ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ


Team Udayavani, Oct 20, 2021, 6:24 PM IST

ಯುಎಇ ಉದ್ಯಮಿಗಳಿಂದ ರಾಜ್ಯದಲ್ಲಿ ಭಾರೀ ಹೂಡಿಕೆ: ಅಶ್ವತ್ಥನಾರಾಯಣ

ಬೆಂಗಳೂರು: ಸಂಯುಕ್ತ ಅರಬ್ ಸಂಸ್ಥಾನದ (ಯುಎಇ) ಹೂಡಿಕೆದಾರರು ರಾಜ್ಯದಲ್ಲಿ ಭಾರೀ ಬಂಡವಾಳ ಹೂಡಲಿದ್ದು, ಸೂಕ್ತ ಒಡಂಬಡಿಕೆಗಳನ್ನು ಮಾಡಿಕೊಳ್ಳಲು ನವೆಂಬರಿನಲ್ಲಿ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎಂದು ಐಟಿ, ಬಿಟಿ, ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ರಾಜ್ಯ ಸರಕಾರದ ನಿಯೋಗದ ಭಾಗವಾಗಿ ತಾವು ಕೈಗೊಂಡಿದ್ದ ನಾಲ್ಕು ದಿನಗಳ ತಮ್ಮ ದುಬೈ ಪ್ರವಾಸವನ್ನು ಮುಗಿಸಿಕೊಂಡು ಬಂದ ಹಿನ್ನೆಲೆಯಲ್ಲಿ ಅವರು, ಬುಧವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಹೂಡಿಕೆಗೆ ಕರ್ನಾಟಕವು ಪ್ರಶಸ್ತ ತಾಣವೆನ್ನುವುದು ಯುಎಇ, ಖತಾರ್, ಈಜಿಪ್ಟ್ ಮತ್ತು ಸೌದಿ ಅರೇಬಿಯಾದ ಉದ್ಯಮಿಗಳಿಗೆ ಮನದಟ್ಟಾಗಿದೆ. ಇದರ ಫಲವಾಗಿ ಬೆಂಗಳೂರಿನಲ್ಲಿ ಸದ್ಯದಲ್ಲೇ ಒಂದು ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ವಿಶ್ವ ದರ್ಜೆಯ `ಡಿಸೈನ್ ಡಿಸ್ಟ್ರಿಕ್ಟ್’ ಮೈದಾಳಲಿದೆ. ಇದು ಗುಣಮಟ್ಟದಲ್ಲಿ ದುಬೈ ಕೇಂದ್ರಕ್ಕಿಂತಲೂ ಉತ್ಕೃಷ್ಟವಾಗಿರಲಿದೆ ಎಂದು ಅವರು ಮಾಹಿತಿ ನೀಡಿದರು.

ಉದ್ದೇಶಿತ ಡಿಸೈನ್ ಡಿಸ್ಟ್ರಿಕ್ಟ್ 100ರಿಂದ 150 ಎಕರೆ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿದೆ. ಇದರಲ್ಲಿ ಉದ್ಯಮರಂಗಕ್ಕೆ ಬೇಕಾಗುವ ಪ್ರತಿಯೊಂದೂ ವಸ್ತುವನ್ನೂ ಜಾಗತಿಕ ಮಟ್ಟದಲ್ಲಿ ವಿನ್ಯಾಸಗೊಳಿಸಲಾಗುವುದು. ಇದು ಔದ್ಯಮಿಕ ವಿನ್ಯಾಸ, ಕಲೆ ಮತ್ತು ಫ್ಯಾಷನ್ ಸಂಸ್ಕೃತಿಗಳ ಸಂಗಮವಾಗಲಿದ್ದು, ಇಲ್ಲಿ `ಬೆಂಗಳೂರು ಡಿಸೈನ್ ಫೆಸ್ಟಿವಲ್’ ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ವಿವರಿಸಿದರು.

ಬೆಂಗಳೂರಿನಲ್ಲಿ ವಾಟರ್ ಥೀಮ್ ಪಾರ್ಕ್ ಸ್ಥಾಪಿಸುವ ಸಂಬಂಧ ದುಬೈನ ಭೂ  ಅಭಿವೃದ್ಧಿ ಸಚಿವರೊಂದಿಗೆ ನಡೆಸಿರುವ ಮಾತುಕತೆ ಕೂಡ ಫಲಪ್ರದವಾಗಿದೆ. ಕೊಲ್ಲಿ ರಾಷ್ಟ್ರಗಳಲ್ಲಿ ಎವೊಲೆನ್ಸ್ ಸಮೂಹ, ಕ್ರೆಸೆಂಟ್, ಡೆಕರ್ ಅಂಡ್ ಹಲಾಬಿ, ಆಸ್ಟರ್ ಡಿಎಂ ಹೆಲ್ತ್ ಕೇರ್ ಮತ್ತು ಮೈತ್ರಾ ಹೈಟೆಕ್ ಆಸ್ಪತ್ರೆಗಳ ಸಮೂಹಗಳು ರಾಜ್ಯದಲ್ಲಿ ಸದ್ಯದಲ್ಲೇ ಹೂಡಿಕೆ ಮಾಡಲಿವೆ. ಇದರಿಂದ ಸರಕು ಸಾಗಣೆ, ಆರೋಗ್ಯ, ಶಿಕ್ಷಣ, ಬಂದರು, ಯೋಗಕ್ಷೇಮ ಮುಂತಾದ ಕ್ಷೇತ್ರಗಳಲ್ಲಿ ಸಾವಿರಾರು ಸಂಖ್ಯೆಯ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ನುಡಿದರು.

ಅಲ್ಲಿನ ಇಸ್ಲಾಮಿಕ್ ಇನ್ವೆಸ್ಟ್ಮೆಂಟ್ ಗ್ರೂಪ್ ಸಮೂಹವು ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಹಂತಹಂತವಾಗಿ 3,500 ಕೋಟಿ ರೂ. ಹೂಡಿಕೆ ಮಾಡಲಿದೆ. ಇದರ ಜತೆಗೆ ಈ ಸಮೂಹವು ಬೆಂಗಳೂರಿನಲ್ಲಿ ತನ್ನ ಕಚೇರಿಯನ್ನು ಸದ್ಯದಲ್ಲೇ ಆರಂಭಿಸಲಿದೆ. ಈ ಸಂಬಂಧದ ಒಡಂಬಡಿಕೆಗೆ ದುಬೈನಲ್ಲೇ ಅಂಕಿತ ಹಾಕಲಾಗಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಹೆಸರಾಂತ ಮೈತ್ರಾ ಆಸ್ಪತ್ರೆಗಳ ಸಮೂಹವು ಬೆಂಗಳೂರಿನಲ್ಲಿ ರೋಬೋಟಿಕ್ ತಂತ್ರಜ್ಞಾನವುಳ್ಳ ಹೈಟೆಕ್ ಆಸ್ಪತ್ರೆಯನ್ನು ಸ್ಥಾಪಿಸಲು ಮುಂದೆ ಬಂದಿದೆ. ಇದರಿಂದಾಗಿ ಅಮೆರಿಕ ಸೇರಿದಂತೆ ಹಲವು ವಿದೇಶಗಳ ಜನರು ಕೂಡ ಅತ್ಯುತ್ತಮ ಚಿಕಿತ್ಸೆಗಾಗಿ ನಮ್ಮ ರಾಜಧಾನಿಗೆ ಬರುವಂತಾಗುತ್ತದೆ.  ಇದರ ಜತೆಗೆ ಆಸ್ಟರ್ ಸಮೂಹವು ರಾಜ್ಯದ 2 ಮತ್ತು 3ನೇ ಸ್ತರದ ನಗರಗಳಲ್ಲಿ ಅತ್ಯುತ್ತಮ ಆಸ್ಪತ್ರೆಗಳನ್ನು ಸ್ಥಾಪಿಸಲು ಒಲವು ತೋರಿದೆ ಎಂದು ಅವರು ಹೇಳಿದರು.

ಯುಎಇ ಉದ್ಯಮಿಗಳು ಭಾರತದಲ್ಲಿ ಸದ್ಯದಲ್ಲೇ 125 ಲಕ್ಷ ಕೋಟಿ ರೂಪಾಯಿ ಬಂಡವಾಳವನ್ನು ಹೂಡಲಿದ್ದಾರೆ. ಇದರಲ್ಲಿ ಕರ್ನಾಟಕಕ್ಕೆ ಸಿಂಹಪಾಲು ಹರಿದು ಬರಲಿದೆ. ಈ ಹೂಡಿಕೆದಾರರಲ್ಲಿ ಉದ್ಯಮಿಗಳ ಜೊತೆಗೆ ವೆಂಚರ್ ಕ್ಯಾಪಿಟಲಿಸ್ಟ್ಸ್ ಕೂಡ ಹೆಚ್ಚಿನ ಪ್ರಮಾಣದಲ್ಲಿ ಇದ್ದಾರೆ ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಇದಷ್ಟೆ ಅಲ್ಲದೆ, ಶಿಕ್ಷಣ ರಂಗದಲ್ಲಿ ರಾಜ್ಯವು ಮಾಡಿರುವ ಸಾಧನೆಗಳಿಂದ ಹಲವು ವಿದೇಶ ವಿ.ವಿ.ಗಳು ಪ್ರಭಾವಿತವಾಗಿವೆ. ಹೀಗಾಗಿ ಅವು ವಿಶೇಷವಾಗಿ ಬೆಂಗಳೂರಿನಲ್ಲಿ ತಮ್ಮ ಕ್ಯಾಂಪಸ್ ತೆರೆಯಲು ಮುಂದೆ ಬಂದಿವೆ. ಈ ಸಂಬಂಧ ಶೀಘ್ರದಲ್ಲೇ ಒಡಂಬಡಿಕೆಗಳನ್ನು ಅಂತಿಮಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

Anil kumble spoke about reason behind not to retain KL Rahul

ನಾವು ರಾಹುಲ್ ರನ್ನು ಉಳಿಸಿಕೊಳ್ಳಲು ಬಯಸಿದ್ದೆವು, ಆದರೆ..: ಕೋಚ್ ಅನಿಲ್ ಕುಂಬ್ಳೆ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ದೆಹಲಿ ಬೈಕ್‌ ಮಾಲೀಕರಿಗೆ “ಸೆಕ್ಸ್‌’ ಸಮಸ್ಯೆ

ದೆಹಲಿ ಬೈಕ್ ಮಾಲೀಕರಿಗೆ ಶುರುವಾದ “ಸೆಕ್ಸ್” ಸಮಸ್ಯೆ

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

bommai

ಬೂಸ್ಟರ್ ಡೋಸ್ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸುತ್ತೇವೆ: ಸಿಎಂ ಬೊಮ್ಮಾಯಿ

ಕ್ರೆಡಿಟ್ ಕಾರ್ಡ್ ನಿಂದ ಬೆಂಕಿಪೊಟ್ಟಣ ದರದವರೆಗೆ..: ಇಂದಿನಿಂದ ಏನೇನು ಬದಲಾವಣೆ?

ಕ್ರೆಡಿಟ್ ಕಾರ್ಡ್ ನಿಂದ ಬೆಂಕಿಪೊಟ್ಟಣ ದರದವರೆಗೆ..: ಇಂದಿನಿಂದ ಏನೇನು ಬದಲಾವಣೆ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಮನೆಯಲ್ಲೇ ನಿಗಾ;  ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಮನೆಯಲ್ಲೇ ನಿಗಾ; ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ

“ಹಣಕಾಸು ಇಲ್ಲದಿದ್ದರೆ ಹೊಸ ತಾಲೂಕು ರದ್ದುಪಡಿಸಿಬಿಡಿ’: ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

“ಹಣಕಾಸು ಇಲ್ಲದಿದ್ದರೆ ಹೊಸ ತಾಲೂಕು ರದ್ದುಪಡಿಸಿಬಿಡಿ’: ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

3 ತಿಂಗಳಲ್ಲ; 3 ದಿನಕ್ಕೊಮ್ಮೆ ಬಿಡುಗಡೆ!ಪರಿಹಾರ ವ್ಯವಸ್ಥೆಯಲ್ಲಿ ಬದಲಾವಣೆ; ಸಚಿವ ಅಶೋಕ್‌

3 ತಿಂಗಳಲ್ಲ; 3 ದಿನಕ್ಕೊಮ್ಮೆ ಬಿಡುಗಡೆ!ಪರಿಹಾರ ವ್ಯವಸ್ಥೆಯಲ್ಲಿ ಬದಲಾವಣೆ; ಸಚಿವ ಅಶೋಕ್‌

MUST WATCH

udayavani youtube

ಹೊಂಡ ಗುಂಡಿಯ ರಸ್ತೆಗೆ ಸಾರ್ವಜನಿಕರಿಂದ ಪೂಜೆ !

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

ಹೊಸ ಸೇರ್ಪಡೆ

high court

ಸಿಡಿ ತನಿಖಾ ವರದಿ ಅನುಮೋದಿಸಿದ ಎಸ್‌ಐಟಿ

Anil kumble spoke about reason behind not to retain KL Rahul

ನಾವು ರಾಹುಲ್ ರನ್ನು ಉಳಿಸಿಕೊಳ್ಳಲು ಬಯಸಿದ್ದೆವು, ಆದರೆ..: ಕೋಚ್ ಅನಿಲ್ ಕುಂಬ್ಳೆ

fight

ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ದೆಹಲಿ ಬೈಕ್‌ ಮಾಲೀಕರಿಗೆ “ಸೆಕ್ಸ್‌’ ಸಮಸ್ಯೆ

ದೆಹಲಿ ಬೈಕ್ ಮಾಲೀಕರಿಗೆ ಶುರುವಾದ “ಸೆಕ್ಸ್” ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.