
ಅಕ್ರಮ ಹಣ ವರ್ಗಾವಣೆ ಕೇಸ್; ಡಿಕೆಶಿ ಸೇರಿ ಐವರಿಗೆ ಇ.ಡಿ. ಸಮನ್ಸ್ ಜಾರಿ
Team Udayavani, Feb 2, 2019, 5:45 AM IST

ಬೆಂಗಳೂರು: ಆದಾಯ ತೆರಿಗೆ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಐದು ಮಂದಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಎಐಸಿಸಿಗೆ ಹಣ ಪಾವತಿ ಹಾಗೂ ಹವಾಲಾ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಚಿವ ಡಿಕೆ ಶಿವಕುಮಾರ್, ಸಚಿನ್ ನಾರಾಯಣ್, ಆಂಜನೇಯ, ಸುನೀಲ್ ಶರ್ಮಾ ಹಾಗೂ ರಾಜೇಂದ್ರಗೆ ಸಮನ್ಸ್ ಜಾರಿ ಮಾಡಿದೆ ಎಂದು ಮೂಲಗಳು ಹೇಳಿವೆ.
ಐಟಿಯಿಂದಲೂ ಸಚಿವ ಡಿಕೆಶಿಗೆ ನೋಟಿಸ್ ನೀಡಲಾಗಿದೆ. ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡುವಂತೆ ಆದಾಯ ತೆರಿಗೆ ಇಲಾಖೆ ಕೂಡಾ ನೋಟಿಸ್ ನಲ್ಲಿ ತಿಳಿಸಿದೆ.
ಅಕ್ರಮ ಹಣ ವರ್ಗಾವಣೆಯಲ್ಲಿ ಪ್ರಕರಣ ದಾಖಲಾಗಿದ್ದರಿಂದ ದೆಹಲಿಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿಗಳು ಹೇಳಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
