ಜೆಡಿಎಸ್ ದಲಿತ ಸಮಾವೇಶ ಇಂದು
Team Udayavani, Dec 13, 2017, 10:03 AM IST
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷ ಸಂಘಟನೆ ನಿಟ್ಟಿನಲ್ಲಿ ಸಮುದಾಯವಾರು ಸಮಾವೇಶಗಳಿಗೆ ಮೊರೆ ಹೋಗಿರುವ ಜೆಡಿಎಸ್ ತುಮಕೂರಲ್ಲಿ ಅಲ್ಪಸಂಖ್ಯಾತರ ಸಮಾವೇಶ ನಡೆಸಿದ ಬೆನ್ನಲ್ಲೇ ಬುಧವಾರ ದಲಿತರ ಸಮಾವೇಶ ಆಯೋಜಿಸಿದೆ. ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ರಾಜ್ಯದೆಲ್ಲೆಡೆಯಿಂದ 1 ಲಕ್ಷ ಜನರನ್ನು
ಸೇರಿಸುವ ಗುರಿ ಹೊಂದಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮಾವೇಶದಲ್ಲಿ ಪ್ರಧಾನ ಭಾಷಣ ಮಾಡಲಿದ್ದಾರೆ.
ಸಮಾವೇಶದ ಯಶಸ್ವಿಗಾಗಿ ಮಾಜಿ ಸಚಿವರಾದ ಬಿ.ಬಿ.ನಿಂಗಯ್ಯ, ಅಲ್ಕೋಡ್ ಹನುಮಂತಪ್ಪ, ಮಾಜಿ ಶಾಸಕ
ಡಾ| ಕೆ.ಅನ್ನದಾನಿ ಕಳೆದ ಒಂದು ತಿಂಗಳಿನಿಂದ ರಾಜ್ಯಾದ್ಯಂತ ಪೂರ್ವಭಾವಿ ಸಭೆಗಳನ್ನು ನಡೆಸಿ ಸಜ್ಜಾಗಿದ್ದಾರೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತ ಸಮುದಾಯಕ್ಕೆ ಕೈಗೊಳ್ಳಲಿರುವ ಕ್ರಮಗಳು ಹಾಗೂ ಈ ಹಿಂದೆ ಅಧಿಕಾರದಲ್ಲಿದ್ದಾಗ ರೂಪಿಸಿದ ಯೋಜನೆಗಳ ಕಿರು ಹೊತ್ತಿಗೆ ಸಹ ಸಿದ್ಧಪಡಿಸಲಾಗಿದೆ. ಅಧಿಕಾರಕ್ಕೆ ಬಂದರೆ ದಲಿತರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಘೋಷಿಸಿರುವ ಜೆಡಿಎಸ್, ದಲಿತ ಸಮುದಾಯದ ಅಭಿವೃದ್ಧಿ ನಿಟ್ಟಿನಲ್ಲಿ ಸಮಾವೇಶದಲ್ಲಿ ಮೂರು ನಿರ್ಣಯ ಕೈಗೊಳ್ಳುವ ಸಾಧ್ಯತೆಯೂ ಇದೆ
ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು