ಜನಸಾಗರದ ನಡುವೆ ಬಿಗಿ ಭದ್ರತೆಯಲ್ಲಿ ದೀಪಕ್‌ ರಾವ್‌ ಅಂತ್ಯಕ್ರಿಯೆ


Team Udayavani, Jan 4, 2018, 10:51 AM IST

26.jpg

ಮಂಗಳೂರು: ಸುರತ್ಕಲ್‌ನ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ದೀಪಕ್‌ ರಾವ್‌  ಅಂತ್ಯಕ್ರಿಯೆ ಭಾರೀ  ಪೊಲೀಸ್‌ ಭದ್ರತೆಯೊಂದಿಗೆ ಸಾವಿರಾರು ಜನ ಸಂಘಟನೆಯ ಕಾರ್ಯಕರ್ತರು, ಗಣ್ಯರ ಸಮ್ಮುಖದಲ್ಲಿ ಗುರುವಾರ ಮಧ್ಯಾಹ್ನ ನಡೆಯಿತು. 

ಕಾಟಿಪಳ್ಳ ಗ್ರಾಮದಲ್ಲೇ ಮುಕ್ಕಾಲು ಕಿಲೋ ಮೀಟರ್‌ ಶವಯಾತ್ರೆ ನಡೆಸಲು ಪೊಲೀಸರು ಅನುಮತಿ ನೀಡಿದ್ದರು. ಶವಯಾತ್ರೆ ನಡೆದ  ಬಳಿಕ ಸುರತ್ಕಲ್‌ನ ಗಣೇಶಕಟ್ಟೆ ರುದ್ರ ಭೂಮಿಯಲ್ಲಿ ಶಿವಾಜಿ ಕ್ಷತ್ರಿಯ ಸಂಪ್ರದಾಯದಂತೆ ಅತ್ಯಂಕ್ರಿಯೆ ನಡೆಸಲಾಯಿತು.  ದೀಪಕ್‌ ಸಹೋದರ ಅಂತಿಮ ವಿಧಿವಿಧಾನ ನೆರವೇರಿಸಿದರು. 

ಮೃತ ದೇಹದ ಶವಯಾತ್ರೆ ನಡೆಸಲು ಅವಕಾಶ ನೀಡದೆ ಇದ್ದುದರಿಂದ ಆಕ್ರೋಶಗೊಂಡಿದ್ದ ಗ್ರಾಮಸ್ಥರು  ಪೋಷಕರು ಮತ್ತು ಪ್ರತಿಭಟನಾ ನಿರತರ ಮನವೊಲಿಸುವಲ್ಲಿ ಜಿಲ್ಲಾಧಿಕಾರಿ ಸೆಸಿಕಾಂತ್‌ ಸೆಂಥಿಲ್‌ ಅವರು ಯಶಸ್ವಿಯಾದರು.

ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಸ್ಥಳಕ್ಕೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಬರದಿದ್ದಲ್ಲಿ,ಸೂಕ್ತ ಪರಿಹಾರ ನೀಡದಿದ್ದಲ್ಲಿ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. 

ಜಿಲ್ಲಾಧಿಕಾರಿ ಸೆಸಿಕಾಂತ್‌ ಸೆಂಥಿಲ್‌ ಅವರು ಮನಗೆ ಭೇಟಿ ನೀಡಿ  ಪರಿಹಾರ ಧನದ ಬಗ್ಗೆ ಘೋಷಿಸಿ ಸಾಂತ್ವನ ಹೇಳಿದ ಬಳಿಕ ದೀಪಕ್‌ ಪೋಷಕರು ಅಂತ್ಯಸಂಸ್ಕಾರ ನಡೆಸಲು ಒಪ್ಪಿಗೆ ಸೂಚಿಸಿದರು.

ತಕ್ಷಣ ಜಿಲ್ಲಾಡಳಿತದ ವತಿಯಿಂದ 5 ಲಕ್ಷ ರೂಪಾಯಿ ನೀಡುತ್ತೇವೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ನೀಡುತ್ತೇವೆ ಎಂದು ಜಿಲ್ಲಾಧಿಕಾರಿ  ತಿಳಿಸಿದರು. 

ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದಗೃಹ ಸಚಿವ ರಾಮಲಿಂಗಾ ರೆಡ್ಡಿ ‘  ದೀಪಕ್ ರಾವ್ ಮೃತ ದೇಹ ಸಾಗಾಣಿಕೆ ವಿಚಾರದಲ್ಲಿ ಪೊಲೀಸ್‌ ಇಲಾಖೆ ಸೂಕ್ತ ತೀರ್ಮಾನ ಕೈಗೊಂಡಿದೆ. ದೀಪಕ್ ರಾವ್ ಯಾವ ಸಂಘಟನೆಗೆ ಸೇರಿದ್ದಾರೆ,ಯಾವ ಉದ್ದೇಶದಿಂದ ಕೊಲೆ ನಡೆದಿದೆ ಎಂಬುದು ತನಿಖೆಯಿಂದ ಹೊರ ಬರಬೇಕಿದೆ. ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡುವ ಅಗತ್ಯವಿಲ್ಲ ಕೊಲೆಗೆ ಸಂಬಂಧಿಸಿ  ನಾಲ್ವರು  ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ.ಎಡಿಜಿಪಿ ಕಮಲ್‌ ಪಂತ್  ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿಷೇದಾಜ್ಞೆ ಜಾರಿ ಮಾಡಲಾಗಿದೆ.ಎನ್ ಐಎ ತನಿಖೆ ನೀಡುವ ಅವಶ್ಯಕತೆ ಇಲ್ಲ’ ಎಂದರು.           

‘ಚುನಾವಣೆ ಬರ್ತಿದೆ,ಎಲ್ಲವನ್ನು ರಾಜಕೀಕರಣ ಮಾಡುವುದು ಸೂಕ್ತವಲ್ಲ.ಸಮಾಜದ ಶಾಂತಿ ಸುವ್ಯೆವಸ್ಥೆ ಕೆಡಿಸುವ ಕೆಲಸ ಮಾಡುವುದು ಸಮರ್ಥನೀಯವಲ್ಲ.ಸದ್ಯಕ್ಕೆ ಪರಿಸ್ಥಿತಿ ಹತೋಟಿಯಲ್ಲಿದೆ’ ಎಂದು ಹೇಳಿಕೆ ನೀಡಿದ್ದಾರೆ. 

ಸಿಎಂ ಜೊತೆ ಚರ್ಚೆ 

‘ನಾನು ಸ್ಥಳಕ್ಕೆ ತೆರಳುವ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ತಿಳಿಸುತ್ತೇನೆ’ ಎಂದು ಸಚಿವ ರೆಡ್ಡಿ ಹೇಳಿಕೆ ನೀಡಿದ್ದರು. 

ಸಾವಿರಾರು ಜನರು ಮನೆಯ ಮುಂದೆ ಜಮಾವಣೆಗೊಳ್ಳುತ್ತಿದ್ದು ಶವಯಾತ್ರೆ ನಡೆಸಲು ಅವಕಾಶ ನೀಡದ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.  ಮೃತನ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. 

ಸ್ಥಳಕ್ಕೆ ಎಸಿ ಅಂಬುಲೆನ್ಸ್‌ 

ದೀಪಕ್‌ ಶವವಿಟ್ಟು ಹೋರಾಟ ನಡೆಸಲು ಸಂಘ ಪರಿವಾರ, ಬಿಜೆಪಿ ಮತ್ತು ಸ್ಥಳೀಯರು ತೀರ್ಮಾನಿಸಿದ ಹಿನ್ನಲೆಯಲ್ಲಿ  ಸ್ಥಳಕ್ಕೆ ಹವಾನಿಯಂತ್ರಣ ವ್ಯವಸ್ಥೆ ಇರುವ ವಿಶೇಷ ಅಂಬುಲೆನ್ಸ್‌ ತರಿಸಲಾಗಿತ್ತು.  
 

ಜಿಲ್ಲಾದ್ಯಂತ ಪ್ರತಿಭಟನೆ 

ದಕ್ಷಿಣ ಕನ್ನಡದ ಎಲ್ಲಾ ತಾಲೂಕು ಕೇಂದ್ರ ಗಳಲ್ಲಿ ದೀಪಕ್‌ ರಾವ್‌ ಹತ್ಯೆ ಖಂಡಿಸಿ  ಬಿಜೆಪಿ, ಸಂಘಪರಿವಾರದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿ  ರಾಜ್ಯ ಸಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ತನಿಖೆ ನಡೆಸಿ ಬಂಧಿತ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಿದ್ದಾರೆ. 

ಬುಧವಾರ ಮಧ್ಯಾಹ್ನ ದೀಪಕ್‌ ರಾವ್‌ (28) ಅವರನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕಡಿದು ಕೊಲೆ ಮಾಡಿದ್ದರು. ಸಿನಿಮೀಯ ಶೈಲಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದಮೂರೂವರೆ ತಾಸುಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲ್ಕಿಯ ನೌಷಾದ್‌,ರಿಜ್ವಾನ್‌, ಪಿಂಕಿ ನವಾಜ್‌ ಮತ್ತು ನಿರ್ಷಾನ್‌ ಬಂಧಿತರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.