ಜನತಾ ಜಲಧಾರೆ: ಬ್ರಹ್ಮ ಕಲಶ ಪ್ರತಿಷ್ಠಾಪನೆ

Team Udayavani, May 26, 2022, 9:07 PM IST

ಜನತಾ ಜಲಧಾರೆ: ಬ್ರಹ್ಮ ಕಲಶ ಪ್ರತಿಷ್ಠಾಪನೆ

ಬೆಂಗಳೂರು: ಜನತಾ ಜಲಧಾರೆ ಗಂಗಾ ರಥಯಾತ್ರೆಯ ಪ್ರಮುಖ ಘಟ್ಟವಾಗಿರುವ ಬ್ರಹ್ಮ ಕಲಶ ಪ್ರತಿಷ್ಠಾಪನೆಯು ಗುರುವಾರ ಶಾಸ್ತ್ರೋಕ್ತವಾಗಿ ನೆರವೇರಿತು.

ಜೆಡಿಎಸ್‌ ರಾಜ್ಯ ಕಚೇರಿಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ  ರಾಜ್ಯದ ಎಲ್ಲ ಜೀವನದಿ ಹಾಗೂ ಉಪ ನದಿಗಳಿಂದ ಸಂಗ್ರಹಿಸಿದ ಪವಿತ್ರ ಗಂಗಾ ಜಲದ ಕಲಶ ಪ್ರತಿಷ್ಠಾಪನೆಯ ಮಹಾಪೂಜೆ  ಹಾಗೂ ಕಳಸ ಪ್ರತಿಷ್ಠಾಪನೆಯು ಪಂಡಿತ್‌ ಡಾ| ಭಾನುಪ್ರಕಾಶ್‌ ಶರ್ಮ ನೇತೃತ್ವದ ಪಂಡಿತರ ತಂಡದಿಂದ   ನಡೆಯಿತು. 10 ಅಡಿ ಎತ್ತರದ 500 ಲೀಟರ್‌ ನೀರು ತುಂಬಲಿರುವ ಕಲಶವನ್ನು ಪ್ರತಿಷ್ಠಾಪನೆ ಮಾಡಲಾಯಿತು. ಕಲಶಕ್ಕೆ ಮುಂದಿನ ಒಂದು ವರ್ಷ ಕಾಲ ನಿತ್ಯ ಗಂಗಾಪೂಜೆ ನಡೆಯುತ್ತದೆ.

ದೇಶದ ಏಳು ಮಹಾನದಿಗಳ ಹೆಸರಿನಲ್ಲಿ ಇಡಲಾಗಿದ್ದ ಹದಿನೈದು ಪುಟ್ಟ ಕಲಶಗಳಿಗೆ ಎಚ್‌.ಡಿ. ಕುಮಾರಸ್ವಾಮಿ ಅವರು  ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿದರು. ರಾಜ್ಯದ ಉದ್ದಗಲದಿಂದ ಸಂಗ್ರಹಿಸಲಾಗಿದ್ದ ಜಲವನ್ನು ಅದಕ್ಕೆ ತುಂಬಿಸಲಾಯಿತು.

ವಿಧಾನಪರಿಷತ್‌ ಸದಸ್ಯ ರಮೇಶ್‌ ಗೌಡ,   ಟಿ.ಎ. ಶರವಣ ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು.

ನೀರಾವರಿ ಯೋಜನೆ ಜಾರಿಗೆ ಸಂಕಲ್ಪ :

ಜನತಾ ಜಲಧಾರೆ ಹಾಗೂ ಬ್ರಹ್ಮ ಕಲಶ ಪ್ರತಿಷ್ಠಾಪನೆ ವೇಳೆ ರಾಜ್ಯದ ಎಲ್ಲ  ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಹಾಗೂ ಎಲ್ಲ ಜಿಲ್ಲೆಗಳಿಗೂ ಸಮಗ್ರ ನೀರಾವರಿ ಕಲಿಸುವ ಸಂಕಲ್ಪ ಮಾಡಲಾಯಿತು. ಅದಕ್ಕೆ ಶಕ್ತಿ ಕೊಡು ತಾಯಿ ಎಂದು ಗಂಗಾ ಮಾತೆಯನ್ನು ಪ್ರಾರ್ಥನೆ ಮಾಡಿಕೊಂದಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಐದು ವರ್ಷಗಳ ಪೂರ್ಣ ಪ್ರಮಾಣದ ಸ್ವತಂತ್ರ ಸರಕಾರ ನೀಡಿದರೆ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು ಎಂದರು.

ವಿಶೇಷ ಮಂಟಪ ಹಾಗೂ ಬ್ರಹ್ಮ ಕಳಸ:

ಕಳಸ ಪ್ರತಿಷ್ಠಾಪನೆ ಮಾಡಿರುವ ಮಂಟಪವನ್ನು ವಿಶೇಷವಾಗಿ ವಿನ್ಯಾಸ ಮಾಡಲಾಗಿದೆ. ಕರ್ನಾಟಕದ ಪರಂಪರೆಯನ್ನು ಬಿಂಬಿಸುವ ವಾಸ್ತುಶಿಲ್ಪ ಉಳ್ಳ ಮಂಟಪ ವಿಶೇಷ ಆಕರ್ಷಣೆಯಾಗಿದೆ. ಇಡೀ ಮಂಟಪವನ್ನು ಆವರಣ ಮಂಟಪ ಕಲಾ ಆರ್ಟ್‌ನ ಕಲಾವಿದರು ಸಿದ್ಧಪಡಿಸಿದ್ದಾರೆ. ಈ ಮಂಟಪದಲ್ಲಿ ನಿರಂತರವಾಗಿ ಜಪ, ಮಂತ್ರ, ಮಂಗಳ ನಾದ ಮೊಳಗುತ್ತಿರುತ್ತದೆ.

ಪವಿತ್ರ ಗಂಗಾಜಲವು ಸುಮಾರು ಒಂದು ವರ್ಷ ಕಾಲ ಈ  ಕಳಸದಲ್ಲಿ ಇರಲಿದೆ. ನೀರು ಕೆಡದಂತೆ ನೋಡಿಕೊಳ್ಳಲು ವಿಶೇಷ ಯುವಿ – ಓಜೋನೈಶನ್‌ ವ್ಯವಸ್ಥೆ ಮಾಡಲಾಗಿದೆ. ಇದು ಆಮ್ಲಜನಕಯುಕ್ತ ಆಗಿರುತ್ತದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.