ಮತ್ಸ್ಯಾಸನ ಯೋಜನೆಯಡಿ 5 ಸಾವಿರ ಮೀನುಗಾರರಿಗೆ ಮನೆ: ಸಚಿವ ಸುನಿಲ್‌

Team Udayavani, Nov 5, 2022, 8:45 PM IST

ಮತ್ಸ್ಯಾಸನ ಯೋಜನೆಯಡಿ 5 ಸಾವಿರ ಮೀನುಗಾರರಿಗೆ ಮನೆ: ಸಚಿವ ಸುನಿಲ್‌

ಬೆಂಗಳೂರು: ಮತ್ಯಾಶ್ರಯ ಯೋಜನೆಯಡಿ ಮೀನುಗಾರರಿಗೆ 5 ಸಾವಿರ ಮನೆಗಳನ್ನು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಸಚಿವ ವಿ.ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ 5 ಸಾವಿರ ವಸತಿ ರಹಿತ ಮೀನುಗಾರರಿಗೆ ರಾಜೀವ್‌ ಗಾಂಧಿ ವಸತಿ ನಿಗಮದ ಮೂಲಕ ಆದ್ಯತೆ ಮೇರೆಗೆ ಮನೆಗಳನ್ನು ನಿರ್ಮಿಸಲಾಗುವುದು. ವಸತಿ ಇಲಾಖೆಯಲ್ಲಿ ಜಾರಿಯಲ್ಲಿರುವ ಸಹಾಯಧನ ಮಾದರಿಯಂತೆ ಹಾಗೂ ನಿಗಮದ ಮಾನದಂಡಗಳನ್ನು ಒಳಗೊಂಡಂತೆ ಮನೆ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ. ಈ ಮೂಲಕ ಮೀನುಗಾರರ ವಿಷಯದಲ್ಲಿ ನಮ್ಮ ಸರಕಾರ ನುಡಿದಂತೆ ನಡೆದಿದೆ ಎಂದು ಹೇಳಿದರು.

2022-23ನೇ ಸಾಲಿನಲ್ಲಿ 858 ಪರಿಶಿಷ್ಟ ಜಾತಿ ಹಾಗೂ 348 ಪರಿಶಿಷ್ಟ ಪಂಗಡ ಹಾಗೂ 3,794 ಸಾಮಾನ್ಯ ವರ್ಗಕ್ಕೆ ಸೇರಿದವರು ವಸತಿ ಇಲಾಖೆಯಡಿ ಮನೆ ಪಡೆಯುವ ಫ‌ಲಾನುಭವಿಗಳಿದ್ದಾರೆ. ಆದರೆ, ಮತ್ಸಾéಶನ ಯೋಜನೆಯಡಿ ವಸತಿ ರಹಿತ ಮೀನುಗಾರರಿಗೆ ಮನೆಗಳನ್ನು ಮಂಜೂರು ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ 3,794 ಸಾಮಾನ್ಯ ವರ್ಗಕ್ಕೆ ಸೇರಿದ ಫ‌ಲಾನುಭವಿಗಳಿಗೆ ದೇವರಾಜ ಅರಸು ವಸತಿ ಯೋಜನೆಯೊಂದಿಗೆ ಅವಕಾಶವಿರುವ ರಾಜ್ಯ ವಸತಿ ಯೋಜನೆಗಳಡಿ 2021-22ನೇ ಸಾಲಿಗೆ ನೀಡಲಾದ ಮನೆಗಳ ಗುರಿಯನ್ನು ಪರಿಗಣಿಸುವಂತೆ ವಸತಿ ಇಲಾಖೆಯಿಂದ ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ತಿಳಿಸಲಾಗಿದೆ.

ಜತೆಗೆ ಪ.ಜಾತಿ ಹಾಗೂ ಪ.ಪಂಗಡಕ್ಕೆ ಸೇರಿದ 1,206 ಫ‌ಲಾನುಭವಿಗಳಿಗೆ ಡಾ| ಬಿ.ಆರ್‌.ಅಂಬೇಡ್ಕರ್‌ ವಸತಿ ಯೋಜನೆಗಳಡಿ ಗ್ರಾಮೀಣ ಮತ್ತು ನಗರದ 2021-22ನೇ ಸಾಲಿಗೆ ನೀಡಲಾದ ಮನೆಗಳ ಗುರಿಯನ್ನು ಪರಿಗಣಿಸುವಂತೆಯೂ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-sdsdsadsad

ಅತೀಕ್ ಅಹಮದ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ ವೈ-ಪ್ಲಸ್ ಭದ್ರತೆ

upendra

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

ಚುನಾವಣೆ ಘೋಷಣೆ: ಉಡುಪಿ ಮಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

upendra

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

1-wwqewqewqewqe

ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sdsdsadsad

ಅತೀಕ್ ಅಹಮದ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ ವೈ-ಪ್ಲಸ್ ಭದ್ರತೆ

upendra

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

ಚುನಾವಣೆ ಘೋಷಣೆ: ಉಡುಪಿ ಮಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.