ಧಾರವಾಹಿ ದೃಶ್ಯ ಅನುಕರಣೆ!; ಬೆಂಕಿಯಲ್ಲಿ ಬೆಂದ ಬಾಲಕಿ 

Team Udayavani, Nov 29, 2017, 2:57 PM IST

1-a.jpg

 ದಾವಣಗೆರೆ : ಸಣ್ಣ ವಯಸ್ಸಿನ ಮಕ್ಕಳಿಗೆ ಟಿವಿ, ಮಾಧ್ಯಮಗಳಲ್ಲಿ ಬರುವ ಕೆಲ ದೃಶ್ಯಗಳು ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತದೆ ಎನ್ನುವುದಕ್ಕೆ ಈ ದುರಂತ ಸಾಕ್ಷಿ. ಧಾರಾವಾಹಿಯೊಂದರಲ್ಲಿ ಬೆಂಕಿ ಹಚ್ಚಿಕೊಳ್ಳುವ ದೃಶ್ಯ ನೋಡಿ  7 ವರ್ಷ ದ ಬಾಲಕಿಯೊಬ್ಬಳು ಬಟ್ಟೆಗೆ ಬೆಂಕಿ ಹಚ್ಚಿಕೊಂಡು  ಬೆಂದು ನರಳಿ  ನರಳಿ ದಾರುಣ ಅಂತ್ಯಕಂಡ ಘಟನೆ ಹರಿಹರದಲ್ಲಿ ನವೆಂಬರ್‌ 11 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 

ಹರಿಹರದ ಆಶ್ರಯ ಕಾಲೋನಿಯ ಮಂಜುನಾಥ ಮತ್ತು ಚೈತ್ರಾ ದಂಪತಿ ಯ ಪುತ್ರಿ ಪ್ರಾರ್ಥನಾ ಎಂಬಾಕೆ ಖಾಸಗಿ ಕನ್ನಡ  ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಭಯಾನಕ ದೃಶ್ಯಗಳುಳ್ಳ ಧಾರಾವಾಹಿಯನ್ನು ನೋಡಿ ದೃಶ್ಯವನ್ನು ಅನುಕರಿಸಿ ಬೆಂಕಿ ಹಚ್ಚಿಕೊಂಡಿದ್ದಾಳೆ. ತಂಗಿಯನ್ನು ಬೆಂಕಿಯಲ್ಲಿ ಆಡುವ ಬಾ ಎಂದೂ  ಕರೆದಿದ್ದಾಳೆ. ಆದರೆ ಹೆದರಿದ 5 ವರ್ಷ ಪ್ರಾಯದ ತಂಗಿ ಮನೆಯಿಂದ ಹೊರಗೆ ಹೋಗಿದ್ದಾಳೆ.

ಬೆಂಕಿ ಹಚ್ಚಿಕೊಂಡ ವಿಚಾರ ತಿಳಿದ ತಕ್ಷಣ ಮನೆಯೊಳಗೆ ದೌಡಾಯಿಸಿದ ಅಜ್ಜಿ ಮತ್ತು ಸ್ಥಳೀಯರು ಪ್ರಾರ್ಥನಾಳನ್ನು ರಕ್ಷಿಸಿ ಹರಿಹರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ  ದಾವಣಗೆರೆಯ  ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ, ಆದರೆ ಚಿಕಿತ್ಸೆ ಫ‌ಲಕಾರಿಯಾಗದೆ ಮರುದಿನ ಸಾವನ್ನಪ್ಪಿದ್ದಾಳೆ. 

ಘಟನೆ ನಡೆಯುವ ವೇಳೆ ತಂದೆ ತಾಯಿಯಿಬ್ಬರೂ ಮನೆಯಲ್ಲಿರಲಿಲ್ಲ. ಅಜ್ಜಿ ಮಾತ್ರ ಇದ್ದರು ಎಂದು ವರದಿಯಾಗಿದೆ. 

ಪ್ರಾರ್ಥನಾ ಪೋಷಕರು ‘ಮುಂದೆ ಯಾವ ಮಕ್ಕಳು ಈ ರೀತಿ ಮಾಡಿಕೊಳ್ಳಬಾರದು, ಈ ಬಗ್ಗೆ ಅರಿವು ಮೂಡಬೇಕು, ಪೋಷಕರು ಎಚ್ಚರಿಕೆ ವಹಿಸಬೇಕು’ ಎನ್ನುವ ಸದುದ್ದೇಶದೊಂದಿಗೆ ಈ ವಿಚಾರವನ್ನು ಮಾಧ್ಯಮಗಳಿಗೆ ಬಹಿರಂಗ ಪಡಿಸಿದ್ದಾರೆ. 

 ಸೋಮವಾರದಿಂದ ಶುಕ್ರವಾರದ ವರೆಗೆ ರಾತ್ರಿ 8 ರಿಂದ 9 ರ ವರೆಗೆ ಪ್ರಸಾರವಾಗುತ್ತಿದ್ದ ಧಾರಾವಾಹಿಯನ್ನು ಮೃತ ಬಾಲಕಿ ನಿತ್ಯವೂ ತಪ್ಪದೇ ವೀಕ್ಷಿಸುತ್ತಿದ್ದಳು ಎಂದು ತಿಳಿದು ಬಂದಿದೆ. 

ಟಾಪ್ ನ್ಯೂಸ್

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.