ಕೋವಿಡ್-19 ಉಪಕರಣ ಖರೀದಿ ದಾಖಲೆಗಳಿರುವ ಪೆನ್ ಡ್ರೈವ್ ನನ್ನ ಬಳಿ ಇಲ್ಲ: ಮುರುಗೇಶ್ ನಿರಾಣಿ
Team Udayavani, Jul 8, 2020, 12:47 PM IST
ಬೆಂಗಳೂರು: ಕೋವಿಡ್-19 ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನಲಾದ ದಾಖಲೆಗಳಿಗೆ ಸಂಬಂಧಿಸಿದಂತೆ ತಮ್ಮ ಬಳಿ ಯಾವುದೇ ಪೆನ್ ಡ್ರೈವ್ ಇಲ್ಲ ಎಂದು ಬೀಳಗಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಸೋಂಕಿಗೆ ಚಿಕಿತ್ಸೆ ನೀಡಲು ಖರೀದಿ ಮಾಡಿರುವ ವೈದ್ಯಕೀಯ ಸಲಕರಣೆಗಳಲ್ಲಿ ಭ್ರಷ್ಟಾಚಾರ ನಡೆದಿದ್ದು, ಅದಕ್ಕೆ ಸಂಬಂಧಿಸಿದ 125 ಪುಟಗಳ ದಾಖಲೆಗಳ ಪೆನ್ ಡ್ರೈವ್ ತಮ್ಮ ಬಳಿ ಇದೆ ಎಂದು ಕೆಲವು ಸಾಮಾಜಿಕ ತಾಣಗಳು, ವೆಬ್ ಪೋರ್ಟಲ್ ಹಾಗೂ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ.
ಬಿಜಾಪುರದಿಂದ ಬರುವಾಗ ನನ್ನೊಂದಿಗೆ ಒಬ್ಬರು ಅಧಿಕಾರಿ ಬಂದಿದ್ದರು, ಅವರು ಸುಮಾರು 125 ಪುಟಗಳ ದಾಖಲೆಗಳ ಪೆನ್ ಡ್ರೈವ್ ತಂದಿದ್ದು, ಅದನ್ನು ತಮಗೆ ಕಳುಹಿಸಿಕೊಡುತ್ತೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿರುವುದು ನಿರಾಧಾರವಾಗಿದೆ.
ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಖರೀದಿಸಿರುವ ವೆಂಟಿಲೇಟರ್, ಪಿಪಿಇ ಕಿಟ್, ಮುಖಗವಸು, ಸರ್ಜಿಕಲ್ ಕೈಗವಸು, ಪರೀಕ್ಷೆ ಕೈಗವಸು, ಆಮ್ಲಜನಕ ಸಿಲಿಂಡರ್, ಕೋವಿಡ್ ಪರೀಕ್ಷೆ – ಸೋಂಕಿತರ ದಿನದ ಖರ್ಚು ಸೇರಿದಂತೆ ಇತರೆ ವೆಚ್ಚಗಳ ದಾಖಲೆಗಳು ನನ್ನ ಬಳಿ ಇಲ್ಲ ಎಂದು ಮುರುಗೇಶ್ ನಿರಾಣಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ