
ಸಮಸ್ಯೆ ಸರಿಪಡಿಸಿಕೊಂಡು ಬರಲು ಸಿದ್ದುಗೆ ಹೇಳಿದ್ದೇನೆ: ಮುನಿಯಪ್ಪ
Team Udayavani, Nov 16, 2022, 11:41 PM IST

ಬೆಂಗಳೂರು: ಸಿದ್ದರಾಮಯ್ಯ ಅವರು ಕೋಲಾರಕ್ಕೆ ಬರಲು ಸ್ವಾಗತಿಸಿದ್ದೇನೆ. ಆದರೆ, ಜಿಲ್ಲಾ ಕಾಂಗ್ರೆಸ್‌ನಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಬನ್ನಿ ಎಂದು ನಾನು ಹೇಳಿದ್ದೇನೆ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಹೇಳಿದ್ದಾರೆ.
ಈ ಮೂಲಕ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆಗೆ ಮುಂದಾಗಿರುವ ಸಿದ್ದರಾಮಯ್ಯ ಆವರಿಗೆ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಪರೋಕ್ಷ ಎಚ್ಚರಿಕೆ ಮತ್ತು ಸಲಹೆ ನೀಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂಲ ಕಾಂಗ್ರೆಸಿಗರು ಹಾಗೂ ನಿಷ್ಠಾವಂತ ಕಾಂಗ್ರೆಸಿಗರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕಳೆದ ಬಾರಿ ಬಿಜೆಪಿ ಪರ ಇದ್ದವರನ್ನು ನಂಬಬೇಡಿ ಎಂದು ಹೇಳಿದ್ದೇನೆ ಎಂದರು.
ನಾನು ಸಿದ್ದರಾಮಯ್ಯ ಅವರನ್ನು ಸೋಲಿಸಲು ಸಂಚು ರೂಪಿಸಿಲ್ಲ. ಪಕ್ಷದ ಅಭ್ಯರ್ಥಿ ಯಾರೇ ಆದರೂ, ಅವರ ಪರ ಕೆಲಸ ಮಾಡುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.
ಟಾಪ್ ನ್ಯೂಸ್
