ಡಿಕೆಶಿ ತಾಯಿ ವಿರುದ್ಧದ ನೋಟಿಸ್‌ಗೆ ಮಧ್ಯಂತರ ತಡೆ
Team Udayavani, Jun 29, 2019, 3:03 AM IST
ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮ ಅವರಿಗೆ ಸೇರಿದ್ದ ಆಸ್ತಿಯನ್ನು ಜಪ್ತಿ ಮಾಡಲು ಆದಾಯ ತೆರಿಗೆ ಇಲಾಖೆ ಜಾರಿ ಮಾಡಿದ್ದ ನೋಟಿಸ್‌ಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಆದಾಯ ತೆರಿಗೆ ಇಲಾಖೆಯ ನೋಟಿಸ್ ಪ್ರಶ್ನಿಸಿ ಗೌರಮ್ಮ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ಆಸ್ತಿ ಜಪ್ತಿ ಕುರಿತು ನೋಟಿಸ್ ಹಾಗೂ ಆ ಕುರಿತ ಮುಂದಿನ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿತು. ಅಲ್ಲದೆ, ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಆದಾಯ ತೆರಿಗೆ ಇಲಾಖೆಯ ಉಪ ಆಯುಕ್ತರು ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.
ಸಚಿವ ಡಿ.ಕೆ. ಶಿವಕುಮಾರ್ ತಮ್ಮ ತಾಯಿ ಗೌರಮ್ಮ ಹೆಸರಿನಲ್ಲಿ ನೂರಾರು ಕೋಟಿ ಬೇನಾಮಿ ಆಸ್ತಿ ಹೊಂದಿದ್ದಾರೆಂಬ ಕಾರಣ ನೀಡಿ ಗೌರಮ್ಮ ಅವರ ಆಸ್ತಿ ಜಪ್ತಿಗೆ ಐಟಿ ಇಲಾಖೆ ಮುಂದಾಗಿತ್ತು. ಆ ಸಂಬಂಧ ಐಟಿ ಇಲಾಖೆಯ ಉಪ ಆಯುಕ್ತರು “ಬೇನಾಮಿ ಆಸ್ತಿ ವಹಿವಾಟು ತಡೆ ಕಾಯ್ದೆ 1988ರ ಸೆಕ್ಷನ್ 21 (10) ಅನುಸಾರ ಗೌರಮ್ಮ ಅವರಿಗೆ ಮೇ 8ರಂದು ನೋಟಿಸ್ ಜಾರಿಗೊಳಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
MUST WATCH
ಹೊಸ ಸೇರ್ಪಡೆ
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ