ಕೆಪಿಟಿಸಿಎಲ್ ಅಕ್ರಮದ ಮಾಹಿತಿ ಲಭ್ಯವಾಗಿಲ್ಲ: ಕೆಇಎ ಸ್ಪಷ್ಟನೆ
Team Udayavani, Aug 23, 2022, 10:45 PM IST
ಬೆಂಗಳೂರು: ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂಥ್ ಉಪಯೋಗಿಸಿ ಅಕ್ರಮ ನಡೆಸಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.
ಪ್ರಾಧಿಕಾರದ ವತಿಯಿಂದ ಆ.7ರಂದು ನಡೆಸಿದ ಪರೀಕ್ಷೆಯಲ್ಲಿ ಒಂದು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಯೊಬ್ಬ ಸ್ಮಾರ್ಟ್ ವಾಚ್‌ಅನ್ನು ಬಳಸಿ ಪ್ರಶ್ನೆಪತ್ರಿಕೆಯ ಫೋಟೋವನ್ನು ತೆಗೆದುಕೊಂಡಿದ್ದು, ಮತ್ತೊಂದು ಕೇಂದ್ರದಲ್ಲಿ ಪ್ರಾಂಶುಪಾಲರ ಮಗ ಪತ್ರಕರ್ತನ ಸೋಗಿನಲ್ಲಿ ಬಂದು ಪ್ರಶ್ನೆಪತ್ರಿಕೆಯ ಫೋಟೋ ತೆಗೆದುಕೊಂಡಿರುವುದಾಗಿ ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆಯಲಾಗಿದೆ.
ಆದರೆ, ಈ ವರೆಗೆ ಬ್ಲೂಟೂಥ್ ಉಪಯೋಗಿಸಿ ಪರೀಕ್ಷೆಯಲ್ಲಿ ಅಕ್ರಮವೆಸಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಾಧಿಕಾರವು ಆಂತರಿಕವಾಗಿ 12 ವರ್ಷನ್ ವಿವಿಧ ಆವೃತ್ತಿಯಲ್ಲಿ ಬಹು ಆಯ್ಕೆ ಉತ್ತರಗಳ ಮಾದರಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಲಾಗಿರುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ