ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಅವಕಾಶ
Team Udayavani, Aug 22, 2022, 5:45 AM IST
ಬೆಂಗಳೂರು: ಮತದಾರರು ವೋಟರ್ ಹೆಲ್ಪ್ ಲೈನ್ ಆ್ಯಪ್ ಮೂಲಕ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಕೊಳ್ಳಲು ಚುನಾವಣ ಆಯೋಗ ಅವಕಾಶ ಕಲ್ಪಿಸಿದೆ.
ಎರಡು ಕಡೆ ಮತದಾರರ ಗುರುತಿನ ಚೀಟಿ ಹೊಂದಿರುವವರ ಪತ್ತೆಗಾಗಿ ಚುನಾವಣ ಆಯೋಗ ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಸಂಖ್ಯೆ ಜೋಡಣೆಗೆ ಮುಂದಾಗಿದೆ. ಅದಕ್ಕಾಗಿ ಮತದಾರರು ಚುನಾವಣ ಅಧಿಕಾರಿಗಳಿಗೆ ತಮ್ಮ ಆಧಾರ್ ಸಂಖ್ಯೆಯನ್ನು ನೀಡಬೇಕು. ಇದು ಕಡ್ಡಾಯವಲ್ಲದಿದ್ದರೂ, ಆಯೋಗಕ್ಕೆ ಯಾವುದಾದರೂ ಅರ್ಜಿ ಸಲ್ಲಿಸುವಾಗ ಆಧಾರ್ ಸಂಖ್ಯೆ ನೀಡಬೇಕಿದೆ. ಒಂದು ವೇಳೆ ಅರ್ಜಿ ಸಲ್ಲಿಸಿ ಆಧಾರ್ ಸಂಖ್ಯೆ ಜೋಡಣೆ ಮಾಡಿಕೊಳ್ಳಲಾಗದವರು ಚುನಾವಣ ಆಯೋಗದ ವೋಟರ್ ಹೆಲ್ಪ್ ಲೈನ್ ಮೊಬೈಲ್ ಆ್ಯಪ್ ಮೂಲಕ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಕೊಳ್ಳಬಹುದಾಗಿದೆ.
ತಮ್ಮ ಮೊಬೈಲ್ನಲ್ಲಿ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಎಲೆಕ್ಟ್ರೋಲ್ ಅಥೆಂಟಿಕೇಷನ್ ಫಾರ್ಮ್ 6ಬಿ ಆಯ್ಕೆ ಮಾಡಿಕೊಳ್ಳಬೇಕಿದೆ. ಅನಂತರ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಒಟಿಪಿ ಬರಲಿದ್ದು, ಅದನ್ನು ಆ್ಯಪ್ನಲ್ಲಿ ನಮೂದಿಸಬೇಕು. ಅನಂತರ ಮತದಾರರ ಗುರುತಿನ ಚೀಟಿಯ ಸಂಖ್ಯೆ ನಮೂದಿಸಿ ರಾಜ್ಯ ಆಯ್ಕೆ ಮಾಡಬೇಕು. ಬಳಿಕ ಆಧಾರ್ ಸಂಖ್ಯೆ, ಮತ್ತೊಮ್ಮೆ ಮೊಬೈಲ್ ಸಂಖ್ಯೆ, ನಗರವನ್ನು ಆಯ್ಕೆ ಮಾಡಿದರೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್