ಅ.12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ: ಸಿಎಂ ಯಡಿಯೂರಪ್ಪ ಘೋಷಣೆ
Team Udayavani, Oct 11, 2020, 2:33 PM IST
ಬೆಂಗಳೂರು: ಶಿಕ್ಷಕರ ಮಧ್ಯಂತರ ರಜೆಯನ್ನು ಕಡಿತಗೊಳಿಸಿದ್ದ ರಾಜ್ಯ ಸರ್ಕಾರದ ನಡೆಗೆ ವ್ಯಾಪಕ ವಿರೋಧ ಕಂಡುಬಂದ ಹಿನ್ನಲೆಯಲ್ಲಿ ಸರ್ಕಾರ ಈ ಆದೇಶವನ್ನು ಹಿಂಪಡೆದಿದೆ. ಅ.12ರಿಂದ 30ರವರೆಗೆ ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ನೀಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.
ಈ ಕುರಿತು ಸಿಎಂ ಬಿಎಸ್ ವೈ ಇಂದು ಆದೇಶ ನೀಡಿದ್ದು, ಕೋವಿಡ್ ಸೋಂಕಿನ ಹಿನ್ನಲೆಯಲ್ಲಿ ಸದ್ಯ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ ಎಂದಿದ್ದಾರೆ.
ಶಿಕ್ಷಕರ ಮಧ್ಯಂತರ ರಜೆಯನ್ನು ಕಡಿತಗೊಳಿಸಿದ್ದ ರಾಜ್ಯ ಸರ್ಕಾರದ ನಡೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಸರಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ