ಮುಂದಿನ ಮೂರು ವರ್ಷಗಳಲ್ಲಿ ಮಾದರಿ ರಾಜ್ಯ ಮಾಡಲು ಪ್ರಯತ್ನಿಸುತ್ತೇನೆ: ಬಿಎಸ್ ಯಡಿಯೂರಪ್ಪ
Team Udayavani, Jul 27, 2020, 1:30 PM IST
ಬೆಂಗಳೂರು: ಕೋವಿಡ್-19 ಕಾಣಿಸಿಕೊಂಡು ರಾಜ್ಯದ ಅಭಿವೃದ್ಧಿ ಕಾರ್ಯಕ್ಕೆ ಕಂಟಕವಾಗಿ ಪರಿಣಮಿಸದ್ದು ನೋವುಂಟು ಮಾಡಿದೆ. ರಾಜ್ಯದ ಜನರ ಋಣ ತೀರಿಸಬೇಕಿದ್ದು, ಅದಕ್ಕಾಗಿ ಶ್ರಮಿಸಿ ಮುಂದಿನ ಮೂರು ವರ್ಷಗಳಲ್ಲಿ ಮಾದರಿ ರಾಜ್ಯ ಮಾಡಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಸೋಮವಾರ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಬಗ್ಗೆ ಚರ್ಚಿಸುವುದಿಲ್ಲ. ಕೋವಿಡ್ ನೊಂದಿಗೆ ಬದುಕಬೇಕಿದೆ. ಎಲ್ಲ ಜಿಲ್ಲಾಧಿಕಾರಿಗಳು ಸೋಂಕು ನಿಯಂತ್ರಣಕ್ಕೆ ಶ್ರಮವಹಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ನಾನು ಎಂದೂ ದ್ವೇಷದ ರಾಜಕಾರಣ ಮಾಡಿಲ್ಲ. ಟೀಕಿಸಿದವರನ್ನೂ ಗೌರವದಿಂದ ಕಾಣುತ್ತೇನೆ. ರಾಜ್ಯದ ಅಭಿವೃದ್ಧಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಇದರ ವೇಳೆ 10 ಮಂದಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444