ಸಂಜನಾರನ್ನು ನಾನು ಬೆಂಗಳೂರಲ್ಲೇ ನೋಡಿಲ್ಲ: ಜಮೀರ್ ಅಹಮದ್ ಖಾನ್
Team Udayavani, Sep 11, 2020, 12:31 PM IST
ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ನಟಿ ಸಂಜನಾರನ್ನು ನಾನು ಬೆಂಗಳೂರಿನಲ್ಲೇ ನೋಡಿಲ್ಲ. ಇನ್ನೂ ಶ್ರೀಲಂಕಾದಲ್ಲಿ ಹೇಗೆ ನೋಡಿರಲಿ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಹೇಳಿದರು.
ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಮಾತನಾಡಿದ ಅವರು, ಬಂಧಿತನಾಗಿರುವ ಫಾಜಿಲ್ ಗೂ ನನಗೂ ನಾಲ್ಕು ವರ್ಷದ ಹಿಂದೆ ಪರಿಚಯವಿತ್ತು. ಈಗ ಇಲ್ಲ. ಯಾರ್ಯಾರೋ ಬರ್ತಿರ್ತಾರೆ. ಅವರೆಲ್ಲಾ ಆಪ್ತರು ಅಂತಾ ಹೇಳೋಕ್ಕಾಗುತ್ತದೆಯೇ ಎಂದು ಪ್ರಶ್ನಿಸಿದರು.
ಸರ್ಕಾರ ಇದರ ಬಗ್ಗೆ ತನಿಖೆ ಮಾಡಲಿ. ರಾಜ್ಯದಲ್ಲಿ ಬಿಜೆಪಿಯ ಸರ್ಕಾರವೇ ಇದೆ. ತನಿಖೆ ಮಾಡಲಿ ಎಂದರು. ಸಂಜನಾ ಕೂಡಾ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ತನಿಖೆ ಮಾಡಲಿ. ನಾನು ಪ್ರಕರಣದಲ್ಲಿ ಇದ್ದದ್ದು ಸಾಬೀತಾದರೆ ರಾಜ್ಯದಲ್ಲಿರುವ ನನ್ನ ಆಸ್ತಿ ಸರ್ಕಾರಕ್ಕೆ ಕೊಟ್ಟು ಬಿಡುತ್ತೇನೆ ಎಂದರು.
ಇದನ್ನೂ ಓದಿ: ಡ್ರಗ್ ಪ್ರಕರಣದಲ್ಲಿ ಯಾವ ಮಾಫಿಯಾ ಇದ್ದರೂ ತನಿಖೆಯಲ್ಲಿ ಗೊತ್ತಾಗಲಿದೆ : ಬಿ.ಸಿ ಪಾಟೀಲ್
ಪ್ರಶಾಂತ್ ಸಂಬರಗಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಯಿಸಿದ ಜಮೀರ್, ಸಂಬರಗಿ ಯಾರ್ರೀ ಕಾಂಜಿಪಿಂಜಿ. ಅವನು ಹೇಳುವುದು ಕೇಳಿದ್ಯಾಕೆ? ಸರ್ಕಾರ ತನಿಖೆ ಮಾಡಲಿ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ