
ಹಬ್ಬದ ಸಂದರ್ಭವೆಂದು ದರ ಏರಿಸಿದರೆ ಪರ್ಮಿಟ್ ರದ್ದು; ಸಾರಿಗೆ ಸಂಸ್ಥೆಗಳಿಗೆ ರಾಮುಲು ಎಚ್ಚರಿಕೆ
Team Udayavani, Sep 30, 2022, 11:20 AM IST

ಬೆಂಗಳೂರು: ದಸರಾ ಸಂದರ್ಭದಲ್ಲಿ ಬೆಂಗಳೂರಿನಿಂದ ಬೇರೆ ಬೇರೆ ಊರುಗಳಿಗೆ ಪ್ರಯಾಣ ಬೆಳೆಸುವ ಪ್ರಯಾಣಿಕರಿಗೆ ಅಧಿಕ ದರ ವಿಧಿಸುವ ಖಾಸಗಿ ಸಾರಿಗೆ ಸಂಸ್ಥೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಈಗ ಸಾರಿಗೆ ಇಲಾಖೆ ಮುಂದಾಗಿದೆ.
ಈ ಬಗ್ಗೆ ಅಧಿಕೃತ ಟ್ವೀಟ್ ಮಾಡಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, ನಿಗದಿತ ದರಕ್ಕಿಂತ ಹೆಚ್ಚಿನ ಹಣ ಕೀಳುವ ಸಾರಿಗೆ ಸಂಸ್ಥೆಗಳ ಪರ್ಮಿಟ್ ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಗೆ ತೊಂದರೆ ಕೊಡದೆ, ಯಾವ ಯಾವ ರೂಟ್‍ಗಳಿಗೆ ಎಷ್ಟು ದರ ನಿಗಧಿ ಪಡಿಸಿದೆಯೋ ಅಷ್ಟನ್ನು ಮಾತ್ರ ತೆಗೆದು ಕೊಳ್ಳಬೇಕು. ಅದನ್ನು ಬಿಟ್ಟು ಹೆಚ್ಚಿನ ಹಣ ವಸೂಲಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯ.
ದಸರಾ ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರರ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕು. ಇಲ್ಲದಿದ್ದರೆ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಲಾಗುತ್ತದೆ. ಯಾವುದೇ ಕಾರಣಕ್ಕೂ ರಾಜಿ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲೇ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ಬೇಕಾಬಿಟ್ಟಿ ದರ ವಸೂಲು ಮಾಡುವುದಕ್ಕೆ ಕಡಿವಾಣ ಹಾಕಲು ಈ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಕಲಾಸಿಪಾಳ್ಯ ಬಸ್ ನಿಲ್ದಾಣ, ಮೆಜೆಸ್ಟಿಕ್ ಮತ್ತು ಸುತ್ತಲಿನ ಪ್ರದೇಶ, ಶಾಂತಿನಗರ, ಮೈಸೂರು ರಸ್ತೆ ಸೇರಿದಂತೆ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಲಿವೆ.
ದಸರಾ ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರರ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗಧಿಪಡಿಸಿದ ದರವನ್ನಷ್ಟೇ ಪಡೆಯಬೇಕು. ಇಲ್ಲದಿದ್ದರೆ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಲಾಗುತ್ತದೆ. ಯಾವುದೇ ಕಾರಣಕ್ಕೂ ರಾಜೀ ಇಲ್ಲ! 1/7#ಜನಸ್ನೇಹಿ_ಸಾರಿಗೆ_ನನ್ನಧ್ಯೇಯ
— B Sriramulu (@sriramulubjp) September 30, 2022
ಒಂದು ವೇಳೆ ಹೆಚ್ಚು ಟಿಕೆಟ್ ದರ ಕೇಳಿದರೆ ಪ್ರಯಾಣಿಕರು ಸಹಾಯವಾಣಿಗೆ ಕರೆ ಮಾಡಿ ಬಸ್ ನಂಬರ್, ಮಾರ್ಗ ತಿಳಿಸಿ ದೂರು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಇದಕ್ಕಾಗಿ ಸಾರಿಗೆ ಇಲಾಖೆಯು ಸಹಾಯವಾಣಿಯನ್ನು ಆರಂಭಿಸಿದ್ದು 94498 63429 / 94498 63426 ಸಂಪರ್ಕಿಸಬಹುದು. ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಮೊದಲ ಬಾರಿ ಮಗಳ ಮುಖ ರಿವೀಲ್ ಮಾಡಿದ ಪಿಂಕಿ: ವೈರಲ್ ಆಯಿತು ಕ್ಯೂಟ್ ಮಾಲ್ತಿ ಫೋಟೋ

ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಗುಂಡಿನ ದಾಳಿ; ಮೃತ್ಯು

ರಸ್ತೆ ಬದಿ ನಿಂತಿದ್ದವರ ಮೇಲೆ ಸಾಮೂಹಿಕ ಗುಂಡಿನ ದಾಳಿ: 9 ಮಂದಿಗೆ ಗಾಯ

ಉದ್ದಿಮೆಗಳ ಖಾತಾ ಬದಲಾವಣೆ ಸಮಸ್ಯೆಗೆ ತ್ವರಿತ ಪರಿಹಾರ: ಅತಿಕ್

ದೊಡ್ಡ ಟ್ರೋಫಿ ಇನ್ನೂ ಒಂದಿದೆ: ಶಫಾಲಿ ವರ್ಮ