ಪಿಎಸ್ಐ ನೇಮಕ ಅಕ್ರಮ: ಮರು ಪರೀಕ್ಷೆ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ
Team Udayavani, Jul 19, 2022, 9:36 PM IST
ಬೆಂಗಳೂರು: ಪರೀಕ್ಷಾ ಅಕ್ರಮ ನಡೆದ ಹಿನ್ನೆಲೆಯಲ್ಲಿ ಪಿಎಸ್ಐ ನೇಮಕಾತಿಯ ಲಿಖೀತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸಲು ಸರಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ವಜಾಗೊಳಿಸಿದೆ.
ಸರಕಾರದ ಆದೇಶ ಪ್ರಶ್ನಿಸಿ ಆಯ್ಕೆಗೊಂಡ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿ ಕಾಯ್ದಿರಿಸಿದ್ದ ಆದೇಶವನ್ನು ಕೆಎಟಿಯ ನ್ಯಾಯಾಂಗ ಸದಸ್ಯ ಟಿ. ನಾರಾಯಣ ಸ್ವಾಮಿ ನೇತೃತ್ವದ ಪೀಠ ಮಂಗಳವಾರ ಪ್ರಕಟಿಸಿದ್ದು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಕಳಂಕಿತ ಹಾಗೂ ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಈಗಾಗಲೇ ಹೊರಡಿಸಿರುವ ಅಧಿಸೂಚನೆ ಅನುಸಾರವೇ ನೇಮಕಾತಿ ಆದೇಶ ನೀಡಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಲ್ .ಎನ್. ಪವಿತ್ರಾ ಸೇರಿ 28 ಅಭ್ಯರ್ಥಿಗಳು ಕೆಎಟಿ ಮೆಟ್ಟಿಲೇರಿದ್ದರು. ಸರಕಾರದ ವಾದವನ್ನು ಮಾನ್ಯ ಮಾಡಿರುವ ಕೆಎಟಿ ಪೀಠ ಅರ್ಜಿಗಳನ್ನು ವಜಾಗೊಳಿಸಿದೆ.
ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಅಸಾಧ್ಯ
ವಿಚಾರಣೆ ವೇಳೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆರ್. ಸುಬ್ರಹ್ಮಣ್ಯ, ಇದೊಂದು ದೊಡ್ಡ ಮಟ್ಟದ ಹಗರಣವಾಗಿದೆ. ನೇಮಕಾತಿ ಪ್ರಾಧಿಕಾರದ ವಿರುದ್ಧವೇ ಅಕ್ರಮವೆಸಗಿರುವ ಆರೋಪವಿರುವ ಹಿನ್ನೆಲೆಯಲ್ಲಿ ಕಳಂಕಿತ ಹಾಗೂ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಪ್ರಕರಣದಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆಯ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿವರಿಸಿದ್ದರು. ಸರಕಾರದ ಈ ವಾದವನ್ನು ಕೆಎಟಿ ಮಾನ್ಯ ಮಾಡಿದೆ.
ಅರ್ಜಿದಾರರ ಮನವಿ
ಪಿಎಸ್ಐ ನೇಮಕಾತಿಗೆ ನಡೆಸಲಾಗಿದ್ದ ಲಿಖೀತ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸುವ ಸಂಬಂಧ ಎ. 29ರಂದು ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದರು. ಜತೆಗೆ, ಅಂತಿಮ ಪಟ್ಟಿಯು ಈ ಅರ್ಜಿ ಸಂಬಂಧ ಕೆಎಟಿ ಕೈಗೊಳ್ಳುವ ನಿರ್ಧಾರಕ್ಕೆ ಒಳಪಟ್ಟಿರುವಂತೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮಧ್ಯಾಂತರ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ