ರಾತ್ರಿ ಕರ್ಫ್ಯೂ ವಿಚಾರದಲ್ಲಿ ಸಿಎಂ ಜೊತೆ ಚರ್ಚಿಸಿ ಅಂತಿಮ ನಿರ್ಧಾರ: ಬೊಮ್ಮಾಯಿ
Team Udayavani, Dec 5, 2020, 12:45 PM IST
ಬೆಳಗಾವಿ: ಕೋವಿಡ್-19 ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾತ್ರಿ ಕರ್ಫ್ಯೂ ಜಾರಿಗೊಳಿಸಬೇಕೆ- ಬೇಡವೇ ಎನ್ನುವುದರ ಬಗ್ಗೆ ಸಿಎಂ ಹಾಗೂ ಆರೋಗ್ಯ ಸಚಿವರ ಜೊತೆ ಸಮಾಲೋಚಿಸಲಾಗುವದು ಎಂದರು.
ಇದನ್ನೂ ಓದಿ:ಅಣ್ಣಾ ಎಂದರೂ ಥಳಿಸಿದರು : ಅಪಹರಣಕಾರರ ಕುರಿತು ವರ್ತೂರು ಪ್ರಕಾಶ್ ಕಾರು ಚಾಲಕನ ಹೇಳಿಕೆ
ಕೋವಿಡ್ ಎರಡನೇ ಅಲೆ ಆರಂಭವಾಗುವ ಸಾಧ್ಯತೆ ಹಿನ್ನಲೆಯಲ್ಲಿ ಹೊಸ ವರ್ಷಾಚರಣೆಗೆ ನಿಯಂತ್ರಣ ಹಾಕಲೇಬೇಕಾಗಿದೆ. ಆದ್ದರಿಂದ ಆರೋಗ್ಯ ಇಲಾಖೆಯಿಂದ ವರದಿ ಪಡೆದು ನಂತರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.