ಕೆಎಟಿ ಆದೇಶಕ್ಕೆ ಮಧ್ಯಂತರ ತಡೆ
Team Udayavani, May 15, 2020, 8:11 AM IST
ಬೆಂಗಳೂರು: ಮೋಟಾರು ವಾಹನ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಇಬ್ಬರು ಅಭ್ಯರ್ಥಿಗಳ ಉಮೇದುವಾರಿಕೆಯನ್ನು ತಿರಸ್ಕರಿಸಿದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ಕ್ರಮವನ್ನು ರದ್ದುಪಡಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಕೆಎಟಿ ಆದೇಶ ಪ್ರಶ್ನಿಸಿ ವಿ.ಆರ್.ಲೋಕೇಶ್ ಸೇರಿ ಮೋಟಾರು ವಾಹನ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆಯಾಗಲಿರುವ 11 ಮಂದಿ ಸಂಭಾವ್ಯ ಅಭ್ಯರ್ಥಿಗಳು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ವಿ. ನಾಗರತ್ನ ಮತ್ತು ನ್ಯಾ.ಎಂ.ಜಿ. ಉಮಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ. ಅಲ್ಲದೇ ಪ್ರತಿವಾದಿಗಳಾದ ಕರ್ನಾಟಕ ಲೋಕಸೇವಾ ಆಯೋಗ, ಸಾರಿಗೆ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮೇ 27ಕ್ಕೆ ಮುಂದೂಡಿತು.
ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಎ.ಎಸ್. ಪೊನ್ನಣ್ಣ ವಾದ ಮಂಡಿಸಿದರು. ಖಾಲಿಯಿದ್ದ 150 ಮೋಟಾರು ವಾಹನಗಳ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ 2016ರ ಫೆ.4ರಂದು ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್ಸಿ) ಅರ್ಜಿ ಆಹ್ವಾನಿಸಿತ್ತು. 2019ರ ಜುಲೈ 4ರಂದು ಸಂಭಾವ್ಯ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ನಂತರ ಗೋಕುಲ್ ದಾಸ್ ಹಾಗೂ ವೀರಣ್ಣಗೌಡ ಪಾಟೀಲ್ ಅವರ ಅರ್ಜಿಗಳನ್ನು ಕೆಪಿಎಸ್ಸಿ ತಿರಸ್ಕರಿಸಿತ್ತು. ಈ ಕ್ರಮ ಪ್ರಶ್ನಿಸಿ ಅವರು ಕೆಎಟಿ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ