

Team Udayavani, Jan 14, 2020, 3:04 AM IST
ಬೆಂಗಳೂರು: ವಿವಿಧ ಹೆಸರಿನಲ್ಲಿರುವ ವಸತಿ ಯೋಜನೆಗಳನ್ನು ಒಂದೇ ಸೂರಿನಡಿ ತರಲು ಸರ್ಕಾರ ಪ್ರಯತ್ನ ನಡೆಸಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ವಿಧಾನಸೌಧದಲ್ಲಿ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಂಪುಟ ಉಪ ಸಮಿತಿ ಸಭೆಯ ನಂತರ ಮಾತನಾಡಿದ ಅವರು, ವಸತಿ ಇಲಾಖೆಯಲ್ಲಿ ಅರ್ಹರಿಗೆ ಮನೆ ದೊರಕಿಸಿಕೊಡುವ ಉದ್ದೇಶದಿಂದ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ.
ಸೂರಿಲ್ಲದ ಬಡವರಿಗೆ ಮನೆ ಸಿಗಬೇಕು ಎನ್ನುವುದು ಸರ್ಕಾರದ ಗುರಿಯಾಗಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ಈಗಾಗಲೇ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿರುವ ಬಗ್ಗೆ ತನಿಖೆ ನಡೆಯುತ್ತಿದೆ. ಐದಾರು ತಿಂಗಳಲ್ಲಿ ವಸತಿ ಇಲಾಖೆಗೆ ಕಾಯಕಲ್ಪ ಕಲ್ಪಿಸಲಾಗುವುದು. ಅದಕ್ಕಾಗಿ ಸಂಪುಟ ಉಪ ಸಮಿತಿಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗುತ್ತಿದೆ.
ಪ್ರತಿ ಫಲಾನುಭವಿಗೆ ಆಧಾರ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡುವ ಮೂಲಕ ಅಕ್ರಮಕ್ಕೆ ತಡೆಯೊಡ್ಡಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದರು. ಇದೇ ವೇಳೆ, ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಮೊದಲ ಕಂತಿನ ಒಂದು ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ಕಂದಾಯ ಇಲಾಖೆಯಿಂದ ವರದಿ ಬಂದ ನಂತರ ಎರಡನೇ ಕಂತಿನ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
Ad
ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರು ಪ್ರಕ್ರಿಯೆ ನಿರಂತರ: ಡಾ.ಪರಮೇಶ್ವರ್
ನಾಳೆ ರಾಹುಲ್ ಜತೆ ಸಿಎಂ, ಡಿಸಿಎಂ ಸಭೆ: ಮೇಲ್ಮನೆ ಆಯ್ಕೆಗೆ ಒಪ್ಪಿಗೆ ಪಡೆವ ಸಾಧ್ಯತೆ
ನಟ ದರ್ಶನ್ ಆ್ಯಂಡ್ ಗ್ಯಾಂಗ್ ಕೇಸ್ ರೀತಿ ಮತ್ತೆರಡು ಭೀಭತ್ಸ ಕೃತ್ಯ!
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ: ಆರ್.ಅಶೋಕ್
ಸರಕಾರದಿಂದ 250 ಕೋಟಿ ರೂ. ಬಾಕಿ: ರಾಜ್ಯವ್ಯಾಪಿ ಅಕ್ಕಿ ಲಾರಿ ಮುಷ್ಕರ
You seem to have an Ad Blocker on.
To continue reading, please turn it off or whitelist Udayavani.