ಟಿಕೆಟ್ಗಾಗಿ ಗಲಾಟೆ : ಕಾರ್ಯಕರ್ತನಿಗೆ ಎಚ್ಡಿಕೆ ಕಪಾಳಮೋಕ್ಷ!
Team Udayavani, May 10, 2017, 3:36 PM IST
ಮೈಸೂರು : ಜೆಡಿಎಸ್ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ತಯಾರಿ ಬಿರುಸಿನಿಂದ ನಡೆಯುತ್ತಿದ್ದು ,ಬುಧವಾರ ಟಿಕೆಟ್ಗಾಗಿ ಏರುಧ್ವನಿಯಲ್ಲಿ ಮಾತನಾಡಿದ ಕಾರ್ಯಕರ್ತನಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಎಚ್ಡಿಕೆ ನೇತೃತ್ವದಲ್ಲಿ ನಡೆಯುತ್ತಿದ್ದ ಬೂತ್ ಮಟ್ಟದ ಸಭೆಯಲ್ಲಿ ಘಟನೆ ನಡೆದಿದ್ದು, ಶಾಸಕ ಜಿ.ಟಿ.ದೇವೇಗೌಡ ಅವರ ಪುತ್ರ ಹರೀಶ್ಗೆ ಹುಣಸೂರು ಕ್ಷೇತ್ರದ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ತಳ್ಳಾಟ ನೂಕಾಟ ನಡೆದಿದೆ.
ಕಾಂಗ್ರೆಸ್ ತೊರೆದು ಬಂದರೆ ಎಚ್. ವಿಶ್ವನಾಥ್ ಅವರಿಗೆ ಹುಣಸೂರು ಟಿಕೆಟ್ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿರುವ ಹಿನ್ನಲೆಯಲ್ಲಿ ಈ ಗೊಂದಲ ಉಂಟಾಗಿದೆ.ಇನ್ನೊಂದೆಡೆ ಪ್ರಜ್ವಲ್ ರೇವಣ್ಣ ಅಭ್ಯರ್ಥಿ ಎಂದು ಕೆಲ ಕಾರ್ಯಕರ್ತರು ಬಿಂಬಿಸಿ ಪ್ರಚಾರ ನಡೆಸಿದ್ದಾರೆ.
ಜಿ.ಟಿ.ದೇವೇಗೌಡ ಅವರು ಚಾಮುಂಡೇಶ್ವರಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರೂ ಹುಣಸೂರಿನಲ್ಲಿ ಪ್ರಭಾವ ಹೊಂದಿದ್ದು, ಪುತ್ರನಿಗೆ ಜೆಡಿಎಸ್ ಟಿಕೆಟ್ ಪಡೆಯುವ ಪ್ರಯತ್ನದಲ್ಲಿದ್ದು ಈಗಾಗಲೇ ಕಾರ್ಯಕರ್ತರೊಂದಿಗೆ ಬೆರೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್