D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

ಒಕ್ಕಲಿಗನಾಗಿ ಹುಟ್ಟಿದ್ದಕ್ಕೆ ಆ ಸಮುದಾಯದ ಗೌರವ ಉಳಿಸೋದು ನನ್ನ ಧರ್ಮ

Team Udayavani, May 5, 2024, 12:02 AM IST

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

ಬೆಂಗಳೂರು: ನಾನು ಒಕ್ಕಲಿಗನಾಗಿ ಹುಟ್ಟಿದ್ದೇನೆ. ಆ ಸಮಾಜಕ್ಕೆ ರಕ್ಷಣೆ ಕೊಡುವ ಜವಾಬ್ದಾರಿ ಇದೆ. ಈ ಸಮುದಾಯದ ಜನರ ಸ್ವಾಭಿಮಾನ, ಗೌರವ ಉಳಿಸಲು ನಾನು ಅವರ ಸೇವೆ ಮಾಡುತ್ತೇನೆ. ಅದು ನನ್ನ ಧರ್ಮ. ಉಳಿದಂತೆ ನನಗೆ ನಾಯಕತ್ವ ಪಟ್ಟ ಬೇಡ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯದಲ್ಲಿ ಒಕ್ಕಲಿಗರ ನಾಯಕತ್ವಕ್ಕಾಗಿ ಇಂತಹ ಪ್ರಕರಣಗಳು ಆಚೆ ಬರುತ್ತಿವೆ ಎಂದು ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವೀಡಿಯೋ ಪೆನ್‌ಡ್ರೈವ್‌ ಪ್ರಕರಣ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, ಇದೆ ಲ್ಲವೂ ಬಿಜೆಪಿ ಸೃಷ್ಟಿಸಿರುವ ಚರ್ಚೆಗಳು. ನನಗೆ ಯಾವುದೇ ನಾಯಕತ್ವ ಬೇಡ. 4 ವರ್ಷಗಳ ಹಿಂದೆಯೇ ಕಾಂಗ್ರೆಸ್‌ ನನ್ನನ್ನು ಪಕ್ಷದ ರಾಜ್ಯಾಧ್ಯಕ್ಷನಾಗಿ ಮಾಡಿದೆ. ಬಿಜೆಪಿಗರು ಗಳಿಗೆಗೊಂದು ಮಾತನಾಡುತ್ತಿದ್ದಾರೆ. ನಾನು ಒಕ್ಕಲಿಗನಾಗಿ ಹುಟ್ಟಿದ್ದೇನೆ. ಆ ಸಮಾಜಕ್ಕೆ ರಕ್ಷಣೆ ಕೊಡುವ ಜವಾಬ್ದಾರಿ ಇದೆ. ಈ ಸಮುದಾಯದ ಜನರ ಸ್ವಾಭಿ ಮಾನ, ಗೌರವ ಉಳಿಸಲು ನಾನು ಅವರ ಸೇವೆ ಮಾಡುತ್ತೇನೆ. ಅದು ನನ್ನ ಧರ್ಮ ಎಂದರು.

ಎಚ್‌ಡಿಕೆ ನಿಲುವು ಬದಲಿಸುವುದೇಕೇ?
ಪೆನ್‌ಡ್ರೈವ್‌ ಅವರ ಕುಟುಂಬದ ವಿಚಾರ. ಆದರೆ ಕುಮಾರಸ್ವಾಮಿ ಮಾತು ಆಗಾಗ್ಗೆ ಬದಲಾಗುತ್ತಲೇ ಬಂದಿದೆ. ಬೇಕಿದ್ದರೆ ಕಳೆದ ವಿಧಾನಸಭೆ ಚುನಾವಣೆ ಯಿಂದ ಈಚೆಗೆ ಅವರ ಕುಟುಂಬ ಸದಸ್ಯರ ಹೇಳಿಕೆಗಳನ್ನು ನೋಡಿಕೊಂಡು ಬನ್ನಿ. ಈಗ ಪೆನ್‌ಡ್ರೈವ್‌ ಪ್ರಕರಣದಲ್ಲೂ ಕುಮಾರಸ್ವಾಮಿ ಗಂಟೆಗೊಂದು, ಗಳಿಗೆಗೊಂದು ಹೇಳಿಕೆ ನೀಡುತ್ತಿದ್ದಾರೆ. ನಿಲುವು ಬದಲಿಸುತ್ತಿದ್ದಾರೆ. ಪೆನ್‌ಡ್ರೈವ್‌ ವಿಚಾರದಲ್ಲಿ ಕುಮಾರಸ್ವಾಮಿ ನಿಲುವು ಬದಲಿಸುತ್ತಿರುವುದೇಕೆ ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ.

ಮೇ 7ರ ನಂತರ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಮೇ 7ರ ವರೆಗೆ ಯಾಕೆ ಕಾಯಬೇಕು? ಇದರ ಮೂಲ ಏನು? ಇದರ ಹಿನ್ನೆಲೆ ಯಾರು ಎಂದು ನಾವು ಬಿಚ್ಚಿ ಇಡಬೇಕಾ? ಇದು ಅವರ ಕುಟುಂಬದ ಆಂತರಿಕ ವಿಚಾರ. ಈ ಬಗ್ಗೆ ಮಾಧ್ಯಮದವರು ವಿಶ್ಲೇಷಣೆ ಮಾಡಿದ್ದಾರೆ. ಕುಮಾರಸ್ವಾಮಿ ಅವರೇ, ಉಪ್ಪು ತಿಂದವರು ನೀರು ಕುಡಿಯಬೇಕು, ನಮ್ಮ ಕುಟುಂಬ ಬೇರೆ, ಅವರ ಕುಟುಂಬ ಬೇರೆ ಎಂದು ಹೇಳಿದ್ದಾರೆ. ಹಿಂದೆ ನಮ್ಮ ಕುಟುಂಬದವರಿಗೆ ಟಿಕೆಟ್‌ ನೀಡುವುದಿಲ್ಲ ಎಂದು ಹೇಳಿದ್ದೂ ಅವರೇ. ಪ್ರಜ್ವಲ್‌ನಿಂದ ತಪ್ಪಾಗಿದೆ ಕ್ಷಮಿಸಿ ಎಂದು ಕ್ಷಮೆ ಕೇಳಿದ್ದು ಅವರೇ. ಆದರೆ ಕುಮಾರಸ್ವಾಮಿ ಈಗ ತಮ್ಮ ನಿಲುವು ಬದಲಿಸುತ್ತಿರುವುದೇಕೆ ಎಂದರು.

ಟಾಪ್ ನ್ಯೂಸ್

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.