ಜಂತಕಲ್ ಪ್ರಕರಣ: ಕುಮಾರಸ್ವಾಮಿ ಅರ್ಜಿ ತಿರಸ್ಕೃತ
Team Udayavani, Nov 8, 2017, 7:22 AM IST
ಬೆಂಗಳೂರು: ಜಂತಕಲ್ ಎಂಟರ್ ಪ್ರೈಸಸ್ ಕಂಪನಿಗೆ ಪರವಾನಗಿ ನೀಡಲು ಸಹಕರಿಸಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯ ಮಂತ್ರಿ ಎಚ್.ಡಿ ಕುಮಾರಸ್ವಾಮಿ, ಎಸ್‌ಐಟಿ ತನಿಖಾಧಿಕಾರಿಗಳ ಮುಂದೆ ಹಾಜರಾಗದಿರಲು ವಿನಾಯಿತಿ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ನಾನು ಅನಾರೋಗ್ಯದಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಎಸ್‌ಐಟಿ ತನಿಖಾಧಿಕಾರಿಗಳ ಮುಂದೆ 15 ದಿನಗಳಿಗೊಮ್ಮೆ ಹಾಜರಾಗಲು ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಈ ಷರತ್ತಿನಿಂದ ಸಡಿಲಿಕೆ ನೀಡುವಂತೆ ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅರ್ಜಿಯನ್ನು ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಬುರಗಿ ಸಂಚಾರಿ ಪೀಠದಿಂದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಎಸ್‌ಐಟಿ ಪರ ವಕೀಲರು ವಾದಿಸಿ, ಅರ್ಜಿದಾರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ. ತಮ್ಮ ದಿನನಿತ್ಯದ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ಪಕ್ಷದ ಸಭೆಗಳಲ್ಲೂ ಪಾಲ್ಗೊಳ್ಳುತ್ತಿದ್ದಾರೆ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವುದರಿಂದ ವಿಚಾರಣೆಗೊಳಪಡಿ ಬೇಕಿದೆ. ಹೀಗಾಗಿ ಅರ್ಜಿದಾರರ ಮನವಿ ಪರಿಗಣಿಸಬಾರದು ಎಂದು ಕೋರಿದರು.
ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ತನಿಖೆ ನಡೆಯುತ್ತಿದ್ದಾಗ ಷರತ್ತಿನ ವಿನಾಯಿತಿ ನೀಡಲು ಸಾಧ್ಯವಿಲ್ಲ. ಇನ್ನೂ ಮೂರು ತಿಂಗಳು ಷರತ್ತು ಪೂರೈಸಿ ಎಂದು ಸೂಚನೆ ನೀಡಿ, ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ