ಟಿಕೆಟ್‌ ಸಿಕ್ಕರೆ ಮಂಡ್ಯದಲ್ಲಿ ಸ್ಪರ್ಧಿಸ್ತೇನೆ: ಅಂಬರೀಶ್‌

Team Udayavani, Nov 29, 2017, 8:29 AM IST

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೈಕಮಾಂಡ್‌ ಪಕ್ಷದ ಟಿಕೆಟ್‌ ನೀಡಿದರೆ ನಾನೇ ಸ್ಪರ್ಧಿಸುವುದಾಗಿ ಹೇಳಿರುವ ಕಾಂಗ್ರೆಸ್‌ ಶಾಸಕ ಅಂಬರೀಶ್‌, ಪತ್ನಿ ಅಥವಾ ಪುತ್ರ ಚುನಾವಣಾ ಕಣಕ್ಕಿಳಿಯುವ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಚುನಾವಣೆಗೆ ಸ್ಪರ್ಧಿಸಬೇಕೆ? ಬೇಡವೇ ಎಂಬುದನ್ನು ಹೈಕಮಾಂಡ್‌ ನಿರ್ಧರಿಸುತ್ತದೆ. ಟಿಕೆಟ್‌ ನೀಡಿದರೆ ಸ್ಪರ್ಧಿಸುತ್ತೇನೆ. ಆದರೆ, ನನ್ನ ಪತ್ನಿ ಮತ್ತು ಮಗ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ’ ಎಂದರು. “ಕಾಂಗ್ರೆಸ್‌ ಟಿಕೆಟ್‌
ಖಾತರಿಯಾಗದಿದ್ದರೆ ಜೆಡಿಎಸ್‌ ಅಥವಾ ಬಿಜೆಪಿ ಜತೆ ಹೋಗುತ್ತೀರಾ’ ಎಂಬ ಪ್ರಶ್ನೆಗೆ, “ಎರಡೂ ಪಕ್ಷಗಳಲ್ಲಿ ನನ್ನ ಸ್ನೇಹಿತರಿದ್ದು, ಒಟ್ಟಿಗೆ ಊಟ ಮಾಡುತ್ತೇವೆ ಮತ್ತು ಮಾತನಾಡುತ್ತೇವೆ. ನಾನು ಜೆಡಿಎಸ್‌ನಿಂದ ಸಂಸದನಾಗಿದ್ದವನು. ಹೀಗಾಗಿ ದೇವೇಗೌಡರ ಜತೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಜನ ಬಯಸಿದರೆ ಚುನಾವಣೆ ಯಲ್ಲಿ ಸ್ಪರ್ಧಿಸುತ್ತೇನೆ. ಅವರು ಬಯಸಿದರೆ ಮಾತ್ರ ರಾಜಕಾರಣದಲ್ಲಿರಲು ಸಾಧ್ಯ’ ಎಂದರಷ್ಟೇ ಹೊರತು ನೇರ ಉತ್ತರ ನೀಡಲಿಲ್ಲ.

ನಟಿ ರಮ್ಯಾ ಈಗ ಸ್ಟಾರ್‌ ಪ್ರಚಾರಕಿ. ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ನಿರ್ವಹಿಸುತ್ತಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಅವರಿಗೆ ಪಕ್ಷ ಟಿಕೆಟ್‌ ಕೊಟ್ಟರೆ ಚುನಾವಣೆಯಲ್ಲಿ ಅವರ ಪರ ಕೆಲಸ ಮಾಡಲೇಬೇಕು ಮತ್ತು ಮಾಡುತ್ತೇನೆ. ರಮ್ಯಾ, ಸೌಮ್ಯಾ, ಸುಮಾ ಯಾರಿಗೇ ಪಕ್ಷದಿಂದ ಟಿಕೆಟ್‌ ಕೊಟ್ಟರೂ ಅವರ ಪರ ಕೆಲಸ ಮಾಡುತ್ತೇನೆ.
 ●ಅಂಬರೀಶ್‌, ಕಾಂಗ್ರೆಸ್‌ ಶಾಸಕ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕುಂಬಳಕಾಯಿಯಲ್ಲಿ ಸಿಹಿಕುಂಬಳ, ಬೂದು ಕುಂಬಳ ಎಂಬ ಎರಡು ವಿಧಗಳಿವೆ. ಅದರಲ್ಲಿ ಚೀನಿಕಾಯಿ ಎಂದು ಕರೆಯಲ್ಪಡುವ ಸಿಹಿಗುಂಬಳವನ್ನು ತರಕಾರಿಯಾಗಷ್ಟೇ ಅಲ್ಲದೆ, ಮನೆ...

  • ಏಕಾದಶಿ, ಸಂಕಷ್ಟಹರ ಚತುರ್ಥಿ, ಅಂತ ದೇವರ ಹೆಸರಿನಲ್ಲಿ ಉಪವಾಸ ಮಾಡುವವರಿದ್ದಾರೆ. ಹಾಗೆ ತಿಂಗಳಿಗೊಮ್ಮೆ ಉಪವಾಸ ಮಾಡುವುದು ಆರೋಗ್ಯಕ್ಕೆ ಕೂಡಾ ಒಳ್ಳೆಯದು. ಹಾಗೆಯೇ,...

  • ಹಿಂದಿನ ಕಾಲದಲ್ಲಿ ಮೆಹಂದಿ ಗಿಡವನ್ನು ಅರೆದು ಬಹುತೇಕ ಎಲ್ಲ ಸಂದರ್ಭದಲ್ಲಿಯೂ ಒಂದೇ ಡಿಸೈನ್‌ ಮಾಡುತ್ತಿದ್ದರಂತೆ. ಆದರೆ ಕಾಲಕ್ರಮೇಣ ಮೆಹೆಂದಿ ಕೊನ್‌ ಪರಿಕಲ್ಪನೆ...

  • ಮಜೂರು - ಮಲ್ಲಾರು ಅವಳಿ ಗ್ರಾಮಗಳ ಕಾರ್ಯ ವ್ಯಾಪ್ತಿಯ ಹೈನುಗಾರರ ಬೆಳವಣಿಗೆಯ ಉದ್ದೇಶವನ್ನು ಇಟ್ಟುಕೊಂಡು ದ. ಕ. ಹಾಲು ಒಕ್ಕೂಟದ ಅಧೀನದಲ್ಲಿ 1989 ಮೇ 5ರಂದು ಮಜೂರು...

  • ಗುಣಮಟ್ಟದ ಹಾಲು, ಗರಿಷ್ಠ ಕೃತಕ ಗರ್ಭಧಾರಣೆ, ಹೆಚ್ಚು ಹಾಲು ಸಂಗ್ರಹದಲ್ಲಿ ಉತ್ತಮ ಸಾಧನೆ ಮಾಡಿ, ಅವಿಭಜಿತ ದ.ಕ. ಹಾಲು ಉತ್ಪಾದಕರ ಸಹಕಾರಿ ಒಕ್ಕೂಟ ಮಂಗಳೂರಿನಿಂದ...