ಈಶ್ವರಪ್ಪ ರಾಜೀನಾಮೆಗೂ ಮುನ್ನ ಭಾರೀ ಪ್ರಮಾಣದ ಕಮಿಷನ್ ಅಕ್ರಮ ವ್ಯವಹಾರ: ಆಲಂ ಪಾಷಾ ಆರೋಪ

Team Udayavani, Apr 18, 2022, 11:59 AM IST

ಈಶ್ವರಪ್ಪ ರಾಜೀನಾಮೆಗೂ ಮುನ್ನ ಭಾರೀ ಪ್ರಮಾಣದ ಕಮಿಷನ್ ಅಕ್ರಮ ವ್ಯವಹಾರ: ಆಲಂ ಪಾಷಾ ಆರೋಪ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲರದ್ದು ವ್ಯವಸ್ಥಿತ ಕೊಲೆ. ಒಂದು ಲಕ್ಷ ಕೋಟಿ ರೂ. ಟೆಂಡರ್ ಗಳಲ್ಲಿ ಅವ್ಯವಹಾರ ನಡೆದಿದೆ. ಉಡುಪಿಯಲ್ಲಿ ಏ.12ರಂದು ಸಂಭವಿಸಿದ ಗುತ್ತಿಗೆದಾರ ಸಂತೋಷ್ ಅವರ ನಿಗೂಢ ಸಾವು ಭ್ರಷ್ಟಾಚಾರಿ ವ್ಯವಸ್ಥೆ ಮಾಡಿಸಿದ ವ್ಯವಸ್ಥಿತ ಕೊಲೆಯಾಗಿದೆ ಎಂದು ಉದ್ಯಮಿ ಆಲಂ‌ ಪಾಷಾ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತೋಷ್ ಸಾವಿಗೆ ಮೂಲ ಕಾರಣವಾದ ಭ್ರಷ್ಟಾಚಾರದ ಬಗ್ಗೆ ಒಂದಕ್ಷರವನ್ನೂ ಹೇಳದೆ ಉಡುಪಿಯ ಪೊಲೀಸರು 2022ರ ಏಪ್ರಿಲ್ 13ರಂದು ಎಫ್‌ಐಆರ್ ದಾಖಲಿಸಿದ್ದಾರೆ. ಈಶ್ವರಪ್ಪ ಅವರು ತಮ್ಮ ವಿರುದ್ಧ ಎಫ್‌ಐಆರ್ ಆದ ದಿನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದೆ ಏ.15ರಂದು ರಾತ್ರಿ 8.30ಕ್ಕೆ ರಾಜೀನಾಮೆ ಕೊಟ್ಟಿದ್ಯಾಕೆ? ಈ ನಡುವೆ ಸಂತೋಷ್ ಸಾವಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸಿದರೆಂಬ ಗುಮಾನಿಯಿದೆ ಎಂದು ಗಂಭೀರ ಆರೋಪ ಮಾಡಿದರು.

ಗ್ರಾಮೀಣಾಭಿವೃದ್ಧಿ ಇಲಾಖೆಯ 4 ಕೋಟಿ ರೂ. ಮೌಲ್ಯದ 108 ಗುತ್ತಿಗೆ ಕಾಮಗಾರಿಗಳಿಗೆ ಸಂಬಂಧಿಸಿ ಕಾರ್ಯಾದೇಶ, ಸ್ಥಳೀಯ ಶಾಸಕರು, ಪಂಚಾಯತ್, ಅಧಿಕಾರಿಗಳ ಅನುಮತಿ ಯಾವುದೂ ಇಲ್ಲದೆ ನಡೆದ ಕಾಮಗಾರಿಗಳ ಮಹಾ ಅಕ್ರಮದ ಸಾಕ್ಷ್ಯಗಳನ್ನು ನಾಶಪಡಿಸಿದ ಬಳಿಕ ಈ ಮುಹೂರ್ತದಲ್ಲಿ ರಾಜೀನಾಮೆ ನೀಡಿದ್ದಾರೆ. ಪೊಲೀಸರು ಈಶ್ವರಪ್ಪ ವಿರುದ್ಧ ಹಾಕಿರುವ ಸೆಕ್ಷನ್ ಗಳು ತೀರಾ ಬಾಲಿಶವಾಗಿದೆ. ಸಂತೋಷ್ ಮಾಡಿರುವ ಮೂಲ ಆರೋಪಗಳ ಬಗ್ಗೆ ಎಫ್‌ಐಆರ್ ನಲ್ಲಿ ಉಲ್ಲೇಖವೇ ಇಲ್ಲ. ಈಶ್ವರಪ್ಪ ರಾಜೀನಾಮೆಗೂ ಮುನ್ನ ಭಾರೀ ಪ್ರಮಾಣದ ಕಮಿಷನ್ ಅಕ್ರಮ ವ್ಯವಹಾರ ನಡೆದಿರುವ ಸಾಧ್ಯತೆ ದಟ್ಟವಾಗಿ ಕಾಣಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ತರಾತುರಿಯಲ್ಲಿ 5,500 ಕೋ ರೂ.ಗಳ ಟೆಂಡರ್ಗಳಿಗೆ ಕೇವಲ 8 ದಿನದಲ್ಲಿ ಮಂಜೂರಾತಿ ನೀಡಲಾಗಿದೆ. ಕೆಟಿಪಿಐ ಆಕ್ಟ್ ಪ್ರಕಾರ ಟೆಂಡರ್ ಪ್ರಕ್ರಿಯೆ ಕನಿಷ್ಟ 30 ದಿನಗಳವರೆಗೆ ಇರಬೇಕು. ಆದರೆ ಇಲ್ಲಿ ಏ.21ಕ್ಕೆ ಮುಗಿಯುವಂತೆ ಕೇವಲ 8 ದಿನಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಯಡಿಯ 5,500 ಕೋ. ರೂ.ಗಳ ಟೆಂಡರ್ ಗಳನ್ನು ನೀಡಲಾಗಿದೆ. ನಿಯಮದಂತೆ ಟೆಂಡರ್ ಪ್ರಕ್ರಿಯೆಗೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ನೇಮಿಸಿಲ್ಲ. ಅಲ್ಲದೆ 15,000 ಕೋಟಿ ರೂ.ಗಳ 62 ಕಾಮಗಾರಿಗಳಿಗೂ ಟೆಂಡರ್‌ ಕಮಿಟಿ ಒಪ್ಪಿಗೆ ನೀಡದಿದ್ದರೂ 6-10 ದಿನಗಳಲ್ಲಿ ಮಂಜೂರು ಮಾಡಲಾಗಿದೆ. ನಿರ್ದಿಷ್ಟ ಗುತ್ತಿಗೆದಾರರಿಗೆ ಬೇಕಾದಂತೆ ಟೆಂಡರ್ ಮ್ಯಾಚ್ ಫಿಕ್ಸಿಂಗ್ ನಡೆಯುತ್ತಿದೆ ಎಂದು ಆಲಂ ಪಾಷಾ ಆರೋಪಿಸಿದ್ದಾರೆ.

ಇದನ್ನೂ ಓದಿ:ಆರ್ ಎಸ್,ಎಸ್, ಬಿಜೆಪಿ ಮುಖಂಡರ ಹತ್ಯೆ; ಕೇರಳದ ಧೋರಣೆ ದೇಶಕ್ಕೆ ಅಪಾಯಕಾರಿ; ಏನಿದು ಆರೋಪ?

ಇದು ಈಶ್ವರಪ್ಪರ ಇಲಾಖೆಯಲ್ಲೊಂದಷ್ಟೇ ಅಲ್ಲ, ಇಡೀ ರಾಜ್ಯದಲ್ಲೇ ಈ ತರಹದಲ್ಲಿ ಶೇ.40ರ ಕಮಿಷನ್ ಅವ್ಯವಹಾರ ಎಗ್ಗಿಲ್ಲದೆ ನಡೆಯುತ್ತಿದೆ. ಕೇಂದ್ರ ಸರ್ಕಾರದ 1 ಲಕ್ಷ ಕೋಟಿ ರೂ. ಅನುದಾನವನ್ನು ದುರ್ಬಳಕೆ ಮಾಡಲಾಗಿದೆ. ಕೇವಲ 7- 8 ದಿನಗಳಲ್ಲಿ ಕಳ್ಳಹಾದಿಯಲ್ಲಿ ಟೆಂಡರ್ ಪಡೆದವರು, ಗ್ರಾಮೀಣ ಜನತೆಗೆ ಹೇಗೆ ಒಳ್ಳೆಯ ರಸ್ತೆ, ನೀರು, ಮೊದಲಾದ ಕಾಮಗಾರಿಗಳನ್ನು ಮಾಡಬಲ್ಲರು ಎಂದು ಪ್ರಶ್ನಿಸಿದ್ದಾರೆ.

ನನ್ನ ಪ್ರಕಾರ ಒಂದೇ ಕಾಮಗಾರಿಗೆ ಈಶ್ವರಪ್ಪ ಮತ್ತು ಇತರರ ಈ ಇಲಾಖೆಗಳಲ್ಲಿ ಏಕಕಾಲದಲ್ಲಿ ಎರಡು ಟೆಂಡರ್ ಕಡತಗಳು ಚಾಲ್ತಿಯಲ್ಲಿದೆ. ಒಂದು ಶೇ.40ರ ಕಮಿಷನ್ ನಂತೆ ಸಿದ್ಧಗೊಳಿಸಿ, ಮತ್ತೊಂದನ್ನು ಶೇ.40 ಕಮಿಷನ್ ಸಿಕ್ಕ ಬಳಿಕ ಬಿಲ್ ಪಾವತಿಸುವ ವ್ಯವಸ್ಥೆಯಿದೆ. ಈ ರೋಗಗಳ ಬಗ್ಗೆ ನಾನು ಈಗಾಗಲೇ ಪುರಾವೆ ಸಹಿತ ಎಸಿಬಿಗೆ ದೂರು ಸಲ್ಲಿಸಿದ್ದೇನೆ ಎಂದರು.

ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಕಡತಗಳನ್ನು ಪೊಲೀಸರು ಎಸಿಬಿಗೆ ನೀಡದೆ ಇರುವುದರಿಂದ ಸ್ವ ಇಚ್ಛೆಯಿಂದ ನಾನು ಏಪ್ರಿಲ್ 16ರಂದು ಎಸಿಬಿ ಎಡಿಜಿಪಿಯವರಿಗೆ ದಿ.ಸಂತೋಷ್ ಶೇ.40ರ ಕಮಿಷನ್ ಆರೋಪ ಮಾಡಿರುವ ಬಗ್ಗೆ ದೂರು ನೀಡಿದ್ದೇನೆ ಎಂದು ಆಲಂ ಪಾಷಾ ಹೇಳಿದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.