2028ರ ಒಲಂಪಿಕ್ಸ್ ಪದಕಪಟ್ಟಿಯಲ್ಲಿ ಭಾರತ ಟಾಪ್ 10ರಲ್ಲಿರಬೇಕು: ಸಚಿವ ಕಿರಣ್ ರಿಜಿಜು


Team Udayavani, Feb 22, 2021, 5:03 PM IST

2028ರ ಒಲಂಪಿಕ್ಸ್ ಪದಕಪಟ್ಟಿಯಲ್ಲಿ ಭಾರತ ಟಾಪ್ 10ರಲ್ಲಿರಬೇಕು: ಸಚಿವ ಕಿರಣ್ ರಿಜಿಜು

ಬೆಂಗಳೂರು: ದೇಶದ ಎಲ್ಲ ಕ್ರೀಡಾ ಕೇಂದ್ರಗಳಲ್ಲಿ ತಾರಾ ಹೊಟೆಲ್ ನಂತಹ ಮೂಲ ಸೌಕರ್ಯ ಇರಬೇಕು. ಆ ನಿಟ್ಟಿನಲ್ಲಿ ನಾವು ಸೌಲಭ್ಯ ಕಲ್ಪಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಹೇಳಿದರು.

ಬೆಂಗಳೂರಿನ ಸಾಯಿ ಸ್ಪೋರ್ಟ್ ಸೆಂಟರ್ ನಲ್ಲಿ 330 ಹಾಸಿಗೆಯ ಕ್ರೀಡಾ ವಸತಿ ನಿಲಯ ಮತ್ತು ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದರು.

ಸಾಯಿ ಸ್ಪೋರ್ಟ್ ಸೆಂಟರ್ ಗೆ ಬಂದಿದ್ದಕ್ಕೆ ಖುಷಿ ಆಗಿದೆ.  ಸ್ವಚ್ಛತೆ ಹಾಗೂ ಸುಂದರತೆ ಮುಖ್ಯ. ಈ ಕೇಂದ್ರದಲ್ಲಿ ಏನೇನು ಕೆಲಸ ಆಗಬೇಕಿತ್ತು, ಅದನ್ನ ಪೂರೈಸಿದ್ದೇವೆ. ಬೇಡಿಕೆ ಇತ್ತು ಅದನ್ನು ನೀಡಿದ್ದೇವೆ. ಕ್ರೀಡೆಗೆ ಹೆಚ್ಚು ಒತ್ತು ನೀಡಿವುದು ನಮ್ಮ ಕರ್ತವ್ಯ. ಕ್ರೀಡಾಪಟುಗಳು ನಮ್ಮ ದೇಶದ ಆಸ್ತಿ, ನಮ್ಮ ಹೆಮ್ಮೆ. ದೇಶದಲ್ಲಿ ಸಾಕಷ್ಟು ಕ್ರೀಡಾ ಕೇಂದ್ರ ಇದೆ. ಕೆಲವೆಡೆ ಗುಣಮಟ್ಟ ಕಡಿಮೆ ಇದೆ. ಎಲ್ಲ ಕೇಂದ್ರ ವಿಶ್ವದ ಯಾವುದೇ ಕೇಂದ್ರಕ್ಕಿಂತ ಕಡಿಮೆ ಇರಬಾರದು. ಎಲ್ಲ ಮೂಲಸೌಕರ್ಯ ಗುಣಮಟ್ಟದ್ದಾಗಿರಬೇಕು. ತ್ರಿ ಸ್ಟಾರ್ ಹೋಟೆಲ್ ನ ಗುಣಮಟ್ಟದ ಕ್ರೀಡಾ ವಸತಿ ನಿಲಯ ಮೂಲಸೌಕರ್ಯ ಇರಬೇಕು. ಪ್ರೊಪೆಷನಲ್ ಮ್ಯಾನೆಜ್ ಮೆಂಟ್ ಇರಬೇಕು. ಅದಕ್ಕಾಗಿ ಟೆಂಡರ್ ಕರೆದು ಮ್ಯಾನೇಜ್ ಮೆಂಟ್ ವ್ಯವಸ್ಥೆ ಮಾಡುತ್ತೇವೆ ಎಂದರು.

ಇದನ್ನೂ ಓದಿ:ಎಸ್ಸೆಸ್ಸೆಲ್ಸಿ ಪರೀಕ್ಷೆ ಅವಕಾಶ: ಆರ್ ಟಿಇ ಶುಲ್ಕ ಮರುಪಾವತಿ ನಿಯಮ ಸಡಿಲಿಕೆಗೆ ಸಚಿವರ ಸೂಚನೆ

ಕ್ರೀಡಾಪಟುಗಳಿಗೆ ಯಾವ ರೀತಿಯ ಆಹಾರದ ಅಗತ್ಯವಿದೆಯೋ ಅದನ್ನು ನೀಡುವ ವ್ಯವಸ್ಥೆ ಆಗಬೇಕು. ನಾವು ಅಂದುಕೊಂಡಷ್ಟು ವೇಗವಾಗಿ ಎಲ್ಲ ಸಾಧ್ಯವಿಲ್ಲ. ಆದರೂ ವ್ಯವಸ್ಥೆ ಮಾಡುತ್ತೇವೆ. ಸಾಯಿ ಕ್ರೀಡಾಕೇಂದ್ರದಲ್ಲಿ ವಿವಿಧ ಕ್ರೀಡೆಗೆ ತರಬೇತಿ ನೀಡಲಾಗ್ತಿದೆ. ವಿಶೇಷವಾಗಿ ಓಲಂಪಿಕ್ ಗೆ ತೆರಳುತ್ತಿರುವ ಕ್ರೀಡಾಪಟುಗಳಿಗೆ, ವಿಶ್ವದ ಶ್ರೇಷ್ಠ ತರಬೇತುದಾರರನ್ನು ನೀಡಲು ನಾವು ಸಿದ್ದ. ಭಾರತೀಯ ತರಬೇತುದಾರರೇ ವಿಶ್ವಮಟ್ಟದ ತರಬೇತುದಾರರಾಗಿ ರೂಪುಗೊಳ್ಳಬೇಕು. ವಿದೇಶಿ ಕೋಚ್ ಗಳಂತೆ ಭಾರತೀಯ ಕೋಚ್ ಗಳಿಗೂ ಉತ್ತಮ ವೇತನ ನೀಡುತ್ತೇವೆ. ಇಂದಿನ ಶ್ರೇಷ್ಠ ಕ್ರೀಡಾಪಟುಗಳು ಮುಂದೆ ಕೋಚ್ ಆಗಬೇಕು. ಮೊದಲಿನಂತೆ ಸಹಾಯಕ ಕೋಚ್ ಗೆ ಭಡ್ತಿ ಸಿಗಲು ತಡವಾಗೋದಿಲ್ಲ. ನಮ್ಮ ದೇಶದಲ್ಲಿ ಸ್ಪೋರ್ಟ್ಸ್ ಸೈನ್ಸ್ ಮೊದಲಿನಿಂದಲೂ ಇದೆ. ಆದರೆ ಏನು ಪ್ರಯೋಜನವಾಗಿಲ್ಲ. ಈಗ ಅದಕ್ಕೆ ಹೆಚ್ಚಿನ ಶಕ್ತಿ ನೀಡುತ್ತಿದ್ದೇವೆ. ಪ್ರತಿ ರಾಜ್ಯ ಒಂದು ಕ್ರೀಡೆಗೆ ಪ್ರಾಮುಖ್ಯತೆ ನೀಡಬೇಕು. ಇದಕ್ಕೆ ಕೇಂದ್ರ ಸರ್ಕಾರ ಸಹಾಯ ಮಾಡತ್ತದೆ. ಒಂದು ರಾಜ್ಯ ಒಂದು ದೇಶವಾಗಿ ಕೆಲಸ ಮಾಡಿದರೆ ನಾವು ಒಲಂಪಿಕ್ ನಲ್ಲಿ ಪದಕ ಗೆಲ್ಲಬಹುದು. ಕೇವಲ ಭಾಷಣ ಮಾಡೋದ್ರಿಂದ ಪದಕ ಗೆಲ್ಲಲು ಸಾಧ್ಯವಿಲ್ಲ. ಅದಕ್ಕೆ ಪರಿಶ್ರಮ ಮುಖ್ಯ ಎಂದು ಕೇಂದ್ರ ಸಚಿವರು ಹೇಳಿದರು.

ಕಳೆದ ಎರಡು ಏಷ್ಯನ್ ಗೇಮ್ಸ್ ನಲ್ಲಿ ಕಬ್ಬಡ್ಡಿಯಲ್ಲಿ ಭಾರತ ಬಂಗಾರ ಪದಕ ಗೆದ್ದಿಲ್ಲ. ಈ ಬಾರಿ ಬಂಗಾರದ ಪದಕ ಗೆಲ್ಲಲೇಬೇಕು. ಆ ನಿಟ್ಟಿನಲ್ಲಿ ಶ್ರಮಿಸಿ ಎಂದು ಹೇಳಿದ್ದೇನೆ. ಕ್ರೀಡಾಪಟುಗಳು ಸದಾ ಖುಷಿಯಿಂದ ಇರಬೇಕು. ಕ್ರೀಡೆಯಲ್ಲಿ ಸೋಲುಗೆಲುವು ಸಹಜ. ಆದರೆ ಜೀವನದಲ್ಲಿ ಎಂದೂ ಕ್ರೀಡಾಪಟುಗಳು ಸೋಲಬಾರದು, ದುಖಿಃತರಾಗಬಾರದು ಎಂದು ಸಚಿವ ಕಿರಣ್ ರಿಜಿಜು ಹೇಳಿದರು.

ಮುಂದಿನ ನಾಲ್ಕು ತಿಂಗಳಲ್ಲಿ ಇನ್ನೂ ಸಾಕಷ್ಟು ಕ್ರೀಡಾಪಟುಗಳು ಟೋಕಿಯೋ ಓಲಂಪಿಕ್ ಗೆ ಅರ್ಹತೆ ಪಡೆಯಲು ಅವಕಾಶ ಇದೆ. ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಿಗೆ ಎಲ್ಲ ವ್ಯವಸ್ಥೆ ನೋಡಿಕೊಳ್ಳಲು ತಾಂತ್ರಿಕ ತಂಡ ಇರತ್ತೆ. ಕ್ರೀಡಾ ಕ್ಷೇತ್ರದಲ್ಲಿ ಭಾರತ ಉತ್ತಮ ಸ್ಥಾನಕ್ಕೆ ತಲುಪಬೇಕು. 2028 ರಲ್ಲಿ ಅಮೇರಿಕಾದ ಲಾಸ್ ಎಂಜಲೀಸ್ ಓಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಅದಕ್ಕೆ ನಾವು ಸಂಪೂರ್ಣ ಸಿದ್ಧತೆಯನ್ನ ಈಗಿನಿಂದಲೆ ಶುರುಮಾಡಬೇಕು. ಪದಕ ಪಟ್ಟಿಯಲ್ಲಿ ಭಾರತ ಟಾಪ್ 10 ರ ಒಳಗೆ ಇರಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ:ಕರ್ನಾಟಕ ಚಾಂಪಿಯನ್‌ ಕರ್ನಾಟಕ ಚಾಂಪಿಯನ್‌

ಇದಕ್ಕು ಮುನ್ನ ಮಾತನಾಡಿದ ಯುವ ಸಬಲೀಕರಣ ಮತ್ತು ಕ್ರೀಡೆ ಸಚಿವ ಡಾ. ನಾರಾಯಣಗೌಡ, ಕೇಂದ್ರ ಕ್ರೀಡಾ ಸಚಿವರ ಆಗಮನದಿಂದ ನಮಗೆ ಇನ್ನಷ್ಟು ಹುರುಪು ಬಂದಿದೆ. ನಿನ್ನೆಯಷ್ಟೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಒಳಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕೇಂದ್ರ ಸಚಿವರ ಜೊತೆಗೂಡಿ ರಾಜ್ಯದಲ್ಲಿ ಕ್ರೀಡೆಗೆ ಹೆಚ್ಚಿನ ನೆರವು ನೀಡುತ್ತೇವೆ. 2022 ರಲ್ಲಿ ಖೇಲೊ ಇಂಡಿಯಾ ಅಂತಾರಾಜ್ಯ ವಿವಿ ಗಳ ಕ್ರೀಡಾಕೂಟ ಇದೆ. ಬೆಂಗಳೂರಿನಲ್ಲಿ ಈ ಕ್ರೀಡಾಕೂಟ ನಡೆಯುತ್ತಿದೆ. ರಾಜ್ಯ ಸರ್ಕಾರ ಅದಕ್ಕೆ ಬೇಕಾದ ಎಲ್ಲ ಸಹಕಾರ ನೀಡಲಿದೆ. ಓಲಂಪಿಕ್ ನಲ್ಲಿ ಕೂಡ ನಮ್ಮ ರಾಜ್ಯದಿಂದ ಸಾಕಷ್ಟು ಕ್ರೀಡಾಪಟುಗಳು ಭಾಗವಹಿಸಿ, ಸಾಧನೆ ಮಾಡುತ್ತಾರೆ ಎಂಬ ನಿರೀಕ್ಷೆ ಇದೆ. ಒಲಂಪಿಕ್ ಗೆ ಅರ್ಹತೆ ಪಡೆಯಲು ಇನ್ನೂ ನಾಲ್ಕು ತಿಂಗಳು ಸಮಯವಿದ್ದು,  ಸಾಕಷ್ಟು ಕ್ರೀಡಾಪಟುಗಳು ಅರ್ಹತೆ ಪಡೆದು, ನಮ್ಮ ರಾಜ್ಯಕ್ಕೆ ದೇಶಕ್ಕೆ ಕೀರ್ತಿ ತರುತ್ತಾರೆ ಎಂಬ ಭರವಸೆ ಇದೆ ಎಂದು ಅವರು ಹೇಳಿದರು.

ಬಿಲಿಯಡ್ಸ್ ವಿಶ್ವ ಚಾಂಪಿಯನ್ ಪಂಕಜ್ ಆಡ್ವಾನಿ, ಸಾಯಿ ಸ್ಪೋರ್ಟ್ಸ್ ನ ಮುಖ್ಯಸ್ಥರು, ಇಲಾಖೆಯ ಅಧಿಕಾರಿಗಳು, ಭಾರತೀಯ ಹಾಕಿ ತಂಡದ ನಾಯಕ ಮನ್ ಪ್ರೀತ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ಪೊಲೀಸರು ತಪ್ಪಿತಸ್ಥರಲ್ಲ ಎಂದ ಸರ್ಕಾರ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ‘ಪೊಲೀಸರು ತಪ್ಪಿತಸ್ಥರಲ್ಲ’ ಎಂದ ಸರ್ಕಾರ

ಪಲ್ಟಿಯಾಗಿ ಕಾಲುವೆಗೆ ಬಿದ್ದ ಕಾರು: ಸ್ಥಳದಲ್ಲೇ ನಾಲ್ವರ ಸಾವು

ಪಲ್ಟಿಯಾಗಿ ಕಾಲುವೆಗೆ ಬಿದ್ದ ಕಾರು: ಸ್ಥಳದಲ್ಲೇ ನಾಲ್ವರ ಸಾವು

100 ಕೋಟಿ ಡೋಸ್‌: ಪಾರಂಪರಿಕ ತಾಣಗಳಲ್ಲಿ ತ್ರಿವರ್ಣ ಬೆಳಕಿನ ಚಿತ್ತಾರ

100 ಕೋಟಿ ಡೋಸ್‌: ಪಾರಂಪರಿಕ ತಾಣಗಳಲ್ಲಿ ತ್ರಿವರ್ಣ ಬೆಳಕಿನ ಚಿತ್ತಾರ

1

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದ ಭಟ್ರು ಟೀಮ್ : ಶೀಘ್ರದಲ್ಲೇ ಬಾಕಿ ಸುದ್ದಿ

ಯಾರು ಹೊಣೆ? ಆಟೋ ಬಾಡಿಗೆ 100 ರೂ., ತೆತ್ತ ದಂಡ 6000 ರೂ.: ಆಟೋ ಚಾಲಕನ ನತದೃಷ್ಟ ಕಥೆಯಿದು

ಯಾರು ಹೊಣೆ? ಆಟೋ ಬಾಡಿಗೆ 100 ರೂ., ತೆತ್ತ ದಂಡ 6000 ರೂ.: ಆಟೋ ಚಾಲಕನ ನತದೃಷ್ಟ ಕಥೆಯಿದು

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ಪೊಲೀಸರು ತಪ್ಪಿತಸ್ಥರಲ್ಲ ಎಂದ ಸರ್ಕಾರ

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ‘ಪೊಲೀಸರು ತಪ್ಪಿತಸ್ಥರಲ್ಲ’ ಎಂದ ಸರ್ಕಾರ

siddaramaiah

ಯಾವ ಸಾಧನೆಗೆ 100 ಕೋಟಿ ಲಸಿಕೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ?

ಇನ್‌ವೆಸ್ಟ್‌ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ

ಇನ್‌ವೆಸ್ಟ್‌ ಕರ್ನಾಟಕ: 10 ಲಕ್ಷ ಕೋ.ರೂ. ಹೂಡಿಕೆ ನಿರೀಕ್ಷೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಶೀಘ್ರವೇ ರಾಜ್ಯಾದ್ಯಂತ ಹಾಲಿಗೆ ಏಕರೂಪ ದರ

ಶೀಘ್ರವೇ ರಾಜ್ಯಾದ್ಯಂತ ಹಾಲಿಗೆ ಏಕರೂಪ ದರ

MUST WATCH

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

ಹೊಸ ಸೇರ್ಪಡೆ

Anarchy if the police stop duty

ಪೊಲೀಸರು ಕರ್ತವ್ಯ ನಿಲ್ಲಿಸಿದರೆ ಅರಾಜಕತೆ

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

ಸರಕಾರದ ನಿರ್ಲಕ್ಷದಿಂದಾಗಿ 50 ಲಕ್ಷ ಜನರು ಕೋವಿಡ್ ದಿಂದಾಗಿ ಮೃತಪಟ್ಟಿದ್ದಾರೆ: ಸಿದ್ದರಾಮಯ್ಯ

police14

ಕಾನೂನು ಸುವ್ಯವಸ್ಥೆಗೆ ಸಹಕಾರ ನೀಡಿ

police14

ಪೊಲೀಸರು-ಸೈನಿಕರು ದೇಶದ ಕಣ್ಣುಗಳಿದ್ದಂತೆ

ತೆಪ್ಪೋತ್ಸವ, ದೇವಿಗೆ ತೀರ್ಥ ಸ್ನಾನ, udayavanipaper, kannadanews,

ತೆಪ್ಪೋತ್ಸವ ಬದಲು ದೇವಿಗೆ ತೀರ್ಥ ಸ್ನಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.