ಉತ್ತರ ಒಳನಾಡಿನಲ್ಲಿ ಹೆಚ್ಚಿದ ಚಳಿ
Team Udayavani, Dec 8, 2019, 3:00 AM IST
ಬೆಂಗಳೂರು/ಮಂಗಳೂರು: ಶನಿವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ ಒಣಹವೆ ಇತ್ತು. ಒಳನಾಡಿನ ಒಂದೆರಡು ಕಡೆಗಳಲ್ಲಿ ತಾಪಮಾನದಲ್ಲಿ ಇಳಿಕೆ ಕಂಡು ಬಂದರೆ, ಉಳಿದಂತೆ ಕರಾವಳಿ ಮತ್ತು ಒಳನಾಡಿನಲ್ಲಿ ತಾಪಮಾನ ವಾಡಿಕೆಯಷ್ಟಿತ್ತು. ಬೀದರ್ನಲ್ಲಿ ರಾಜ್ಯದಲ್ಲಿಯೇ ಕನಿಷ್ಠ 11.6 ಡಿ.ಸೆ.ತಾಪಮಾನ ದಾಖಲಾಯಿತು.
ಸೋಮವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆಗಳಿದ್ದರೆ, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.