ಕ್ಯಾಬ್ನಲ್ಲೇ ಚಾಲಕನಿಂದ ಅತ್ಯಾಚಾರ
Team Udayavani, Sep 23, 2021, 6:04 AM IST
ಬೆಂಗಳೂರು: ಬೆಂಗಳೂರಿನ ಜೀವನ್ ಭೀಮಾನಗರದಲ್ಲಿ ಕ್ಯಾಬ್ಚಾಲಕನೊಬ್ಬ ಬುಧವಾರ ನಸುಕಿನ ಜಾವ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾನೆ.
ಘಟನೆ ಸಂಬಂಧ ಆಂಧ್ರಪ್ರದೇಶದ ಚಿತ್ತೂರು ಮೂಲದ ಕ್ಯಾಬ್ ಚಾಲಕ ದೇವರಾಜಲು(30) ಎಂಬಾತನನ್ನು ಬಂಧಿಸಲಾಗಿದೆ. ಜೀವನ್ ಭೀಮಾನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಹೊಟೇಲ್ನಲ್ಲಿ ಮ್ಯಾನೇಜರ್ ಆಗಿರುವ ಸಂತ್ರಸ್ತೆ ಮಂಗಳವಾರ ರಾತ್ರಿ ಸ್ನೇಹಿತರೊಬ್ಬರ ಮನೆಯಲ್ಲಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಲಾಗಿದೆ. ಬಳಿಕ ನಸುಕಿನ 3.30ರ ಸುಮಾರಿಗೆ ಎಚ್ಎಸ್ಆರ್ ಲೇಔಟ್ನಿಂದ ಮುರುಗೇಶ್ಪಾಳ್ಯದಲ್ಲಿರುವ ಮನೆಗೆ ಹೋಗಲು ಕ್ಯಾಬ್ ಬುಕ್ ಮಾಡಿದ್ದರು. ಸ್ಥಳಕ್ಕೆ ಬಂದ ಆರೋಪಿ, ಸಂತ್ರಸ್ತೆಯನ್ನು ಕಾರಿನಲ್ಲಿ ಹತ್ತಿಸಿಕೊಂಡಿದ್ದು, ಸ್ವಲ್ಪ ದೂರ ಹೋಗುತ್ತಿದ್ದಂತೆ ನಿದ್ದೆ ಮಂಪರಿನಲ್ಲಿದ್ದಾಗ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆ ಹಾಗೂ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ವರದಿ ಬಂದ ಬಳಿಕ ಸತ್ಯಾಂಶ ತಿಳಿಯಲಿದೆ ಎಂದು ಪೊಲೀಸರು ಹೇಳಿದರು.
ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು, ಕ್ಯಾಬ್ ಚಾಲಕನನ್ನು ಬಂಧಿಸಲಾಗಿದೆ. ಇಬ್ಬರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಮುಂದುವರಿದಿದೆ.– ಎಸ್. ಶರಣಪ್ಪ, ಪೂರ್ವ ವಿಭಾಗ ಡಿಸಿಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
MUST WATCH
ಹೊಸ ಸೇರ್ಪಡೆ
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !
Kolkata Raiders ಕೋಚ್ ಬಗ್ಗೆ ಆಟಗಾರ ಡೇವಿಡ್ ವೀಸ್ ಆರೋಪ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್