂರದಿಂದ ಯಾರಿಗೂ ತೊಂದರೆಯಿಲ್ಲ: ಸಿದ್ಧರಾಮಯ್ಯ


Team Udayavani, Feb 21, 2022, 7:20 AM IST

Sidduಹಿಜಾಬ್‌, ಸಿಂಧೂರದಿಂದ ಯಾರಿಗೂ ತೊಂದರೆಯಿಲ್ಲ: ಸಿದ್ಧರಾಮಯ್ಯ

ಬೆಂಗಳೂರು: ಸಿಂಧೂರ ಆಗಲಿ-ಹಿಜಾಬ್‌ ಆಗಲಿ ಎರಡು ನಮ್ಮ ನಮ್ಮ ಸಂಸ್ಕೃತಿ ಮತ್ತು ನಂಬಿಕೆ. ಕುಂಕುಮ ಇಡುವುದರಿಂದ-ಹಿಜಾಬ್‌ ಹಾಕುವುದರಿಂದ ಯಾರಿಗೂ ತೊಂದರೆ ಇಲ್ಲ. ಯಾವುದೇ ಸಂಸ್ಕೃತಿಯನ್ನು ಬಲವಂತದಿಂದ ತಡೆಯುವುದು ತಪ್ಪು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಹಣೆಗೆ ಕುಂಕುಮ ಇಡುವ ಮಕ್ಕಳನ್ನು ಕಾಲೇಜುಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಮತ್ತು ಸಿಂಧೂರ ವಿವಾದದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸಿಂಧೂರ ಇಡುವುದರಿಂದ ಯಾರಿಗೂ ತೊಂದರೆ ಇಲ್ಲ. ಹಾಗೆಯೇ ಹಿಜಾಬ್‌ ಧರಿಸುವುದರಿಂದಲೂ ಯಾರಿಗೂ ತೊಂದರೆ ಇಲ್ಲ. ಹಿಂದಿನಿಂದ ನಡೆದುಕೊಂಡು ಬಂದಿರುವ ನಂಬಿಕೆ, ಆಚರಣೆ, ಪರಂಪರೆಗೆ ತಕ್ಕಂತೆ ನಡೆದುಕೊಳ್ಳುವುದು ಯಾರಿಗೂ ತೊಂದರೆ ಇಲ್ಲ ಎಂದರು.

ಹಿಜಾಬನ್ನು ಹಿಂದಿನಿಂದಲೂ ಧರಿಸಿಕೊಂಡು ಬರುತ್ತಿದ್ದರು. ಕೇಸರಿ ಶಾಲು ಹಿಂದಿನಿಂದ ಯಾರೂ ಹಾಕುತ್ತಿರಲಿಲ್ಲ. ಹಿಜಾಬ್‌ ಅನ್ನು ವಿರೋಧಿಸುವುದಕ್ಕೋಸ್ಕರವೇ ಕೇಸರು ಶಾಲು ಹಾಕಿಸುವುದು ಅತ್ಯಂತ ಸಣ್ಣ ತನ. ಇದು ಕೇಸರಿ ಶಾಲಿಗೂ ಮಾಡುವ ಅವಮಾನ. ಕೇಸರಿ ಶಾಲನ್ನು ಅಮಾನವೀಯ, ಅನಾಗರಿಕ ಕಾರಣಗಳಿಗೆ ಬಳಸಬಾರದು ಎಂದು ಹೇಳಿದರು.

ಬಿಜೆಪಿಗೆ ರಾಷ್ಟ್ರಧ್ವಜಕ್ಕಿಂತ ಸಚಿವ ಸ್ಥಾನ ಮುಖ್ಯ
ರಾಷ್ಟ್ರಧ್ವಜಕ್ಕೆ ಅಗೌರವ ತೋರುವುದು ರಾಷ್ಟ್ರ ಭಕ್ತಿನಾ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ ಸಿದ್ದರಾಮಯ್ಯ, ಬಿಜೆಪಿ ರಾಷ್ಟ್ರ ಧ್ವಜಕ್ಕಿಂತ ಸಚಿವ ಸ್ಥಾನವೇ ಮುಖ್ಯ ಎಂದು ಹಠ ಹಿಡಿದು ಕುಳಿತಿದೆ. ರಾಷ್ಟ್ರೀಯ ಲಾಂಛನಗಳಿಗೆ ಅವಮಾನ ಮಾಡುವುದು ರಾಷ್ಟ್ರದ್ರೋಹ ಮತ್ತು ಸ್ಪಷ್ಟ ಕಾನೂನಿನ ಉಲ್ಲಂಘನೆ. ನಾವು ರಾಷ್ಟ್ರ ಧ್ವಜಕ್ಕಾದರೂ ಅವಮಾನ ಮಡುತ್ತೀವಿ, ಕಾನೂನನ್ನೂ ಉಲ್ಲಂ ಸುತ್ತೀವಿ. ಯಾರೂ ಪ್ರಶ್ನಿಸಬಾರದು’ ಎನ್ನುವ ಬಿಜೆಪಿ ಧೋರಣೆಯನ್ನು ನಾವು ಪ್ರತಿಭಟಿಸುತ್ತಿದ್ದೇವೆ.ಬಿಜೆಪಿ ಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರೆ, ಅವರು ನಮ್ಮ ರಾಷ್ಟ್ರ ಧ್ವಜವನ್ನು ಹಿಡಿದು ಬ್ರಿಟಿಷರ ವಿರುದ್ಧ ಹೋರಾಡಿದ್ದರೆ ಅವರಿಗೆ ನಮ್ಮ ರಾಷ್ಟ್ರ ಧ್ವಜ ಮತ್ತು ರಾಷ್ಟ್ರೀಯ ಲಾಂಛನಗಳ ಬಗ್ಗೆ ನಿಜವಾದ ಗೌರವ-ಭಕ್ತಿ ಇರುತ್ತಿತ್ತು.

ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲೂ ಭಾಗವಹಿಸಲಿಲ್ಲ. ರಾಷ್ಟ್ರ ಧ್ವಜವನ್ನೂ ಬ್ರಿಟಿಷರ ವಿರುದ್ಧ ಹಿಡಿಯಲಿಲ್ಲ. ಹೀಗಾಗಿ ಇವರ ಮನಸ್ಥಿತಿಯೇ ರಾಷ್ಟ್ರ ಧ್ವಜದ ವಿರುದ್ಧ ಇದೆ. ರಾಷ್ಟ್ರಧ್ವಜ ಮತ್ತು ಈಶ್ವರಪ್ಪ ಅವರ ಸಚಿವ ಸ್ಥಾನ ಇವೆರಡರಲ್ಲಿ ನಿಮಗೆ ಯಾವುದು ಮುಖ್ಯ ಎನ್ನುವ ಪ್ರಶ್ನೆಯನ್ನು ನಾವು ಬಿಜೆಪಿ ಮುಂದಿಟ್ಟೆವು. ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುವುದು ಬಿಜೆಪಿಯವರಿಗೆ ಸಣ್ಣ ವಿಷಯ ಇರಬಹುದು. ಆದರೆ ನಮಗೆ ಇದು ಬಹಳ ಗಂಭೀರವಾದ ಸಂಗತಿ. ರಾಷ್ಟ್ರಧ್ವಜ ಹಿಡಿದು ಲಕ್ಷಾಂತರ ಮಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದ ಮೌಲ್ಯ ಬಿಜೆಪಿಯವರಿಗೆ ಗೊತ್ತಿಲ್ಲವಾದ್ದರಿಂದ ಅವರಿಗೆ ಹುತಾತ್ಮರ ಬೆಲೆ ಕೂಡ ಗೊತ್ತಿಲ್ಲ.

‘ವಿರೋಧ ಪಕ್ಷಕ್ಕೆ ನೈತಿಕತೆ ಇಲ್ಲ ಎನ್ನುವ ಮುಖ್ಯಮಂತ್ರಿ ಬೊಮ್ಮಾಯಿ ಅವರ ಮಾತಿಗೆ ಪ್ರತಿಕ್ರಿಯಿಸಿ, ನಮಗೆ ಬೊಮ್ಮಾಯಿ ಅವರಿಗಿಂತ ಹೆಚ್ಚು ಹೋರಾಟದ ಅನುಭವವಿದೆ. ಸ್ವಾತಂತ್ರ್ಯ ಹೋರಾಟದ ತ್ಯಾಗ ಬಲಿದಾನ ನಮಗೆ ಗೊತ್ತಿದೆ. ಅವರಿಗೇನು ಗೊತ್ತಿದೆ ಇದೆಲ್ಲಾ . ಹೀಗಾಗಿ ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನವನ್ನು ಸಹಿಸಿಕೊಳ್ಳಿ ಎಂದು ಅವರು ಹೇಳಿದರೆ ನಾವು ಸಹಿಸಿಕೊಳ್ಳಲು ಸಿದ್ದರಿಲ್ಲ. ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡುತ್ತೇವೆ.’
– ಸಿದ್ಧರಾಮಯ್ಯ, ಪ್ರತಿಪಕ್ಷ ನಾಯಕ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.